More

    ಮಹಿಳಾ ಮತದಾರರ ಬೆದರಿಸುವ ತಂತ್ರ, ಆಯೋಗಕ್ಕೆ ದೂರು

    ಶಿವಮೊಗ್ಗ: ಕಾಂಗ್ರೆಸ್ ಸರ್ಕಾರ ಏಜೆನ್ಸಿ ಮೂಲಕ ಫೋನ್ ಮಾಡಿಸಿ ಬಿಜೆಪಿಗೆ ಮತ ಹಾಕಿದರೆ ಯೋಜನೆಗಳನ್ನು ನಿಲ್ಲಿಸುವುದಾಗಿ ಮಹಿಳಾ ಮತದಾರರನ್ನು ಬೆದರಿಸುವ ಕೆಲಸ ಮಾಡುತ್ತಿದ್ದು ಸಂಬಂಧ ಚುನಾವಣಾ ಆಯೋಗಕ್ಕೆ ದೂರು ನೀಡುವ ಬಗ್ಗೆ ಬಿಜೆಪಿ ಚಿಂತನೆ ನಡೆಸಿದೆ ಎಂದು ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

    ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಜೆನ್ಸಿ ಮೂಲಕ ಫೋನ್ ಮಾಡಿಸಿ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ. ಜತೆಗೆ ತಮ್ಮದೆಯಾದ ಸಾಫ್ಟ್‌ವೇರ್ ಇದ್ದು ಬಿಜೆಪಿಗೆ ಮತ ಹಾಕಿದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತೇವೆ ಎಂದು ಬೆದರಿಸುವ ತಂತ್ರವನ್ನು ಅನುಸರಿಸಲಾಗುತ್ತಿದೆ. ಇಗಾಗಲೇ 8ರಿಂದ 10 ದೂರುಗಳು ಬಂದಿದೆ ಎಂದರು.
    ಗೃಹ ಸಚಿವ ಅಮಿತ್ ಷಾ ಅವರು ಏಪ್ರಿಲ್ 2ರಂದು ಬೆಂಗಳೂರಿಗೆ ಬರುತ್ತಿದ್ದಾರೆ. ಅವರ ಕರ್ನಾಟಕಕ್ಕೆ ಹೆಚ್ಚು ಸಮಯ ಕೊಡುವುದರಿಂದ ಬಿಜೆಪಿಗೆ ಬಲ ಬರಲಿದೆ. ಆದರೆ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಅಮಿತ್ ಷಾ ಮತ್ತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಹಗುರವಾಗಿ ಮಾತನಾಡಿರುವುದು ದುರ್ದೈದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.
    ಅಮಿತ್ ಷಾ ಅವರನ್ನು ಸರ್ದಾರ್ ವಲ್ಲಬಬಾಯಿ ಪಟೇಲ್ ಅವರಿಗೆ ಹೋಲಿಕೆ ಮಾಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಯತೀಂದ್ರ ಅವರು ಗುಂಡಾಗೆ ಹೋಲಿಕೆ ಮಾಡಿರುವುದು ಸರಿಯಲ್ಲ. ಜತೆಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿರುವುದು ನಾಟಕ ಎಂದಿದ್ದಾರೆ. ವೈಯಕ್ತಿಕ ಟೀಕೆಗಳನ್ನು ಬಿಟ್ಟು ಅಭಿವೃದ್ಧಿ ರಾಜಕಾರಣ ಮಾಡಬೇಕಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts