

ಕಡಬ: ಕಡಬ ಪೊಲೀಸ್ ಠಾಣೆ ನೇತೃತ್ವದಲ್ಲಿ ಸೇಂಟ್ ಜೋಕಿಮ್ಸ್ ವಿದ್ಯಾಸಂಸ್ಥೆ, ಪದವಿ ಪೂರ್ವ ಕಾಲೇಜು ಸಹಯೋಗದೊಂದಿಗೆ ಅಂತಾರಾಷ್ಟ್ರಿಯ ಮಾದಕವಸ್ತು ಸೇವನೆ ವಿರೋಧಿ ದಿನಾಚರಣೆ ನಡೆಯಿತು.
ಕಡಬ ಪೇಟೆಯಲ್ಲಿ ವಿದ್ಯಾರ್ಥಿಗಳಿಂದ ಜಾಥಾ ನೆರವೇರಿತು. ಬಳಿಕ ಸಭಾ ಕಾರ್ಯಕ್ರಮ ಜರುಗಿತು. ಸುಬ್ರಹ್ಮಣ್ಯೇಶ್ವರ ಪ್ರೌಢಶಾಲೆ ನಿವೃತ್ತ ಮುಖ್ಯ ಶಿಕ್ಷಕ ಯಶವಂತ ರೈ ಮಾತನಾಡಿ, ಮಾದಕ ವಸ್ತುಗಳಿಂದ ದೂರವಿದ್ದಷ್ಟು ಜೀವಕ್ಕೆ ಒಳಿತು. ವಿದ್ಯಾರ್ಥಿ ಜೀವನದಲ್ಲಿಯೇ ಮಾದಕ ವಸ್ತುಗಳ ದುಷ್ಪರಿಣಾಮದ ಅರಿವು ಮೂಡಿಸಿಕೊಂಡು ನಮ್ಮ ಪರಿಸರ ಮಾದಕ ವಸ್ತುಗಳಿಂದ ಮುಕ್ತವಾಗಿರುವಂತೆ ನೋಡಿಕೊಂಡರೆ ಸದೃಢ ಸಮಾಜ ನಿರ್ಮಾಣವಾಗುತ್ತದೆ ಎಂದರು.
ಕಡಬ ಠಾಣೆ ತನಿಖಾ ಎಸ್.ಐ.ಅಕ್ಷಯ್ ಢವಗಿ, ಕಡಬ ಪ.ಪೂ.ಕಾಲೇಜು ಪ್ರಾಂಶುಪಾಲ ದೇವರಾಜ್, ಕಡಬ ಸೇಂಟ್ ಜೋಕಿಮ್ಸ್ ವಿದ್ಯಾಸಂಸ್ಥೆ ಪ್ರಾಂಶುಪಾಲ ಕಿರಣ್‌ಕುಮಾರ್ ಉಪಸ್ಥಿತರಿದ್ದರು. ಪೊಲೀಸ್ ಕಾನ್‌ಸ್ಟೆಬಲ್ ಮಹೇಶ್ ವಂದಿಸಿದರು.