ಮೈಸೂರು: ನಲ್ಲಿ ಕೆಲಸ ಮೇಲ್ನೋಟಕ್ಕೆ ಬಹಳ ಸುಲಭ ಎನಿಸಿದರೂ ಇದು ದೈಹಿಕ ಮತ್ತು ಮಾನಸಿಕವಾಗಿ ಅತ್ಯಂತ ಕಠಿಣದಾಯಕ ಕೆಲಸ ಎಂದು ಸಾಹಿತಿ ಬನ್ನೂರು ಕೆ.ರಾಜು ಅಭಿಪ್ರಾಯಪಟ್ಟರು.
ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯ ನಲ್ಲಿ ಮತ್ತು ಒಳಚರಂಡಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಬೃಂದಾವನ ಬಡಾವಣೆಯ ನಗರಪಾಲಿಕೆ ಸಮುದಾಯ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ನಲ್ಲಿ ಕೆಲಸಗಾರರ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ನಲ್ಲಿ ಮತ್ತು ಒಳ ಚರಂಡಿ ಕೆಲಸಗಾರ ಕೆಲಸ ಬಸವಣ್ಣ ಅವರ ಕಾಯಕವೇ ಕೈಲಾಸ ಎನ್ನುವ ಸಂದೇಶದಂತೆ ಕಾಯಕ ಜೀವಿಗಳ ಕೆಲಸವಾಗಿದೆ. ದುಡಿಮೆಯನ್ನೇ ನಂಬಿರುವ ಬೆವರಿನ ಮಕ್ಕಳಾದ ನೆಲ್ಲಿ ಕೆಲಸಗಾರರು ಆರ್ಥಿಕವಾಗಿ ಸಬಲರಾಗಲು ಸರ್ಕಾರಗಳು ಹೆಚ್ಚಿನ ಸವಲತ್ತುಗಳನ್ನು ಕೊಡಬೇಕು ಎಂದು ಆಗ್ರಹಿಸಿದರು.
ಸವಲತ್ತು ಪಡೆಯಲು ಕಾರ್ಮಿಕ ಇಲಾಖೆಯಿಂದ ಗುರುತಿನ ಕಾರ್ಡ್ ಅನ್ನು ಆನ್‌ಲೈನ್ ಮೂಲಕ ಪಡೆಯಬೇಕಾಗಿದೆ. ಆದರೆ ಇಲ್ಲಿ ಅರ್ಜಿ ಸಲ್ಲಿಸಲು ಅವಿದ್ಯಾವಂತರಿಗೆ ತ್ರಾಸವಾಗುತ್ತಿದೆ. ಮಧ್ಯವರ್ತಿಗಳ ಹಾವಳಿಯೂ ಹೆಚ್ಚುತ್ತದೆ. ಹಾಗಾಗಿ ಪ್ರಕ್ರಿಯೆ ಸರಳೀಕರಣಗೊಳಿಸಿ ಎಲ್ಲರಿಗೂ ಸೌಲಭ್ಯ ಪಡೆಯಲು ಸಾಧ್ಯವಾಗುವಂತೆ ಮಾಡಬೇಕು ಎಂದು ಕೋರಿದರು.
ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ.ವಿಶ್ವೇಶ್ವರಯ್ಯ ಅವರು ಜೋಡೆತ್ತುಗಳಂತೆ ದುಡಿದು ಆಧುನಿಕ ಮೈಸೂರು ಕಟ್ಟಿದರು. ಅಂದಿನ ಕಾಲದಲ್ಲಿಯೇ ಕೆರೆ-ಕಟ್ಟೆ, ಅಣೆಕಟ್ಟೆಗಳು, ಶೈಕ್ಷಣಿಕ ಸಂಸ್ಥೆಗಳು, ಅರಮನೆ, ಗುರುಮನೆ, ಕೃಷಿ ಸೇರಿದಂತೆ, ಕಲೆ, ಸಂಸ್ಕೃತಿ ಸೇರಿದಂತೆ ಎಲ್ಲ ರಂಗಗಳಲ್ಲಿಯೂ ಸಾಧನೆ ಮಾಡಲಾಯಿತು ಎಂದು ಬಣ್ಣಿಸಿದರು.
