More

    ಇಷ್ಟಬಂದಹಾಗೆ ತನಿಖೆ ಸಾಧ್ಯವಿಲ್ಲ, ಏಕಾಏಕಿ ಬಂಧಿಸುವುದೂ ಇಲ್ಲ; ಗೃಹ ಸಚಿವ

    ಬೆಂಗಳೂರು: ಸಂಸದ ಪ್ರಜ್ವಲ್ ಪ್ರಕರಣದಲ್ಲಿ ಅನೇಕ ಮಹಿಳೆಯರ ಜೀವನದ ಪ್ರಶ್ನೆ ಇದೆ. ಇಷ್ಟ ಬಂದ ಹಾಗೆ ತನಿಖೆ ಮಾಡಲು ಆಗುವುದಿಲ್ಲ. ಹಾಗೆಯೇ ಯಾರನ್ನೇ ಆದರೂ ಏಕಾಏಕಿ ಬಂಧಿಸಲಾಗುವುದಿಲ್ಲ. ಅದಕ್ಕೆ ಪುರಾವೆಗಳು, ದೂರಿನಲ್ಲಿ ಏನು ಹೇಳಿರುತ್ತಾರೆ ಎಂಬುದೆಲ್ಲ ಮುಖ್ಯವಾಗುತ್ತವೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಪ್ರಜ್ವಲ್ ರೇವಣ್ಣ ಪ್ರಕರಣದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ
    ಪ್ರಜ್ವಲ್ ಪ್ರಕರಣ ಯಾವ ಸೆಕ್ಷನ್ ಅಡಿಯಲ್ಲಿ ಬರುತ್ತದೆ? ಅದರಲ್ಲಿ ಬಂಧಿಸಲು ಅವಕಾಶ ಇದೆಯೇ? ಜಾಮೀನು ಪಡೆಯುವಂಥ ಪ್ರಕರಣವೇ? ಈ ಅಂಶಗಳನ್ನೆಲ್ಲ ಪರಿಗಣಿಸಬೇಕಾಗುತ್ತದೆ ಎಂದು ಹೇಳಿದರು.
    ಅಪರಾಧ ದಂಡಸಂಹಿತೆಯ ಸೆಕ್ಷನ್ 41ಎ ಅಡಿ ನೊಟೀಸ್ ಕೊಡಲಾಗಿದೆ. ಆ ಪ್ರಕಾರ ಆರೋಪಿಗಳು 24 ಗಂಟೆಯ ಒಳಗೆ ವಿಚಾರಣೆಗೆ ಹಾಜರಾಗಬೇಕು. ವಿಚಾರಣೆಗೆ ಹಾಜರಾಗದೇ ಹೋದರೆ ತನಿಖಾ ತಂಡ ಮುಂದಿನ ಪ್ರಕ್ರಿಯೆ ಆರಂಭಿಸಲಿದೆ ಎಂದು ವಿವರಿಸಿದರು.
    ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಏನೂ ಕ್ರಮ ಕೈಗೊಂಡಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ, ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವಂತಹದ್ದು ಏನೂ ಇಲ್ಲ. ಕಾನೂನಿನ ಚೌಕಟ್ಟಿನಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತೇವೆ ಎಂದರು.
    ಎಸ್‌ಐಟಿ ಈಗಾಗಲೇ ನೊಟೀಸ್ ಜಾರಿ ಮಾಡಿದೆ. ಪ್ರಜ್ವಲ್ ವಿದೇಶಕ್ಕೆ ಹೋಗಿರುವ ಬಗ್ಗೆ ಎಲ್ಲ ಮಾಹಿತಿ ಇದೆ. ವಾಪಸ್ ಕರೆದುಕೊಂಡು ಬರಲು ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡಲಿದೆ. ಇದಕ್ಕೆ ಕೇಂದ್ರ ಸರ್ಕಾರದ ಸಹಕಾರವೂ ಬೇಕಾಗಬಹುದು ಅಥವಾ ಎಸ್‌ಐಟಿ ತಂಡದವರೇ ಕರೆದುಕೊಂಡು ಬರಬಹುದು ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts