ಉಪ್ಪುಂದದಲ್ಲಿ ಅಂತಾರಾಷ್ಟ್ರೀಯ ಆಟದ ದಿನಾಚರಣೆ

upp games
ಉಪ್ಪುಂದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಆಟದ ದಿನವನ್ನು ಉಪ್ಪುಂದ ಗ್ರಾಪಂ ಅಧ್ಯಕ್ಷ ಮೋಹನಚಂದ್ರ ಉದ್ಘಾಟಿಸಿದರು
Published on

ಬೈಂದೂರು: ಉಪ್ಪುಂದ ಗ್ರಾಪಂ, ಗ್ರಂಥಾಲಯ ಕಚೇರಿ ಹಾಗೂ ಉಪ್ಪುಂದ ಗ್ರಾಪಂ ವ್ಯಾಪ್ತಿಯ ಸರ್ಕಾರಿ ಶಾಲೆಗಳ ಸಹಯೋಗದಲ್ಲಿ ಮಂಗಳವಾರ ಅಂತಾರಾಷ್ಟ್ರೀಯ ಆಟದ ದಿನವನ್ನು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಭಾಂಗಣದಲ್ಲಿ ಆಚರಿಸಲಾಯಿತು.

ಗ್ರಾಪಂ ಅಧ್ಯಕ್ಷ ಮೋಹನಚಂದ್ರ ಅಧ್ಯಕ್ಷತೆ ವಹಿಸಿದ್ದರು. ಸುಮಾರು 200 ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಒಳಾಂಗಣ ಕ್ರೀಡೆಗಳಾದ ಚೆಸ್, ಕೇರಂ ಹಾಗೂ ಲೂಡೋ ಸ್ಪರ್ಧೆ ಏರ್ಪಡಿಸಲಾಗಿತ್ತು.

ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ರವಿ, ಉಪಪ್ರಾಂಶುಪಾಲ ಚಂದ್ರಹಾಸ ಮಾಯಾ ಗೌಡ, ಎಸ್‌ಡಿಎಂಸಿ ಅಧ್ಯಕ್ಷ ರಾಜು ಖಾರ್ವಿ, ಪಂಚಾಯಿತಿ ಸದಸ್ಯರಾದ ಶೇಖರ್ ಪೂಜಾರಿ, ಪ್ರಕಾಶ್ ಆಚಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುದರ್ಶನ್, ಶಿಕ್ಷಣ ಫೌಂಡೇಶನ್ ನೂಡಲ್ ಅಧಿಕಾರಿ ಆಶಾ, ಗ್ರಂಥಾಲಯ ಮೇಲ್ವಿಚಾರಕಿ ಮೂಕಾಂಬು, ಸಂಜೀವಿನಿ ಸಂಘದ ಎಂಬಿಕೆ ರೇಖಾ, ಶಿಕ್ಷಕರು ಉಪಸ್ಥಿತರಿದ್ದರು

ಸಮಾರೋಪ

ಮಧ್ಯಾಹ್ನ ಸಮಾರೋಪ ಸಮಾರಂಭ ನಡೆಯಿತು. ಗ್ರಾಪಂ ಅಧ್ಯಕ್ಷ ಮೋಹನ್‌ಚಂದ್ರ ವಿಜೇತರಾದ ವಿದ್ಯಾರ್ಥಿಗಳಿಗೆ ಗ್ರಾಪಂ ವತಿಯಿಂದ ಸ್ಮರಣಿಕೆ ಮತ್ತು ಅಭಿನಂದನಾ ಪತ್ರ ವಿತರಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುದರ್ಶನ್, ಶಿಕ್ಷಣ ಫೌಂಡೇಶನ್ ನೋಡಲ್ ಅಧಿಕಾರಿ ಆಶಾ, ಹಿರಿಯ ಶಿಕ್ಷಕಿ ದಾಕ್ಷಾಯಿಣಿ ಉಪಸ್ಥಿತರಿದ್ದರು. ಸಂಸ್ಥೆ ದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ ಶೆಟ್ಟಿ ಆಟಗಳ ಸ್ಪರ್ಧೆ ನಡೆಸಲು ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net