More

    ಬಡ್ಡಿ ರಹಿತ ಸಾಲಕ್ಕೆ ವಕೀಲರ ಒತ್ತಾಯ

    ಬೆಳಗಾವಿ: ಲಾಕ್‌ಡೌನ್‌ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ವಕೀಲರಿಗೆ ಬಡ್ಡಿ ರಹಿತ ಐದು ಲಕ್ಷ ರೂ. ಸಾಲ ಮಂಜೂರು ಮಾಡುವಂತೆ ಒತ್ತಾಯಿಸಿ ಬೆಳಗಾವಿ ಬಾರ್ ಅಸೋಸಿಯೇಷನ್ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಡಳಿತದ ಮೂಲಕ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

    ಇದಕ್ಕೂ ಮೊದಲು ನಗರದ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿರುವ ವಕೀಲರ ಸಮುದಾಯ ಭವನದಲ್ಲಿ ಬಾರ್ ಅಸೋಸಿಯೇಷನ್‌ನ ಪದಾಧಿಕಾರಿಗಳು ಸಭೆ ನಡೆಸಿದರು. ಬಳಿಕ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

    4 ತಿಂಗಳಿಂದ ರಾಜ್ಯದ ಎಲ್ಲ ನ್ಯಾಯಾಲಯಗಳ ಕಲಾಪ ಸ್ಥಗಿತಗೊಳಿಸಿರುವುದರಿಂದ ಆರ್ಥಿಕ ಸಂಕಷ್ಟ ಎದುರಾಗಿದೆ. ಹೀಗಾಗಿ ಕುಟುಂಬ ನಿರ್ವಹಣೆಗೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ 1.25 ಲಕ್ಷ ವಕೀಲರಿದ್ದು, ಅವರಲ್ಲಿ ಸುಮಾರು 50-60 ಸಾವಿರ ವಕೀಲರಿಗೆ ತುರ್ತು ಆರ್ಥಿಕ ಸಹಾಯ ಬೇಕಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಕರೊನಾ ಸೋಂಕಿನಿಂದ ರಕ್ಷಣೆ ಮಾಡುವ ಉದ್ದೇಶದಿಂದ ನ್ಯಾಯಾಧೀಶರಿಗೆ ಹಾಗೂ ವಕೀಲರ ರಕ್ಷಣೆಗೂ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಬಾರ್ ಅಸೋಸಿಯೇಷನ್ ಅಧ್ಯಕ್ಷ ಎ.ಜಿ. ಮುಳವಾಳಡಮಠ, ಪದಾಧಿಕಾರಿಗಳಾದ ಆರ್.ಸಿ. ಪಾಟೀಲ, ಶಿವಪುತ್ರಪ್ಪ ಪಟ್ಟಕಲ್ಲ, ಗಜಾನನ ಪಾಟೀಲ ಹಾಗೂ ಎನ್.ಆರ್. ಲಾತೂರ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts