More

    ಸ್ತ್ರೀ ಸಮಾನತೆಗೆ ಮಹತ್ವ ನೀಡಿದ ರಾಜ್ಯ ಕಾಂಗ್ರೆಸ್ ಸರ್ಕಾರ: ಎಂಎಲ್‌ಸಿ ದಿನೇಶ್ ಗೂಳಿಗೌಡ ಮೆಚ್ಚುಗೆ

    ಮಂಡ್ಯ: ಸಮಾಜದ ಬೆಳವಣಿಗೆಯನ್ನು ನಾವು ಆ ಸಮಾಜದ ಹೆಣ್ಣು ಮಕ್ಕಳ ಏಳಿಗೆಯ ಮೇಲೆ ನಿರ್ಧರಿಸುತ್ತೇವೆಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ್ದಾರೆ. ಆ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಹೆಜ್ಜೆ ಇಟ್ಟಿದೆ. ಮಹಿಳೆಯರ ಸರ್ವತೋಮುಖ ಅಭಿವೃದ್ಧಿ ಟೊಂಕ ಕಟ್ಟಿ ನಿಂತಿದೆ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಹೇಳಿದ್ದಾರೆ.
    ಈಗಾಗಲೇ ಅನೇಕ ಮಹಿಳಾ ಪರ ಯೋಜನೆಗಳನ್ನು ಜಾರಿಗೆ ತಂದಿದೆ. ಆರ್ಥಿಕವಾಗಿ ಸ್ವಾವಲಂಬಿಯಾಗುವ ನಿಟ್ಟಿನಲ್ಲಿ ಮಹಿಳಾ ಸಬಲೀಕರಣದ ದೃಷ್ಟಿಯಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಆ ಮೂಲಕ ಅಂಬೇಡ್ಕರ್ ಹಾಗೂ ಸಂವಿಧಾನದ ಆಶಯಗಳನ್ನು ಈಡೇರಿಸಿದೆ. ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆಯ ಮೂಲಕ ಮಹಿಳೆಯರಿಗೆ ಶಕ್ತಿ ತುಂಬಿದೆ. ಈವರೆಗೆ 166.55 ಕೋಟಿ ಮಹಿಳೆಯರು ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತವಾಗಿ ಟಿಕೆಟ್ ಪಡೆದು ಪ್ರಯಾಣ ಮಾಡಿದ್ದಾರೆ. ಅದಕ್ಕಾಗಿ ರಾಜ್ಯ ಸರ್ಕಾರ 3,983 ಕೋಟಿ ರೂ ವ್ಯಯಿಸಿದೆ. ಇದರಿಂದ ರಾಜ್ಯಾದ್ಯಂತ ಎಲ್ಲ ಪ್ರವಾಸಿ ಕೇಂದ್ರಗಳಿಗೆ ಪ್ರವಾಸಿಗರ ಸಂಖ್ಯೆ 3 ಪಟ್ಟು ಹೆಚ್ಚಿದೆ. ಪ್ರವಾಸಿ ಕೇಂದ್ರಗಳ ಸುತ್ತಲಿನ ಅಂಗಡಿ ಮುಂಗಟ್ಟುಗಳು ಸೇರಿ ವಿವಿಧ ಉಪ ಉದ್ಯೋಗಗಳಿಗೆ ಅನುಕೂಲವಾಗಿದೆ ಎಂದಿದ್ದಾರೆ.
    ಮಾತ್ರವಲ್ಲದೆ ಸರ್ಕಾರ ಆಕೆಯನ್ನೇ ಕುಟುಂಬದ ಯಜಮಾನಿ ಎಂದು ಪರಿಗಣಿಸಿ ಗೃಹಲಕ್ಷ್ಮೀ ಯೋಜನೆ ಜಾರಿಗೆ ತಂದಿದೆ. ಪ್ರತಿ ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ಮಾಸಿಕ 2 ಸಾವಿರ ರೂ ಜಮಾ ಮಾಡಲಾಗುತ್ತಿದೆ. ಇದುವರೆಗೆ 11,726 ಕೋಟಿ ರೂ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ. ಒಟ್ಟಿನಲ್ಲಿ ಸ್ತ್ರೀ ಸಮಾನತೆಯ ಮೂಲಕ ಇಡೀ ಸಮಾಜದ ಸಾಮಾಜಿಕ, ಆರ್ಥಿಕ ಅಭಿವೃದ್ಧಿಗೆ ಸರ್ಕಾರ ಮಹತ್ವ ನೀಡಿ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts