More

  ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಶಾಸಕ ಯತ್ನಾಳ್‌ಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

  ಬೆಂಗಳೂರು: ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆ ಪ್ರಚಾರ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್‌ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

  ಇದನ್ನೂ ಓದಿ:ಅಶ್ಲೀಲ ವಿಡಿಯೋ ಪೋಸ್ಟ್​ ಮಾಡಿದ ಪ್ರಕರಣ: ರಾಖಿ ಸಾವಂತ್​ಗೆ ನಿರೀಕ್ಷಣಾ ಜಾಮೀನು ನಿರಾಕರರಣೆ!

  2023 ಮೇ 2ರಂದು ಗದಗದಲ್ಲಿ ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಪರ ನಡೆಸಿದ ರೋಡ್ ಶೋದಲ್ಲಿ ಪಾಲ್ಗೊಂಡಿದ್ದ ಯತ್ನಾಳ್‌ ಭಜರಂಗ ದಳವನ್ನು ಕಾಂಗ್ರೆಸ್ ನಿಷೇಧ ಮಾಡಿದರೆ ಎಲ್ಲ ಹಿಂದೂಗಳು ಆ ಪಕ್ಷಕ್ಕೆ ಬಹಿಷ್ಕಾರ ಹಾಕುತ್ತಾರೆ ಎಂದು ಹೇಳಿದ್ದರು. ಇದಕ್ಕೆ ವಿಚಕ್ಷಣಾ ದಳದ ಮಂಜುನಾಥ ಕಲಬುರಗಿ ದೂರು ನೀಡಿದ್ದರು. ಈ ದೂರು ಆಧರಿಸಿ ಗದಗ ಜಿಲ್ಲಾ ನ್ಯಾಯಾಲಯ ಜ.20ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಯತ್ನಾಳ್ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು.

  ಇದಕ್ಕೆ ಯತ್ನಾಳ್ ತಡೆಕೋರಿ ಹೈಕೋರ್ಟ್​ ಮೊರೆಹೋಗಿದ್ದರು. ಅರ್ಜಿ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಟದ ಎದುರು ವಿಚಾರಣೆಗೆ ಬಂದಿತ್ತು.

  ಅರ್ಜಿದಾರರ ಪರ ವಕೀಲ ಶ್ರೀನಾಥ್ ಕುಲಕರ್ಣಿ ಅವರು, ಯತ್ನಾಳ್‌ ಅವರ ರಾಜಕೀಯ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶದಿಂದ ಈ ದೂರು ದಾಖಲಿಸಲಾಗಿದೆ. ಆದ್ದರಿಂದ ವಿಚಾರಣೆಗೆ ತಡೆ ನೀಡಬೇಕು ಎಂದು ಕೋರಿದರು.

  ವಾದವನ್ನು ಪರಿಗಣಿಸಿದ ನ್ಯಾಯಪೀಠ, ಗದಗ ಒಂದನೇ ಹೆಚ್ಚುವರಿ ನ್ಯಾಯಾಲದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿತು. ಮೂಲ ದೂರುದಾರ ಮಂಜುನಾಥ್ ಕಲಬುರಗಿ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತಲ್ಲದೆ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನೂ ಮುಂದೂಡಿತು.

  ‘ಹನುಮಾನ್‌’ ಮುಂದೆ ಮಂಡಿಯೂರಿದ ‘ಗುಂಟೂರು ಖಾರಂ’: ಬಾಕ್ಸ್‌ ಆಫೀಸ್‌ ಬಲಾಬಲದಲ್ಲಿ ಗೆದ್ದವರಾರು?

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts