ತೀರ್ಥಹಳ್ಳಿ: ನೀಟ್ ಪರೀಕ್ಷೆ ಅಕ್ರಮದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಆಗ್ರಹಿಸಿ ತಾಲೂಕು ಎನ್‌ಎಸ್‌ಯುಐ ಪದಾಧಿಕಾರಿಗಳು ಶನಿವಾರ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
ನೀಟ್ ಪರೀಕ್ಷೆ ಫಲಿತಾಂಶ, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಕ ಕಾರಣಗಳಿಂದ ದೇಶದ ಲಕ್ಷಾಂತರ ವೈದ್ಯಕೀಯ ಸೀಟುಗಳ ಆಕಾಂಕ್ಷಿಗಳಿಗೆ ಅನ್ಯಾಯವಾಗಿದೆ. 67 ವಿದ್ಯಾರ್ಥಿಗಳು ಪ್ರಥಮ ರ‌್ಯಾಂಕ್ ಪಡೆದಿರುವುದು ಮತ್ತು ಒಂದೇ ಪರೀಕ್ಷಾ ಕೇಂದ್ರದ 8 ವಿದ್ಯಾರ್ಥಿಗಳಿಗೆ ಪ್ರಥಮ ರ‌್ಯಾಂಕ್ ಬಂದಿರುವುದು ಅಕ್ರಮ ನಡೆದಿರುವುದಕ್ಕೆ ಸಾಕ್ಷಿಯಾಗಿದೆ ಎಂದು ದೂರಿದರು.
ತರಾತುರಿಯಲ್ಲಿ ಕೃಪಾಂಕ ನೀಡಿರುವುದು ಮತ್ತು ಲೋಕಸಭಾ ಚುನಾವಣೆ ಫಲಿತಾಂಶ ದಿನದಂದೇ ನೀಟ್ ಫಲಿತಾಂಶ ಪ್ರಕಟಿಸಿರುವುದು ಅನುಮಾನ ಹೆಚ್ಚಿಸಿದೆ. ನೀಟ್ ಪರೀಕ್ಷೆ ಹಗರಣದ ನಂತರ ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೀಟ್ ಪರೀಕ್ಷೆ ಅಕ್ರಮ ತನಿಖೆ ನಡೆಸಬೇಕೆಂದು ತಾಲೂಕು ಎನ್‌ಎಸ್‌ಯುಐ ಅಧ್ಯಕ್ಷ ಸುಜಿತ್ ಒತ್ತಾಯಿಸಿದ್ದಾರೆ.
ವಿದ್ಯಾರ್ಥಿಗಳಾದ ಅನಿಲ್, ಶ್ರೀಕಾಂತ್ ಇತರರಿದ್ದರು.