More

    ಇಂಟರ್ನ್‌ಶಿಪ್ ಭತ್ಯೆ ಹೆಚ್ಚಿಸುವಂತೆ ಒತ್ತಾಯಿಸಿ ಪ್ರತಿಭಟನೆ

    ಶಿವಮೊಗ್ಗ: ಕಿರಿಯ ಪಶು ವೈದ್ಯಕೀಯ ವಿದ್ಯಾರ್ಥಿಗಳ ಇಂಟರ್ನ್‌ಶಿಪ್ ಭತ್ಯೆ ಹೆಚ್ಚಿಸುವಂತೆ ಒತ್ತಾಯಿಸಿ ಶಿವಮೊಗ್ಗ ಪಶು ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು, ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
    ಬೀದರ್ ಕರ್ನಾಟಕ ಪಶುವೆದ್ಯಕಿಯ, ಪಶು ಮತ್ತು ಮಿನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದ ಬಿವಿಎಸ್ ಮತ್ತು ಎಐಎಸ್ ಪದವಿಯ ಅಂತಿಮ ಶೈಕ್ಷಣಿಕ ಭಾಗವಾದ ಒಂದು ವರ್ಷದ ಇಂಟರ್ನ್‌ಶಿಪ್‌ನ್ನು ರಾಜ್ಯ ಹಾಗೂ ಹೊರರಾಜ್ಯದ ಹಲವು ಜಿಲ್ಲಾಸ್ಪತ್ರೆಗಳು, ಸಂಶೋಧನಾ ಕೇಂದ್ರಗಳಲ್ಲಿ ಒಂದು ವರ್ಷ ಕಡ್ಡಾಯವಾಗಿ ಮಾಡಬೇಕಿದೆ. ಆದರೆ ಇಂಟರ್ನ್ ವಿದ್ಯಾರ್ಥಿಗಳಿಗೆ 8 ವರ್ಷಗಳಿಂದ ನೀಡುತ್ತಿರುವ ಮಾಸಿಕ 14 ಸಾವಿರ ರೂ. ಸಾಲುತ್ತಿಲ್ಲ. ಹಾಗಾಗಿ ಹೆಚ್ಚಿನ ಭತ್ಯೆ ನೀಡಬೇಕು ಎಂದು ಒತ್ತಾಯಿಸಿದರು.
    14 ಸಾವಿರ ರೂ. ವೇತನದಲ್ಲೆ ಊಟ, ವಸತಿ, ಸಾರಿಗೆ, ಓಡಾಟದ ವೆಚ್ಚ ಹಾಗೂ ವ್ಯಾಸಂಗಕ್ಕೆ ಸಂಬಂಧಿಸಿದ ಖರ್ಚುಗಳನ್ನು ಭರಿಸಬೇಕಿದೆ. ಇತ್ತೀಚಿನ ದಿನಗಳಲ್ಲಿ ನಿತ್ಯ ಬಳಕೆಯ ವಸ್ತುಗಳ ದರ ಹೆಚ್ಚಿದ್ದು ಮಾಸಿಕ 20 ಸಾವಿರ ರೂ.ಗೂ ಅಧಿಕ ಖರ್ಚು ಬರುತ್ತದೆ. ಇದಲ್ಲದೆ ವಿವಿಗೆ ಕೂಡ ವಾರ್ಷಿಕ 45 ಸಾವಿರ ರೂ. ಶುಲ್ಕ ಪಾವತಿಸಬೇಕಿದೆ. ಇಂಟರ್ನ್ ಅವಧಿಯಲ್ಲಿ ಮಾಸಿಕ ಭತ್ಯೆ ನೀಡುವುದರಿಂದ ಯಾವುದೇ ವಿದ್ಯಾರ್ಥಿವೇತನ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರೋಹಿತ್, ನವೀನ್, ಯಶಸ್ವಿ, ರಕ್ಷಿತ್, ಹೇಮಂತ್, ಸತ್ಯಾ, ಪೃಥ್ವಿ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts