ಹಿರಿಯ ವಿದ್ಯಾರ್ಥಿಗಳೊಂದಿಗೆ ಸಂವಾದ

Bel_Interaction
Published on

ಬೆಳ್ತಂಗಡಿ: ವಿಜ್ಞಾನ ವಿಷಯ ತುಂಬಾ ಕಷ್ಟ. ಹಾಗಾಗಿ ಬೇರೆ ವಿಷಯದ ಕುರಿತು ಗಮನ ಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳುತ್ತಾರೆ. ಆದರೆ ಕಲಿಯುವ, ಆಸಕ್ತಿ, ಸಾಮರ್ಥ್ಯ ಇದ್ದರೆ ಎಲ್ಲವೂ ಸಾಧ್ಯ ಎಂದು ಬೆಳಾಲು ಗ್ರಾಪಂ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ ಹೇಳಿದರು.

ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಹಿರಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ಸರಣಿ ಎಸ್‌ಡಿಎಂ ನೆನಪಿನಂಗಳದ ಹದಿನೇಳನೆ ಕಂತಿನ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ದ್ವಿತೀಯ ವಷರ್ದ ಬಿ.ಕಾಂ.ವಿದ್ಯಾರ್ಥಿ ಶಿವಾನಂದಗೆ 5 ಸಾವಿರ ರೂ. ಸಹಾಯಧನ ನೀಡಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಕ್ಕಳು ದುಶ್ಚಟಕ್ಕೆ ಬಲಿಯಾಗುತ್ತಿದ್ದಾರೆ. ಇದಕ್ಕೆ ನೀವಲ್ಲ ಕಾರಣ ನಿಮ್ಮ ಸುತ್ತಮುತ್ತಲಿನ ಜನರು. ಯಾರೇ ದುಶ್ಚಟಗಳ ಆಮಿಷ ಒಡ್ಡಿದರೂ ಅದಕ್ಕೆ ಬಲಿಯಾಗದೆ ಇರಬೇಕು ಎಂದರು.

ಪ್ರಾಂಶುಪಾಲ ಡಾ.ಬಿ.ಎ.ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಿದರು. ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪೀತಾಂಬರ ಹೆರಾಜೆ, ಕಾರ್ಯಕ್ರಮ ಸಂಯೋಜಕ ಡಾ.ಎಂ.ಪಿ.ಶ್ರೀನಾಥ್ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ.ದಿವಾಕರ ಕೊಕ್ಕಡ ಸ್ವಾಗತಿಸಿದರು. ಜೈವಿಕ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕ ದೀಕ್ಷಿತ್ ರೈ ವಂದಿಸಿದರು. ರಾಜ್ಯಶಾಸ್ತ್ರ ಪ್ರಾಧ್ಯಾಪಕ ಶಿವಕುಮಾರ್ ಪಿ.ಪಿ. ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net