ಶಿಶಿಲ ದೇವಸ್ಥಾನ ಸಂಪರ್ಕ ಕಡಿತ : ಮುಳುಗಡೆಯಾದ ಕಿಂಡಿ ಅಣೆಕಟ್ಟು

ಕೊಕ್ಕಡ: ಇತಿಹಾಸ ಪ್ರಸಿದ್ಧ ಮತ್ಸ್ಯ ಕ್ಷೇತ್ರ ಶಿಶಿಲ ಗ್ರಾಮದ ಶ್ರೀ ಶಿಶಿಲೇಶ್ವರ ದೇವಸ್ಥಾನದ ಪಕ್ಕದಲ್ಲೇ ಹರಿಯುತ್ತಿರುವ ಕಪಿಲ ನದಿಯಲ್ಲಿ ಬುಧವಾರ ಸಂಜೆ ಸುರಿದ ಭಾರಿ ಮಳೆಗೆ ನಿರಂತರ ನೀರು ಏರಿಕೆಯಾಗಿ ಕಿಂಡಿ ಅಣೆಕಟ್ಟು ಮುಳುಗಡೆಯಾಗಿದೆ. ಬೈರಾಪುರ ಘಾಟಿಯಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಕಪಿಲ ನದಿಯಲ್ಲಿ ಪ್ರವಾಹ ಉಕ್ಕಿ ಹರಿಯಲಾರಂಭಿಸಿದ್ದು, ನೀರಿನ ಜತೆ-ಜತೆ ದೊಡ್ಡ-ದೊಡ್ಡ ಗಾತ್ರದ ಮರಗಳು ಬರುತ್ತಿದ್ದು, ಶಿಶಿಲದ ಕಿಂಡಿ ಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಇದರಿಂದಾಗಿ ನೀರು ಹರಿಯಲು ಅಡ್ಡಿಯಾಗಿದೆ.