More

    ಕಾಂಗ್ರೆಸ್‌ನಿಂದ ದಿಂಗಾಲೇಶ್ವರರನ್ನು ಕಣಕ್ಕಿಳಿಸಲು ತೆರೆಮರೆಯ ಪ್ರಯತ್ನ

    ಬೆಂಗಳೂರು: ಧಾರವಾಡ ಲೋಕಸಭಾ ಕ್ಷೇತ್ರದಿಂದ ದಿಂಗಾಲೇಶ್ವರ ಸ್ವಾಮೀಜಿಯವರು ಸ್ಪರ್ಧಿಸುವ ತೀರ್ಮಾನ ಮಾಡಿದ್ದಾರೆ. ಅವರನ್ನು ಕಾಂಗ್ರೆಸ್‌ನಿಂದ ಕಣಕ್ಕಿಳಿಸುವ ಬಗ್ಗೆ ಅನೇಕರು ನನಗೆ ಸಲಹೆ ನೀಡಿದ್ದಾರೆ. ಈ ಕುರಿತ ಪ್ರಸ್ತಾವನೆ ಇದೆ. ಕೇಂದ್ರ ಚುನಾವಣಾ ಸಮಿತಿ ನಿರ್ಧಾರದಂತೆ ನಾವು ಈಗಾಗಲೇ ಅಸೂಟಿ ಅವರಿಗೆ ಬಿ ಫಾರಂ ನೀಡಿದ್ದೇವೆ. ಈ ಬಗ್ಗೆ ಸಧ್ಯದಲ್ಲೇ ಸ್ಥಳೀಯ ನಾಯಕರ ಜತೆ ಚರ್ಚೆ ಮಾಡುತ್ತಿದ್ದೇನೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

    ನಾನು ಏಕಾಂಗಿಯಾಗಿ ಈ ಬಗ್ಗೆ ತೀರ್ಮಾನ ಮಾಡಲು ಆಗುವುದಿಲ್ಲ. ನಮ್ಮ ಎಐಸಿಸಿ ಅಧ್ಯಕ್ಷರು, ಚುನಾವಣಾ ಸಮಿತಿ, ಮುಖ್ಯಮಂತಿ, ರಾಜ್ಯ ಉಸ್ತುವಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರನ್ನು ವಿಶ್ವಾಸಕ್ಕೆ ಪಡೆಯಬೇಕು. ಸ್ವಾಮೀಜಿಗಳು ಮೊದಲಿನಿಂದಲೂ ಹೋರಾಟ ಮಾಡಿಕೊಂಡು ಬಂದವರು. ಮೊದಲೇ ಈ ವಿಚಾರ ನಮಗೆ ಗೊತ್ತಿದ್ದರೆ ಸುಲಭವಾಗುತ್ತಿತ್ತು ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts