ಅಂತರ ಕಾಲೇಜ್ ಅಥ್ಲೆಟಿಕ್ ಚಾಂಪಿಯನ್‌ಶಿಪ್ 5ರಿಂದ

blank

ಹುಬ್ಬಳ್ಳಿ: ಇಲ್ಲಿಯ ಕೆಎಂಸಿಆರ್‌ಐ ಆತಿಥ್ಯದಲ್ಲಿ ನ. 5ರಿಂದ 8ರವರೆಗೆ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ 22ನೇ ಅಂತರ ಕಾಲೇಜ್ ಅಥ್ಲೆಟಿಕ್ ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ ಎಂದು ಕೆಎಂಸಿಆರ್‌ಐ ನಿರ್ದೇಶಕ ಡಾ.ಎಸ್.ಎಫ್. ಕಮ್ಮಾರ ತಿಳಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 5ರಂದು ಮಧ್ಯಾಹ್ನ 3 ಗಂಟೆಗೆ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಎಂ.ಕೆ. ರಮೇಶ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟು ಸಹನಾಕುಮಾರಿ ಗೊಬ್ಬರಗುಂಪಿ ಅವರು ಕೆಎಂಸಿಆರ್‌ಐನ ಕ್ರೀಡಾಂಗಣದಲ್ಲಿ ಚಾಲನೆ ನೀಡುವರು ಎಂದರು.
2006ರಲ್ಲಿ ಈ ಕ್ರೀಡಾಕೂಟವನ್ನು ಕೆಎಂಸಿಯಲ್ಲಿ ಆಯೋಜಿಸಲಾಗಿತ್ತು. ಅದಾದ 18 ವರ್ಷಗಳ ಬಳಿಕ ಮತ್ತೆ ಕ್ರೀಡಾಕೂಟವನ್ನು ಕೆಎಂಸಿಆರ್‌ಐಯಲ್ಲಿ ಆಯೋಜಿಸಲಾಗಿದೆ. ಇದಕ್ಕಾಗಿ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ 25 ಲಕ್ಷ ರೂ. ಅನುದಾನ ನೀಡಿದೆ ಎಂದರು.
ನ. 6ರಿಂದ 8ರವರೆಗೆ ಪ್ರತಿದಿನ ಓಟ, ಶಾಟ್‌ಪುಟ್, ಡಿಸ್ಕಸ್ ಥ್ರೋ, ಜಾವಲಿನ್‌ಥ್ರೋ, ಲಾಂಗ್‌ಜಂಪ್, ತ್ರಿಪಲ್ ಜಂಪ್, ರಿಲೆ ಸೇರಿದಂತೆ ವಿವಿಧ ಆಟೋಟಗಳು ನಡೆಯಲಿವೆ. ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಈಗಾಗಲೇ ರಾಜ್ಯದ 101 ಕಾಲೇಜ್‌ಗಳಿಂದ 903 ವೈದ್ಯಕೀಯ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದಾರೆ. ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ನಿಯಮದ ಪ್ರಕಾರ ಎಲ್ಲ ಸ್ಪರ್ಧಿಗಳಿಗೆ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಒಲಿಂಪಿಕ್ ಗುಣಮಟ್ಟ ಹೊಂದಿರುವ ಕೆಎಂಸಿಆರ್‌ಐ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿದೆ. ಒಂದು ವೇಳೆ ಮಳೆ ಬಿಡುವು ಕೊಡದಿದ್ದರೆ ಕ್ರೋಡಾಕೂಟವನ್ನು ಧಾರವಾಡದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಆಯೋಜಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.
ಪ್ರಾಚಾರ್ಯ ಡಾ. ಗುರುಶಾಂತಪ್ಪ ಯಲಗಚ್ಚಿನ ಮಾತನಾಡಿ, ಇಂದೊಂದು ರಾಜ್ಯಮಟ್ಟದ ಕ್ರೀಡಾಕೂಟ. ಉಸ್ತುವಾರಿಗಾಗಿ 11 ಸಮಿತಿಗಳನ್ನು ರಚಿಸಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕಿ ಡಾ.ಬಿ.ಎಲ್. ಸುಜಾತ ರಾಥೋಡ, ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು, ಹು-ಧಾ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಇದೇ ವೇಳೆ ಕ್ರೀಡಾಕೂಟದ ಪೋಸ್ಟರ್ ಮತ್ತು ಜರ್ಸಿ ಬಿಡುಗಡೆ ಮಾಡಲಾಯಿತು.
ವೈದ್ಯಕೀಯ ಅಧೀಕ್ಷಕ ಡಾ. ಈಶ್ವರ ಹಸಬಿ, ಡಾ.ಕೆ.ಎಫ್. ಕಮ್ಮಾರ, ಡಾ. ರಾಜಶೇಖರ ದ್ಯಾಬೇರಿ, ಡಾ.ಜಿ.ಸಿ. ಪಾಟೀಲ, ಡಾ. ರಾಜಶೇಖರ ದುಂಡರೆಡ್ಡಿ, ಡಾ. ಸೂರ್ಯಕಾಂತ ಕಲ್ಲೂರಾಯ, ಡಾ. ಸುನೀಲ ಗೋಖಲೆ, ಡಾ.ಎಸ್. ಮಹೇಶಕುಮಾರ, ಡಾ. ಮಂಜುನಾಥ ನೇಕಾರ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

Share This Article

ಆಯುಷ್ಯ ಇರುವಾಗ ಸಾಯುವವರೆಗೆ ಬದುಕಲೇಬೇಕಲ್ಲ!

| ಡಾ.ಕೆ.ಪಿ. ಪುತ್ತೂರಾಯ ಇದು ಸಹಿಸಿಕೊಳ್ಳಲಾಗದ ವೃದ್ಯಾಪಕ್ಕೆ ಒಳಗಾಗಿ ಸಾಯಲಾಗದೆ ಸಾವಿನ ಕ್ಷಣವನ್ನೇ ಎದುರು ನೋಡುತ್ತಿರುವ…

ಋತುಸ್ರಾವದ ಸಮಯದಲ್ಲಿ ಮೊಸರು ಸೇವಸಬಹುದೇ.. ಬೇಡವೇ; ಗೊಂದಲಕ್ಕೆ ಇಲ್ಲಿದೆ ಪರಿಹಾರ | Health Tips

ಮೊಸರು ಅಥವಾ ಉಪ್ಪಿನಕಾಯಿ ತಿನ್ನುವುದರಿಂದ ಋತುಸ್ರಾವದ ಸಮಯದಲ್ಲಿ ಸಮಸ್ಯೆಯಾಗುತ್ತದೆ ಎಂಬ ನಂಬಿಕೆಯಿದೆ. ಆದರೆ ಯಾವುದೇ ಆಹಾರವು…

ಉಸಿರಾಟದ ವ್ಯಾಯಾಮ ಗೊರಕೆ ಸಮಸ್ಯೆಗೆ ಪರಿಹಾರ; ಇದು ಸುಳ್ಳೋ-ಸತ್ಯವೋ.. ವೈದ್ಯರು ಹೇಳೋದೇನು? | Health Tips

ನಿದ್ರಿಸುವಾಗ ಗೊರಕೆ ಹೊಡೆಯುವ ವ್ಯಕ್ತಿಗೆ ಮಾತ್ರವಲ್ಲದೆ ಸುತ್ತಮುತ್ತಲಿನವರಿಗೂ ತೊಂದರೆಯ ಅನುಭವವಾಗುತ್ತದೆ. ಸಾಮಾನ್ಯವಾಗಿ ಇದನ್ನು ಲಘುವಾಗಿ ತೆಗೆದುಕೊಳ್ಳಲಾಗುತ್ತದೆ.…