ಉಡುಪಿಯ ದೇವಸ್ಥಾನದಲ್ಲಿ ಮಹಿಳೆಯ ಚಿನ್ನದ ಸರ ಕದ್ದ ಆರೋಪಿ ಕೊನೆಗೂ ಅಂದರ್​​!

udupi kalla
Published on

ಉಡುಪಿ: ಅಂತರ್ ​ರಾಜ್ಯ ಸರಗಳ್ಳನೊಬ್ಬನನ್ನು ಉಡುಪಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ದಾಂಡೇಲಿಯ ಪಟೇಲ್​​​ ನಗರದ ನಿವಾಸಿ ಮೌಲಾಲಿ ಜಮಾದಾರ್ ಬಂಧಿತ. ಅ.3ರಂದು ಉಡುಪಿಯ ಕಡಿಯಾಳಿ ಮಹಿಷಮರ್ಧಿನಿ ದೇವಾಸ್ಥಾನದಲ್ಲಿ ಚಂಡಿಕಾ ಹೋಮ ಮುಗಿಸಿ ತೆರಳುತ್ತಿದ್ದ ಪ್ರೇಮ ಎಂಬುವರ ಕೊರಳಲ್ಲಿದ್ದ ಚಿನ್ನದ ಸರವನ್ನು ಮೌಲಾಲಿ ಜಮಾದಾರ್ ಕಿತ್ತುಕೊಂಡು ಪರಾರಿಯಾಗಿದ್ದ.

ಈ ಬಗ್ಗೆ ಪ್ರೇಮಾ, ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕಳ್ಳನಿಗಾಗಿ ಬಲೆ ಬೀಸಿದ ಪೊಲೀಸರು, ದೇವಸ್ಥಾನದಲ್ಲಿದ್ದ ಸಿಸಿ ಟಿವಿ ದೃಶ್ಯಾವಳಿಗಳು ಮತ್ತು ಮೊಬೈಲ್ ಟವರ್​​​ ಲೊಕೇಷನ್​ ಆಧಾರಿಸಿ ತನಿಖೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಕದ್ದ ಸರವನ್ನು ಆರೋಪಿಯು ಧಾರವಾಡದ ಟೋಲ್ ನಾಕಾ ಬಳಿಯ ಚಿನ್ನದ ಅಂಗಡಿಯೊಂದಕ್ಕೆ ಮಾರಿದ್ದ. ವಿಷಯ ಗೊತ್ತಾಗುತ್ತಿದ್ದಂತೆ ಈತನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ನಂತರ ಈತನೊಬ್ಬ ಅಂತರ್​ ರಾಜ್ಯ ಕಳ್ಳ ಎಂಬುದೂ ಬಯಲಾಗಿದೆ. ಈತನ ವಿರುದ್ಧ ಕರ್ನಾಟಕ ಮತ್ತು ಗೋವಾದಲ್ಲಿ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಆರೋಪಿಯಿಂದ 3 ಲಕ್ಷ ಮೌಲ್ಯದ 63 ಗ್ರಾಂ ತೂಕದ‌ ಚಿನ್ನವನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net