ಸೌಲಭ್ಯ ಬಳಸಿ ಜೀವನಮಟ್ಟ ಸುಧಾರಿಸಿಕೊಳ್ಳಿ : ಜಯರಾಮ್ ಸಲಹೆ ತಾಪಂನಲ್ಲಿ ಸ್ವಸಹಾಯ ಸಂಘಗಳಿಗೆ ಸಾಲ ವಿತರಣೆ

New Project
Published on

ಬೆಳ್ತಂಗಡಿ: ಸಂಜೀವಿನಿ ಒಕ್ಕೂಟದ ಸದಸ್ಯರು ಬ್ಯಾಂಕ್‌ನಲ್ಲಿ ಸಿಗುವ ಸೌಲಭ್ಯ ಬಳಸಿ ತಮ್ಮ ಜೀವನಮಟ್ಟ ಸುಧಾರಿಸಿ ಮುನ್ನಡೆಯಬೇಕು. ಸ್ವಸಹಾಯ ಗುಂಪುಗಳ ಪ್ರತಿಯೊಬ್ಬ ಮಹಿಳೆಯೂ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಬೇಕು. ಇದಕ್ಕೆ ಜಿಲ್ಲಾ ಹಾಗೂ ತಾಲೂಕು ಘಟಕದಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಜಯರಾಮ್ ಹೇಳಿದರು.

ಪುತ್ತೂರು ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ, ಬೆಳ್ತಂಗಡಿ ಕೆನರಾ ಬ್ಯಾಂಕ್ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ದ.ಕ. ಜಿಲ್ಲಾ ಪಂಚಾಯಿತಿ, ತಾಲೂಕು ಸಂಜೀವಿನಿ ಅಭಿಯಾನ ನಿರ್ವಹಣಾ ಘಟಕ, ಬೆಳ್ತಂಗಡಿ ತಾಪಂ ಆಶ್ರಯದಲ್ಲಿ ಸಂಜೀವಿನಿ ಸ್ವಸಹಾಯ ಸಂಘಗಳಿಗೆ ಸಾಲ ವಿತರಣಾ ಕಾರ್ಯಕ್ರಮ ಮತ್ತು ಕೃಷಿ ಸಖಿ, ಪಶು ಸಖಿ, ಸ್ವಚ್ಛತಾ ಸಿಬ್ಬಂದಿ ಹಾಗೂ ಸಂಜೀವಿನಿ ಸದಸ್ಯರಿಗೆ ವಿಮಾ ನೋಂದಣಿ ಕಾರ್ಯಕ್ರಮ, ಜನಸುರಕ್ಷಾ ಯೋಜನೆಗಳ ಸಂಪೂರ್ಣ ಅಭಿಯಾನ ನಿಮಿತ್ತ ಬೆಳ್ತಂಗಡಿ ತಾಪಂನಲ್ಲಿ ಗುರುವಾರ ಮಾತನಾಡಿದರು.

ತಾ.ಪಂ. ಇಒ ಭವಾನಿ ಶಂಕರ್ ಎನ್. ಮಾತನಾಡಿದರು. ಪುತ್ತೂರು ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ವಿಭಾಗೀಯ ಅಧಿಕಾರಿ ಜಯಪ್ರತಾಪ್ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಜಿಪಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್ ಮಾತನಾಡಿದರು. ಗೃಹ ರಕ್ಷಕದಳ ಘಟಕ ಅಧಿಕಾರಿ, ಸಂಜೀವಿನಿ ಒಕ್ಕೂಟದ ವಲಯ ಮೇಲ್ವಿಚಾರಕ ಜಯಾನಂದ ಅವರನ್ನು ಸನ್ಮಾನಿಸಲಾಯಿತು.

ಪುತ್ತೂರು ಕೆನರಾ ಬ್ಯಾಂಕ್ ಪ್ರಬಂಧಕ ಅರುಣ್ ನಾಯಕ್, ಉಜಿರೆ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ, ಬೆಳ್ತಂಗಡಿ ಕೆನರಾ ಬ್ಯಾಂಕ್ ಪ್ರಬಂಧಕ ಪ್ರತಾಪ್ ನಾಯಕ್, ಕೆನರಾ ಬ್ಯಾಂಕ್ ಆರ್ಥಿಕ ಸೇರ್ಪಡಾ ವಿಭಾಗದ ಅರ್ನಾಬ್ ರಾಯ್ ಹಾಗೂ ಸಂಜೀವಿನಿ ತಾಲೂಕು ವ್ಯವಸ್ಥಾಪಕ ನಿತೀಶ್, ಬೆಳ್ತಂಗಡಿ ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಉಷಾ ನಾಯಕ್, ತಾಲೂಕು ಸಂಜೀವಿನಿ ಸಿಬ್ಬಂದಿ ಭರತ್, ವೀಣಾಶ್ರೀ, ವಿನೋದ್ ಪ್ರಸಾದ್ ಕಲ್ಲಾಜೆ, ಶ್ರೀಕಲಾ ಮೊದಲಾದವರಿದ್ದರು. ವಲಯ ಮೇಲ್ವಿಚಾರಕ ಸ್ವಸ್ತಿಕ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

ಸಂಜೀವಿನಿ ಒಕ್ಕೂಟದ ಸದಸ್ಯರಿಗೆ ಉದ್ದಿಮೆ ಮಾಡಲು ಸರ್ಕಾರ ಸುಲಭ ವಿಧಾನದಲ್ಲಿ ಕೆನರಾ ಬ್ಯಾಂಕ್ ಮುಖೇನ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವಂತೆ ಮಾಡಿದೆ. ಈ ವ್ಯವಸ್ಥೆಯ ಸದುಪಯೋಗ ಪಡೆದುಕೊಂಡು ಉನ್ನತ ರೀತಿಯಲ್ಲಿ ಉದ್ದಿಮೆ ಪ್ರಾರಂಭಿಸಿ ಇನ್ನೊಬ್ಬರಿಗೆ ಮಾದರಿಯಾಗಬೇಕು. ಸರ್ಕಾರದ ಸವಲತ್ತು ಬಳಸಿಕೊಂಡು ಸಮಾಜದಲ್ಲಿ ಎತ್ತರಕ್ಕೆ ಬೆಳೆದು ನಿಲ್ಲಬೇಕು. ಭವಾನಿ ಶಂಕರ್ ಎನ್. ತಾಲೂಕು ಪಂಚಾಯಿತಿ ಇಒ https://www.vijayavani.net/request-to-donate-books-for-chutuku-sammelan https://www.vijayavani.net/handover-of-st-community-centre

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net