ರಾಜ್ಯಪಾಲರಿಂದ ಪ್ರಜಾಪ್ರಭುತ್ವಕ್ಕೆ ಅವಮಾನ

750x450_359530-congress
Published on

ರಾಜಕೀಯ ರಹಿತ ರಾಜಧರ್ಮ ಪಾಲಿಸಬೇಕಾದ ರಾಜ್ಯಪಾಲರು ರಾಜಕೀಯ ದುರುದ್ದೇಶ ಪೂರಿತ ನಿರ್ಧಾರ ಕೈಗೊಳ್ಳುತ್ತಿರುವುದು ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ಮಾಡಿದ ಅಪಚಾರ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ.ವಿಕಾಸ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಹೇಳಿಕೆಯಾಗಿ ಈ ಕುರಿತು ಪ್ರತಿಕ್ರಿಯಿಸಿದ ಅವರು ಮೂಡ ನಿವೇಶನ ವಿಚಾರದಲ್ಲಿ ಸಿದ್ದರಾಮಯ್ಯ ಯಾವುದೇ ಹಗರಣ ಮಾಡದೆ ಇದ್ದರೂ ಸಹ ಸುದೀರ್ಘ ಅವಧಿಯ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲದ ರಾಜಕಾರಣಿ ಸಿದ್ದರಾಮಯ್ಯಗೆ ಭ್ರಷ್ಟಾಚಾರದ ಕಳಂಕ ಹಚ್ಚುವ ಕೆಲಸವನ್ನು ಬಿಜೆಪಿ ಹಾಗೂ ಜೆಡಿಎಸ್ ಮಾಡುತ್ತಿವೆೆ. ಇವರ ದುರುದ್ದೇಶ ಪೂರಿತ ರಾಜಕಾರಣಕ್ಕೆ ಬೆನ್ನೆಲುಬಾಗಿ ರಾಜ್ಯಪಾಲರು ನಿಂತಿದ್ದಾರೆ ಎಂದು ಆರೋಪಿಸಿದರು.
ವಿರೋಧ ಪಕ್ಷದವರು, ರಾಜ್ಯಪಾಲರು ಯಾರು ಏನೇ ಪ್ರಯತ್ನ ಪಟ್ಟರೂ ಸಿದ್ದರಾಮಯ್ಯ ಅವರನ್ನು ಏನೂ ಮಾಡಲು ಸಾಧ್ಯವಿಲ್ಲ. ಯಾವುದೇ ಹಗರಣ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಹೋರಾಟದಲ್ಲಿ ಜಯಶಾಲಿ ಆಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net