ಮೈಸೂರು: ಭಾರತೀಯ ಕಲೆಗಳಲ್ಲಿ ಮಾತೃತ್ವದ ಪ್ರಧಾನ ಸೆಲೆ ಇದೆ. ನಮ್ಮ ಕಲೆ, ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಬೇಕು. ಹೆಣ್ಣು ಮಕ್ಕಳಿಗೆ ಬಹುಬೇಗನೆ ಸಂಗೀತ, ನೃತ್ಯ ಕಲೆ ಒಲಿಯುತ್ತದೆ. ಪಾಲಕರು ಇದರ ಮಹತ್ವ ಅರಿತು ಪ್ರೋತ್ಸಾಹಿಸಬೇಕು ಎಂದು ಹಿರಿಯ ಕಲಾವಿದ ಮಂಡ್ಯ ರಮೇಶ್ ಅಭಿಪ್ರಾಯಪಟ್ಟರು.
ನಗರದ ನೃತ್ಯ ಗಿರಿ- ಪ್ರದರ್ಶಕ ಕಲೆಗಳ ಸಂಶೋಧನಾ ಕೇಂದ್ರವು ಕರ್ನಾಟಕ ಕಲಾಮಂದಿರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಯುವ ಕಲಾವಿದೆ ತನುಶ್ರೀ ಚಿನ್ನಯ್ಯ ಅವರ ಭರತನಾಟ್ಯ ರಂಗ ಪ್ರವೇಶ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶ್ರದ್ಧಾವಂತರಿಗೆ ಮಾತ್ರ ಕಲೆ ಒಲಿಯುವ ಕಲಾ ಚಟುವಟಿಕೆಗಳು ನಮ್ಮ ಸಂಸ್ಕಾರವನ್ನೂ ವೃದ್ಧಿಸುತ್ತವೆ. ನಮ್ಮ ಭಾರತೀಯ ಕಲೆಗಳಲ್ಲಿ ಮಾತೃತ್ವ ಪ್ರಧಾನ ಸೆಲೆಯಾಗಿದ್ದು, ಕಲೆ, ಪರಂಪರೆ, ಸಂಸ್ಕೃತಿಯನ್ನು ಮಕ್ಕಳಿಗೆ ಪರಿಚಯಿಸಬೇಕು. ಹೆಣ್ಣು ಮಕ್ಕಳಿಗೆ ಸಂಗೀತ- ನೃತ್ಯ ಬಹುಬೇಗ ಒಲಿಯುತ್ತದೆ. ಪಾಲಕರು ಇದರ ಮಹತ್ವ ಅರಿತು ಪ್ರೋತ್ಸಾಹಿಸಬೇಕು ಎಂದು ಆಶಿಸಿದರು.
ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (ಆಯಿಷ್) ನಿರ್ದೇಶಕಿ ಡಾ.ಎಂ.ಪುಷ್ಪಾವತಿ ಮಾತನಾಡಿ, ನೃತ್ಯ ಮತ್ತು ಸಂಗೀತಕ್ಕೆ ಹಲವು ರೋಗಗಳನ್ನು ಗುಣಪಡಿಸುವ ಶಕ್ತಿ ಇದೆ. ವಾಕ್ ಮತ್ತು ಶ್ರವಣ ತಜ್ಞರ ವೃತ್ತಿಗೆ ಕಲಾ ವಂತಿಕೆ ಸಾಕಷ್ಟು ಸಹಕಾರಿಯಾಗಲಿದೆ ಎಂದು ಹೇಳಿದರು.
ಥೆರಪಿ ಸಂದರ್ಭ ಔಷಧಕ್ಕಿಂತಲೂ ಮನಕ್ಕೆ ಮುದ ನೀಡುವ ಸಂಗೀತ- ನಾಟ್ಯದಿಂದ ರೋಗಿ ಗುಣಮುಖನಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿರುವ ಕಲಾವಿದೆ ತನುಶ್ರೀಗೆ ಉತ್ತಮ ಭವಿಷ್ಯವಿದೆ ಎಂದರು.
ಹಿರಿಯ ವಿದುಷಿ, ನೃತ್ಯ ಗಿರಿ ಸಂಸ್ಥೆ ನಿರ್ದೇಶಕಿ ಕೃಪಾ ಫಡ್ಕೆ, ಮುಖ್ಯ ಶಿಕ್ಷಕ ಚಿನ್ನಯ್ಯ, ಅಭಿಯೋಜನಾ ಇಲಾಖೆ ಎಫ್‌ಡಿಸಿ ಸುಮಲತಾ ಇತರರು ಇದ್ದರು.
ಗುರುವಂದನೆ: ಇದೇ ಸಂದರ್ಭ ಹಿರಿಯ ವಿದುಷಿಯರಾದ ಡಾ. ಆರ್.ಎನ್. ಶ್ರೀಲತಾ, ಡಾ. ಕೃಪಾ ಫಡ್ಕೆ ಅವರಿಗೆ ಕಲಾವಿದೆ ತನುಶ್ರೀ ಗುರುವಂದನೆ ಸಮರ್ಪಿಸಿ ಗೌರವಿಸಿದರು.
ಮಕ್ಕಳಿಗೆ ಕಲೆ, ಸಂಸ್ಕೃತಿ ಪರಿಚಯಿಸಿ: ಹಿರಿಯ ಕಲಾವಿದ ಮಂಡ್ಯ ರಮೇಶ್ ಸಲಹೆ

You Might Also Like
ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips
ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…
ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips
ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…
ವೇಜ್, ನಾನ್ವೆಜ್ ಖಾದ್ಯ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!
Tomato : ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು ಕರಿ, ಗ್ರೇವಿ, ಸೂಪ್…