ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಟೂರ್ನಿ

badminton
ಎಂಪಿಎಂ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಟೂರ್ನಿ ನಡೆಯಿತು
Published on

ಕಾರ್ಕಳ: ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆ ಮಹತ್ತರ ಪಾತ್ರ ವಹಿಸುತ್ತದೆ. ದೈಹಿಕ ಹಾಗೂ ಮಾನಸಿಕವಾಗಿಯೂ ಪ್ರಯೋಜನಕಾರಿಯಾದ ಕ್ರೀಡೆಯಲ್ಲಿ ನಾವು ತೊಡಗಿಕೊಳ್ಳುವ ಮೂಲಕ ಆರೋಗ್ಯವಂತ ಬದುಕು ನಡೆಸಲು ಸಾಧ್ಯ ಎಂದು ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಸುರೇಶ್ ಅತ್ತೂರು ಹೇಳಿದರು.

ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾಲಯ ಆಶ್ರಯದಲ್ಲಿ ಕಾಲೇಜು ಮೈದಾನದಲ್ಲಿ ಗುರುವಾರ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಟೂರ್ನಿ ಉದ್ಘಾಟಿಸಿ ಮಾತನಾಡಿದರು.

ಪ್ರಾಂಶುಪಾಲ ಡಾ.ಕಿರಣ್ ಎಂ. ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿವಿ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಜೆರಾಲ್ಡ್ ಸಂತೋಷ್ ಡಿಸೋಜ, ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಡಾ.ಪ್ರಕಾಶ್ ಡಿಸೋಜ, ಕಾಲೇಜಿನ ಹಳೇ ವಿದ್ಯಾರ್ಥಿ ರಾಜೇಶ್, ಕ್ರೀಡಾ ಕಾರ್ಯದರ್ಶಿ ವಿನ್ಯಾಸ್ ಮೊದಲಾದವರು ಉಪಸ್ಥಿತರಿದ್ದರು.

ಉಪನ್ಯಾಸಕಿ ಅಕ್ಷತಾ ರಾವ್ ನಿರೂಪಿಸಿದರು. ಸ್ನಾತಕೋತ್ತರ ವಿಭಾಗ ಸಂಯೋಜಕ ಡಾ.ವಿದ್ಯಾಧರ ಹೆಗ್ಡೆ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಡಾ.ಜಯಭಾರತಿ ಎ. ವಂದಿಸಿದರು.

ವಿದ್ಯಾರ್ಥಿಗಳು ಶಿಕ್ಷಣಕ್ಕೆ ಮಾತ್ರವಲ್ಲದೇ ಕ್ರೀಡೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಳ್ಳಬೇಕು. ಕ್ರೀಡೆ ನಮ್ಮ ಮಾನಸಿಕ ಸ್ಥೈರ್ಯ ಹೆಚ್ಚಿಸಲು ನೆರವಾಗುತ್ತದೆ.-ಡಾ.ಜೆರಾಲ್ಡ್ ಸಂತೋಷ್ ಡಿಸೋಜ, ದೈಹಿಕ ಶಿಕ್ಷಣ ನಿರ್ದೇಶಕ, ಮಂಗಳೂರು ವಿವಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net