ಗ್ರಾಮೀಣ ಭಾಗದ ಸರ್ಕಾರಿ ಶಾಲೆ ಅಭಿವೃದ್ಧಿಗೊಳಿಸಲು ವರದಿ ರೂಪಿಸಲು ಸೂಚನೆ

blank

ಬೆಂಗಳೂರು: ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಶಾಲೆಗಳ ಅಭಿವೃದ್ಧಿ ಪಡಿಸಲು ಅಧ್ಯಯನ ನಡೆಸಿ ವರದಿ ನೀಡುವಂತೆ ಜಿಲ್ಲಾ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಆರ್‌ಡಿಪಿಆರ್) ಪ್ರಧಾನ ಕಾರ್ಯದರ್ಶಿ (ಪಂಚಾಯತ್‌ರಾಜ್) ಉಮಾ ಮಹದೇವನ್ ಸೂಚನೆ ನೀಡಿದ್ದಾರೆ.

ಆರ್‌ಡಿಪಿಆರ್ ಅಧಿನಿಯಮದಡಿ ಗ್ರಾ.ಪಂ.ಗಳ ಕಾರ್ಯಗಳಲ್ಲಿ ಶಾಲಾಭಿವೃದ್ಧಿಯೂ ಸೇರಿದೆ. ಅಲ್ಲದೆ, ಶಿಕ್ಷಣ ಹಕ್ಕು ಕಾಯ್ದೆ(ಆರ್‌ಟಿಇ) ಅಡಿಯಲ್ಲೂ ಸ್ಥಳೀಯ ಸಂಸ್ಥೆಗಳ ಜವಾಬ್ದಾರಿಯನ್ನು ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾ.ಪಂ.ಗಳ ಸ್ವಂತ ಸಂಪನ್ಮೂಲ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒದಗಿಸುವ ಶಾಸನ ಬದ್ಧ ಅನುದಾನ, ಜಲಜೀವನ್ ಮಿಷನ್, ಮಹಾತ್ಮಾಗಾಂಧಿ ನರೇಗಾ ಮುಂತಾದ ಯೋಜನೆಗಳ ಅನುದಾನವನ್ನು ಶಾಲಾಭಿವೃದ್ಧಿಗೆ ಬಳಸಿಕೊಳ್ಳಬಹುದಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲೂ ಚರ್ಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿ ಗ್ರಾಮ ಪಂಚಾಯಿತಿಗಳಿಂದ ತಮ್ಮ ವ್ಯಾಪ್ತಿಯ ಶಾಲೆಗಳ ಸ್ಥಿತಿಗತಿ ಅಧ್ಯಯನ ನಡೆಸಿ ವರದಿ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿ ಸಮಿತಿಗಳ ಅಧ್ಯಕ್ಷರು, ಶಿಕ್ಷಣ ಕಾರ್ಯಪಡೆ ಸದಸ್ಯರು ತಮ್ಮ ಅಧಿಕಾರಿಗಳೊಂದಿಗೆ ಕನಿಷ್ಠ ಮೂರು ತಿಂಗಳಿಗೊಮ್ಮೆ ತಮ್ಮ ವ್ಯಾಪ್ತಿಯ ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರು, ಮಕ್ಕಳು, ಪಾಲಕರು, ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ಸದಸ್ಯರೊಂದಿಗೆ ಚರ್ಚಿಸಿ ಶಾಲೆಗಳಲ್ಲಿ ಕೊರತೆ ಇರುವ ನಿವೇಶನ, ಹೊಸ ಕಟ್ಟಡ, ಕೊಠಡಿ, ಕಾಂಪೌಂಡ್ ನಿರ್ಮಾಣ, ಅವುಗಳ ದುರಸ್ತಿ ವಿದ್ಯುತ್ ಸಂಪರ್ಕ, ಕುಡಿಯುವ ನೀರು ಸಂಪರ್ಕ, ವಾಟರ್ ಫಿಲ್ಟರ್, ಶೌಚಾಲಯ, ಕೈ ತೋಟ, ಆಟದ ಸಲಕರಣೆ, ಕುರ್ಚಿ, ಬೆಂಚು, ಟೇಬಲ್‌ಗಳು ಸೇರಿದಂತೆ ಅಗತ್ಯವಿರುವ ಎಲ್ಲ ರೀತಿಯ ಮೂಲಸೌಕರ್ಯಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಬೇಕೆಂದು ಜಿಲ್ಲಾ ಕಾರ್ಯನಿರ್ವಹಣಾ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗಳು ಮತ್ತು ಗ್ರಾ.ಪಂ.ಗಳ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬಿಗ್​ಬಾಸ್​ನಲ್ಲಿ ಇಂದೇ ಎಲಿಮಿನೇಶನ್! ಮನೆಯಿಂದ ಹೊರಬಂದವರು ಇವರೇ ನೋಡಿ..

ರಸ್ತೆ ಮಧ್ಯೆಯೇ ದೊಡ್ಡ ಹೊಂಡ! ಕೇಜ್ರಿವಾಲ್ ನಾಡಿನ ಅವಸ್ಥೆ ಬಗ್ಗೆ ಟೀಕಿಸಿದ ಬಿಜೆಪಿ

ಆನ್​ಲೈನ್​ ಗೇಮ್​ನಲ್ಲಿ 40 ಸಾವಿರ ಕಳೆದುಕೊಂಡ ಬಾಲಕ! ಅಮ್ಮ ಬೈದಿದ್ದಕ್ಕೆ ಮನನೊಂದು ಆತ್ಮಹತ್ಯೆ

Share This Article

ಈ 3 ರಾಶಿಯ ಮಹಿಳೆಯರು ಪ್ರೀತಿಯಲ್ಲಿ ಎಂದಿಗೂ ಮೋಸ ಮಾಡುವುದಿಲ್ಲವಂತೆ! ನಿಮ್ಮ ರಾಶಿ ಯಾವುದು? Zodiac Signs

Zodiac Signs : ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು…

ಹವಾಮಾನ ಬದಲಾದ ತಕ್ಷಣ ಶೀತ & ಕೆಮ್ಮು ಬರುತ್ತದೆಯೇ?; ಪರಿಹಾರಕ್ಕೆ ಇಲ್ಲಿದೆ ಮನೆಮದ್ದು | Health Tips

ದೇಶಾದ್ಯಂತ ಹವಾಮಾನ ಬದಲಾಗುತ್ತಿದ್ದು ಈ ಬದಲಾಗುತ್ತಿರುವ ಹವಾಮಾನದಲ್ಲಿ ಶೀತ, ಜ್ವರ, ಜೀರ್ಣಕಾರಿ ಸಮಸ್ಯೆ, ಅಲರ್ಜಿ ಮತ್ತು…

ಮದುವೆಯ ಬಳಿಕ ಮಹಿಳೆಯರ ತೂಕ ಹೆಚ್ಚಾಗುವುದು ಏಕೆ?; ಇಲ್ಲಿದೆ ಅದರ ಹಿಂದಿನ ಕಾರಣ | Relationship

ಮದುವೆಯ ನಂತರ ಮಹಿಳೆಯರು ತೂಕ ಹೆಚ್ಚಾಗುವುದು ಸಾಮಾನ್ಯ. ಇದಕ್ಕೆ ಹಲವು ಕಾರಣಗಳಿರಬಹುದು. ಕೆಲವರು ಇದನ್ನು ಸೋಮಾರಿತನ…