More

    ಹೆಣ್ಣು ಭ್ರೂಣ ಹತ್ಯೆ ಹೀನಾಯ ಕೃತ್ಯ: ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಬೇಸರ

    ಮಂಡ್ಯ: ಹೆಣ್ಣು ಭ್ರೂಣ ಹತ್ಯೆ ಹೀನಾಯ ಕೃತ್ಯ. ಮಹಿಳೆಯರು ಮನಸ್ಸು ಮಾಡಿದರೆ ಇದನ್ನು ಸಂಪೂರ್ಣವಾಗಿ ತಡೆಗಟ್ಟಬಹುದು ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಹೇಳಿದರು.
    ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಮಹಿಳಾ ಆಯೋಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾವೇರಿ ಸ್ತ್ರೀ ಶಕ್ತಿ ಒಕ್ಕೂಟ, ಸಂಜೀವಿನಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟಿಸಿ ಮಾತನಾಡಿದರು.
    ಜನಗಣತಿ ಪ್ರಕಾರ ಜಿಲ್ಲೆಯಲ್ಲಿ ಲಿಂಗ ಅನುಪಾತ 1 ಸಾವಿರ ಪುರುಷರಿಗೆ 995 ಮಹಿಳೆಯರಿದ್ದಾರೆ. ಆದರೆ ಕೆಲ ಜಿಲ್ಲೆ ಹಾಗೂ ರಾಜ್ಯಗಳಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಇನ್ನೂ ಕಡಿಮೆಯಿದೆ. ಈ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸಿ ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟಲು ಎಲ್ಲರೂ ಕೈಜೋಡಿಸಬೇಕು. ಮಹಿಳಾ ಸಾಕ್ಷರತೆ ಹೆಚ್ಚಿರುವ ಮಂಗಳೂರು, ಉಡುಪಿ, ಕೇರಳದಲ್ಲಿ ಪುರುಷರಿಗಿಂತ ಮಹಿಳೆಯರ ಸಂಖ್ಯೆ ಹೆಚ್ಚಿದೆ. ಆದ್ದರಿಂದ ಸಾಕ್ಷರತೆಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಸಲಹೆ ನೀಡಿದರು.
    ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್.ಹುಲ್ಮನಿ ಮಾತನಾಡಿ, ಜಿಲ್ಲೆಯಲ್ಲಿ 11500 ಸ್ವ ಸಹಾಯ ಮಹಿಳಾ ಗುಂಪುಗಳಿದ್ದು, 1,50,000 ಮಹಿಳೆಯರು ಸಂಘಟಿತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದರು.
    ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕಿ ಐಶ್ವರ್ಯಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾಗರಾಜು, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ, ಗುರುದೇವ ಲಲಿತಾಕಲಾ ಅಕಾಡೆಮಿ ಮುಖ್ಯಸ್ಥೆ ಡಾ.ಚೇತನಾ ರಾಧಕೃಷ್ಣ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts