ವಿಜಯವಾಣಿ ಸುದ್ದಿಜಾಲ ಕಾಸರಗೋಡು
ಪೆರ್ಲ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ 48ನೇ ವಾರ್ಷಿಕೋತ್ಸವ, ಶ್ರೀ ಅಯ್ಯಪ್ಪನ್ ತಿರುವಿಳಕ್ಕ್ ಮಹೋತ್ಸವ, ಶ್ರೀ ಅಯ್ಯಪ್ಪ ಭಜನಾ ಮಂದಿರ ವಠಾರದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀಧರ್ಮಶಾಸ್ತಾ ಭವನದ ಲೋಕಾರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮಂದಿರದಲ್ಲಿ ಜರುಗಿತು.
ಉಕ್ಕಿನಡ್ಕ ಶ್ರೀ ಅಯ್ಯಪ್ಪ ಭಜನಾ ಮಂದಿರ ಸಮಿತಿ ಅಧ್ಯಕ್ಷ ಡಾ.ಜಯಗೋವಿಂದ ಉಕ್ಕಿನಡ್ಕ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.
ಉತ್ಸವ ಸಮಿತಿ ಅಧ್ಯಕ್ಷ ಗುರುಸ್ವಾಮಿ ಶ್ರೀಧರ ಬಜಕೂಡ್ಲು, ಮಂದಿರ ಸಮಿತಿ ಅಧ್ಯಕ್ಷ ಉದಯ ಚೆಟ್ಟಿಯಾರ್, ಚಂದ್ರಶೇಖರ ಆಚಾರ್ಯ ಬಜಕೂಡ್ಲು, ಗ್ರಾಪಂ ಸದಸ್ಯೆ ಉಷಾ ಗಣೇಶ್, ಸದಾಶಿವ ಭಟ್ ಹರಿನಿಲಯ, ಸುಜಿತ್ ರೈ ಬಜಕೂಡ್ಲು, ಪದ್ಮನಾಭ ಸುವರ್ಣ ಬಜಕೂಡ್ಲು ಉಪಸ್ಥಿತರಿದ್ದರು.
ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ, ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ ಅವರ ಶುಭಾಶೀರ್ವಾದ, ಶುಳುವಾಲುಮೂಲೆ ಶಿವಸುಬ್ರಹ್ಮಣ್ಯ ಭಟ್ ಅವರ ಪೌರೋಹಿತ್ಯದಲ್ಲಿ ಡಿ.3ರಿಂದ 5ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಾರ್ಷಿಕೋತ್ಸವ ಜರುಗಲಿದೆ.
ನ.10ರಂದು ಮೂಡುಬಿದಿರೆಯಲ್ಲಿ ‘ಗದ್ದಿಗೆ’ ಸಮಾವೇಶ -ಸಿದ್ಧತೆ ಅಂತಿಮ ಹಂತದಲ್ಲಿ – 20 ಸಾವಿರ ಜನರ ನಿರೀಕ್ಷೆ
ಡಿ. 7ರಂದು ಮುಂಬೈಯಲ್ಲಿ ವಿಶ್ವ ಬಂಟರ ಸಮಾಗಮ, ವಿವಿಧ ಕ್ಷೇತ್ರಗಳಲ್ಲಿ ಸಾಧಕರಿಗೆ ಸನ್ಮಾನ