More

    ನಾಳೆ ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣದ ‘ಉಸಿರಲ್ಲಿ ಏರಿಳಿತ’; ಘಟನೆ ನಡೆದ 29 ದಿನಗಳ ಬಳಿಕ ಮತ್ತೆ ಸಂಚಲನ!

    ಬೆಂಗಳೂರು: ರಾಜ್ಯದ ಗಮನ ಸೆಳೆದಿದ್ದ ಚಾಮರಾಜನಗರ ಆಮ್ಲಜನಕ ದುರಂತ ಪ್ರಕರಣದ ಉಸಿರಲ್ಲಿ ನಾಳೆ ಏರುಪೇರಾಗುವ ಸಾಧ್ಯತೆ ಇದೆ. ಏಕೆಂದರೆ ಘಟನೆ ನಡೆದ 29 ದಿನಗಳ ಬಳಿಕ ತನಿಖೆಗೆ ಚುರುಕು ಮುಟ್ಟಿದ್ದು, ನಾಳೆಯ ಮಟ್ಟಿಗೆ ಒಂದು ಸಂಚಲನ ಸೃಷ್ಟಿಯಾಗುವ ಸಾಧ್ಯತೆಯೂ ಇದೆ.

    ಆಕ್ಸಿಜನ್ ಕೊರತೆಯಿಂದಾಗಿ 24 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ನ್ಯಾಯಾಂಗಕ್ಕೆ ಒಪ್ಪಿಸಿರುವ ಸರ್ಕಾರ, ಅದರ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿ ಬಿ.ಎ. ಪಾಟೀಲ್ ಅವರನ್ನು ನೇಮಿಸಿದೆ. ಈ ಹಿನ್ನೆಲೆಯಲ್ಲಿ ನ್ಯಾ. ಪಾಟೀಲ್ ಅವರು ನಾಳೆ ಚಾಮರಾಜನಗರಕ್ಕೆ ಭೇಟಿ ನೀಡಲಿದ್ದು, ಇದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರಕ್ಕೆ ಇವರ ಮೊದಲ ಭೇಟಿ ಆಗಿರಲಿದೆ.

    ಇದನ್ನೂ ಓದಿ: ಸೋಂಕಿತ ತಾಯಿ ತೀರಿಹೋದ ಮೂರೇ ದಿನಕ್ಕೆ ಅಣ್ಣ-ತಮ್ಮನೂ ಕರೊನಾಗೆ ಬಲಿ; ಅಮ್ಮಂದಿರ ದಿನವೇ ಇಬ್ಬರೂ ಏಕಕಾಲಕ್ಕೇ ನಿಧನ! 

    ಪ್ರಕರಣ ನಡೆದು 29 ದಿನಗಳು ಕಳೆದಿದ್ದು, ನಾಳೆ ನಿವೃತ್ತ ನ್ಯಾಯಮೂರ್ತಿ ಅವರ ಭೇಟಿ ಮಹತ್ವವನ್ನು ಪಡೆಯಲಿದೆ. ಮಧ್ಯಾಹ್ನ 1.30ಕ್ಕೆ ಜಿಲ್ಲಾಸ್ಪತ್ರೆ ಹಾಗೂ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಭೇಟಿ ನೀಡಲಿರುವ ನ್ಯಾ. ಪಾಟೀಲ್, ಪರಿಶೀಲನೆ ಕೈಗೊಳ್ಳಲಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ನಿಂದ ನಿವೃತ್ತ ನ್ಯಾಯಮೂರ್ತಿ ವೇಣುಗೋಪಾಲಗೌಡ ನೇತೃತ್ವದಲ್ಲಿ ಈಗಾಗಲೇ ಸಮಿತಿ ರಚನೆಯಾಗಿದೆ. ಕಾನೂನು ಸೇವಾ ಪ್ರಾಧಿಕಾರದ ಉನ್ನತಮಟ್ಟದ ಈ ಸಮಿತಿ ಹೈಕೋರ್ಟ್ ಸೂಚನೆ ಮೇರೆಗೆ ಈಗಾಗಲೇ ಮಧ್ಯಂತರ ವರದಿ ನೀಡಿದೆ. ಇನ್ನು ನಾಳೆ ನ್ಯಾ. ಪಾಟೀಲ್ ಭೇಟಿ ನೀಡಲಿರುವುದು ಪ್ರಕರಣಕ್ಕೆ ಸಂಬಂಧಿಸಿದಂತೆ ಕುತೂಹಲ ಕೆರಳಿಸಿದೆ.

    ಆಪರೇಷನ್​ ಕೋಬ್ರಾ: ಬಾವಿಗೆ ಬಿದ್ದ ನಾಗರಹಾವನ್ನು ರಕ್ಷಿಸಿದ ಜನರು; ಬುಸುಗುಟ್ಟುತ್ತಲೇ ಮೇಲೆ ಬಂದ ಸರ್ಪ..

    ಎಮ್ಮೆಯ ಜೀವ ಉಳಿಸಲು ಹೋಗಿ ಪ್ರಾಣ ಕಳೆದುಕೊಂಡ; ನೀರಿನ ಗುಂಡಿಗೆ ಬಿದ್ದು ಮೃತಪಟ್ಟ ಹುಡುಗ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts