ಆದಾಯಕ್ಕೆ ತಕ್ಕಂತೆ ಹೂಡಿಕೆ ಅಗತ್ಯ : ಎಲ್ಟನ್ ಮೆನೆಜಸ್

kota investers
ಕೋಟೇಶ್ವರದ ಕಾಳಾವರ ವರದರಾಜ ಎಂ.ಶೆಟ್ಟಿ ಕಾಲೇಜಿನಲ್ಲಿ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮದಲ್ಲಿ ಎಲ್ಟನ್ ಮೆನೇಜಸ್ ಮಾತನಾಡಿದರು
Published on

ಕೋಟ: ಆದಾಯ ಹಾಗೂ ಹೂಡಿಕೆ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಯಾರಿಗೆ ವ್ಯಕ್ತಿಗೆ ಹೆಚ್ಚು ಆದಾಯ ಇರುತ್ತದೋ ಅಂತವರು ಹೆಚ್ಚು ಹೂಡಿಕೆ ಮಾಡಬೇಕಾಗುತ್ತದೆ. ಆದರೆ ಹೂಡಿಕೆ ಮಾಡುವಾಗ ಸರಿಯಾದ ಸಂಸ್ಥೆಯಲ್ಲಿ ಹೂಡಿಕೆ ಮಾಡಿದರೆ ಮಾತ್ರ ಲಾಭ ಪಡೆಯಲು ಸಾಧ್ಯ ಎಂದು ಎಲ್ಟನ್ ಮೆನೆಜಸ್ ಹೇಳಿದರು.

ಕುಂದಾಪುರ ಕೋಟೇಶ್ವರದ ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗ ಮತ್ತು ಮಂಗಳೂರು ವಿವಿ ವಾಣಿಜ್ಯ ಶಾಸ್ತ್ರ ಉಪನ್ಯಾಸಕರ ಸಂಘ ಏರ್ಪಡಿಸಿದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಪ್ರಾಂಶುಪಾಲ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ಲಿಯೋ ಅಮಲ್ ಎ., ಐಕ್ಯೂಎಸಿ ಸಂಚಾಲಕ ನಾಗರಾಜ ಯು. ಉಪಸ್ಥಿತರಿದ್ದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಶೇಖರ ಬಿ. ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಡಾ.ವೆಂಕಟರಾಮ ಭಟ್ ವಂದಿಸಿದರು. ಶ್ರೇಯಾ ಮತ್ತು ತಂಡ ಪ್ರಾರ್ಥಿಸಿ, ಅನನ್ಯಾ ಅಂತಿಮ ಬಿ.ಕಾಂ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net