

ವಿಜಯವಾಣಿ ಸುದ್ದಿಜಾಲ ಗುರುಪುರ
ಕಬಡ್ಡಿ ಆಡಲು ಧೈರ್ಯ ಮತ್ತು ಕೌಶಲ ಬೇಕು. ಪ್ರಾಥಮಿಕ ಶಿಕ್ಷಣದ ಹಂತದಲ್ಲಿಯೇ ಕ್ರೀಡೆಯ ಮೇಲೆ ಆಸಕ್ತಿ ತೋರಿಸಿದರೆ ಮುಂದೆ ರಾಷ್ಟ್ರೀಯ ಮಟ್ಟದಲ್ಲಿ ಆಡುವ ಅರ್ಹತೆ ಪಡೆಯಲು ಸಾಧ್ಯವಿದೆ ಎಂದು ರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಆನಂದ ಶೆಟ್ಟಿ ಹೇಳಿದರು.
ವಾಮಂಜೂರಿನ ಮಂಗಳಜ್ಯೋತಿ ಎಸ್ಡಿಎಂ ಸಮಗ್ರ ಶಿಕ್ಷಣ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ದಕ್ಷಿಣ ವಲಯ ಸಹಯೋಗದಲ್ಲಿ ಮಂಗಳಜ್ಯೋತಿ ಶಾಲೆಯಲ್ಲಿ ಬುಧವಾರ ತಾಲೂಕುಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.
ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಮೂಲ್ಯ ಮಾತನಾಡಿದರು. ಶಾಲಾ ಆಡಳಿತಾಧಿಕಾರಿ ನರೇಶ್ ಮಲ್ಲಿಗೆಮಾಡು ಅಧ್ಯಕ್ಷತೆ ವಹಿಸಿದ್ದರು. ತಿರುವೈಲು ಸಿಆರ್ಪಿ ಪುಷ್ಪಾ, ಶಾಲಾ ಹಳೇ ವಿದ್ಯಾರ್ಥಿ, ಉದ್ಯಮಿ ಉದಯ ಕುಮಾರ್ ಕುಡುಪು, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶೀಲಾವತಿ, ರೋಸಾ ಮಿಸ್ತಿಕ ದೈಹಿಕ ಶಿಕ್ಷಣ ಶಿಕ್ಷಕ ಲ್ಯಾನ್ಸಿ ಸಿಕ್ವೇರ ಉಪಸ್ಥಿತರಿದ್ದರು.
ಪ್ರೌಢಶಾಲಾ ಮುಖ್ಯಶಿಕ್ಷಕ ರಮೇಶ್ ಆಚಾರಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಿಲ್ಲಿ ಪಾಯಸ್ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕಿ ರಮ್ಯಾ ನಿರೂಪಿಸಿದರು. ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಶೇಖರ ಕಡ್ತಲ ವಂದಿಸಿದರು.
ಸೋಲೇ ಗೆಲುವಿನ ಸೋಪಾನ. ಒಂದು ಸೋಲು ಮತ್ತೊಂದು ಗೆಲುವಿಗೆ ದಾರಿ ಮಾಡಿಕೊಡುತ್ತದೆ. ಕ್ರೀಡೆಯಲ್ಲಿ ಶಿಸ್ತು ಪಾಲಿಸುವ ಅವಶ್ಯಕತೆ ಇದೆ. ಬಾಲಕೃಷ್ಣ ಮೂಲ್ಯ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ
ಬಾಲಕೃಷ್ಣ ಮೂಲ್ಯ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