ಭುವನೇಶ್ವರಿ, ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ.ವಿಶ್ವೇಶ್ವರಯ್ಯ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿದ ನಗರಪಾಲಿಕೆ ಮಾಜಿ ಸದಸ್ಯ ಎಸ್‌ಬಿಎಂ ಮಂಜು ಮಾತನಾಡಿ, ನಲ್ಲಿ ಮತ್ತು ಒಳಚರಂಡಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘವು ಎಲ್ಲ ದೃಷ್ಟಿಯಿಂದಲೂ ಅತ್ಯುತ್ತಮ ಸಂಘವಾಗಿದ್ದು, ಸದಸ್ಯರ ಹಿತದೃಷ್ಟಿಯಿಂದ ಸಹಕಾರ ಸಂಘ ಹಾಗೂ ಗೃಹ ನಿರ್ಮಾಣ ಸಂಘ ಸ್ಥಾಪಿಸಲು ಸಲಹೆ ನೀಡಿದರು.
ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಶಿವಕುಮಾರ್ ಮಾತನಾಡಿ, ಕಾರ್ಮಿಕರ ಮಕ್ಕಳು ಕಾರ್ಮಿಕರಾಗಿಯೇ ಇರಬೇಕಿಲ್ಲ. ಅವರೂ ಮನಸ್ಸು ಮಾಡಿದರೆ ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳು, ವೈದ್ಯರು, ಇಂಜಿನಿಯರ್‌ಗಳಾಗಬಹುದು. ಇದನ್ನು ನೀವು ಸಾಧಿಸಬೇಕೆಂದು ಶುಭಹಾರೈಸಿದರು.
ಕಾರ್ಮಿಕ ಇಲಾಖೆಯ ಅಧಿಕಾರಿಗಳಾದ ಚೇತನ್, ಜಿ.ಬಿ.ವೀಣಾ, ಜಯಣ್ಣ ಮಾತನಾಡಿದರು. ಇದೇ ಸಂದರ್ಭದಲ್ಲಿ ಹಿರಿಯ ನಲ್ಲಿ ಕೆಲಸಗಾರರಾದ ಮಾದಯ್ಯ, ಶಿವಣ್ಣ, ಜಯಕುಮಾರ್, ಜೆ.ಎನ್.ಕುಮಾರ್ ಅವರಿಗೆ ‘ನಲ್ಲಿ ಕೆಲಸದ ನಕ್ಷತ್ರ’ಎಂಬ ಪ್ರಶಸ್ತಿ ನೀಡಿ ಗೌರವಿಸಿದರು.
ಸಂಘದ ಅಧ್ಯಕ್ಷ ಮಹೇಶ್ ಎಸ್.ಜಯನಗರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯದರ್ಶಿ ಎಂ.ರವಿಕುಮಾರ್, ಜಂಟಿ ಕಾರ್ಯದರ್ಶಿ ಎಸ್.ಪಳನಿಸ್ವಾಮಿ, ಖಜಾಂಚಿ ಎಂ.ಪ್ರಕಾಶ್, ನಿರ್ದೇಶಕರಾದ ಚಂದ್ರೇಗೌಡ, ಕುಮಾರ್, ಯೋಗೇಶ್ ಹೆಬ್ಬಾಳ್, ಸುರೇಶ್, ಅನಿಲ್ ಕುಮಾರ್, ಮೊಹಮದ್‌ಜಾಕಿರ್‌ಹುಸೇನ್, ಸಂತೋಷ್‌ಕುಮಾರ್ ಬೇಹರ, ಯೋಗೇಶ್, ರುದ್ರಸ್ವಾಮಿ, ಶಿವರಾಜು, ಕನ್ನಡ ಹೋರಾಟಗಾರ ಎಸ್.ಬಾಲಕೃಷ್ಣ, ಏಜಾಜ್ ಪಾಷ ಇತರರಿದ್ದರು.
ಮೈಸೂರಿನಲ್ಲಿ ವಿಶ್ವ ನಲ್ಲಿ ಕೆಲಸಗಾರರ ದಿನಾಚರಣೆ

You Might Also Like
ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping
sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…
ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water
coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…
ಗಂಡ-ಹೆಂಡತಿಯ ಸಂಬಂಧದಲ್ಲಿ ಮೂರನೇ ವ್ಯಕ್ತಿ ಎಂಟ್ರಿಯಾಗಿದ್ದರೆ ಈ ರೀತಿ ಸುಲಭವಾಗಿ ತಿಳಿದುಕೊಳ್ಳಬಹುದು..! Husband and Wife
Husband and Wife : ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ…