More

    ಸೌಜನ್ಯಾ ಕೇಸು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ

    ಶಿವಮೊಗ್ಗ: ಸೌಜನ್ಯಾ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ವಿವೇಕ ಶಿವಮೊಗ್ಗ, ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಘಟನೆ ನಡೆದು ಹನ್ನೊಂದು ವರ್ಷಗಳಾಗಿವೆ. ಸೌಜನ್ಯ ಪ್ರಕರಣದ ಆರೋಪಿ ಎಂದು ಬಿಂಬಿಸಲ್ಪಟ್ಟಿದ್ದ ಸಂತೋಷ್ ರಾವ್‌ನನ್ನು ನಿರ್ದೋಷಿ ಎಂದು ಬಿಡುಗಡೆ ಮಾಡಿರುವುದು ಸ್ವಾಗತವೇ. ಆದರೆ ನಿಜವಾದ ಆರೋಪಿ ಯಾರು ಎಂದು ಇದುವರೆಗೂ ತಿಳಿದುಬಂದಿಲ್ಲ. ಆದ್ದರಿಂದ ನಿಜವಾದ ಆರೋಪಿಯನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಮಕ್ಕಳ ಹಕ್ಕುಗಳ ಆಯೋಗ ಮತ್ತು ಮಾನವ ಹಕ್ಕುಗಳ ಆಯೋಗ ಕಾರ್ಯತತ್ಪರರಾಗಿ ತಕ್ಷಣ ಕ್ರಮಕೈಗೊಳ್ಳಬೇಕು. ಪೊಲೀಸ್ ದೌರ್ಜನ್ಯಕ್ಕೆ ತುತ್ತಾದ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಪ್ರಮುಖರಾದ ಕೆ.ಪಿ.ಶ್ರೀಪಾಲ್, ಕೆ.ಎಲ್.ಅಶೋಕ್, ಅನನ್ಯ ಶಿವು, ಆರ್.ಕೆ.ಕುಮಾರ್, ರೇಖಾಂಬ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts