ಶ್ರೀಕೃಷ್ಣ ಜನ್ಮಾಷ್ಟಮಿಗೆ ರಾಜ್ಯಪಾಲ ಗೆಹ್ಲೋಟ್​ಗೆ ಆಹ್ವಾನ

UDP-22-8-Putthige
ಉಡುಪಿಯಲ್ಲಿ ನಡೆಯಲಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಪುತ್ತಿಗೆ ಮಠದ ವತಿಯಿಂದ ಥಾವರಚಂದ್​ ಗೆಹ್ಲೋಟ್​ ಅವರಿಗೆ ಆಮಂತ್ರಣ ಪತ್ರಿಕೆ ನೀಡಲಾಯಿತು. ರಾಮಚಂದ್ರ ಉಪಾಧ್ಯಾಯ, ಪ್ರೊ. ರಾಧಾಕೃಷ್ಣ, ಶ್ರೀಕಾಂತ್​ ಇದ್ದರು.
Published on

ಉಡುಪಿ ಪರ್ಯಾಯ ಪುತ್ತಿಗೆ ಮಠದಿಂದ ಆಮಂತ್ರಣ

ಉಡುಪಿ: ಪರ್ಯಾಯ ಪುತ್ತಿಗೆ ಪೀಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರು ಐತಿಹಾಸಿಕ 4ನೇ ಅವಧಿಯಲ್ಲಿ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ನಡೆಸಿದ್ದಾರೆ.

ಆಗಸ್ಟ್​ 1ರಿಂದ 24ರ ವರೆಗೆ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಮಾಸೋತ್ಸವದ ಹೆಸರಲ್ಲಿ ವಿವಿಧ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಈ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ರಾಜ್ಯಪಾಲ ಥಾವರಚಂದ್​ ಗೆಹ್ಲೋಟ್​ ಅವರಿಗೆ ಸೋಮವಾರ ಬೆಂಗಳೂರಿನ ರಾಜಭವನದಲ್ಲಿ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಲಾಯಿತು.

ಬೆಂಗಳೂರಿನ ಪುತ್ತಿಗೆ ಮಠದ ಪ್ರತಿನಿಧಿಗಳಾದ ರಾಮಚಂದ್ರ ಉಪಾಧ್ಯಾಯ, ಪ್ರೊ. ರಾಧಾಕೃಷ್ಣ ಮತ್ತು ಶ್ರೀಕಾಂತ್​ ಅವರು ಉಡುಪಿ ಶ್ರೀಕೃಷ್ಣನ ಪ್ರಸಾದ ಮತ್ತು ಶ್ರೀಗಳ ಅನುಗ್ರಹ ಮಂತ್ರಾಕ್ಷತೆ ನೀಡಿ, ಉಡುಪಿಗೆ ಆಮಂತ್ರಿಸಿದರು.

ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹೊಸ್ತಿಲು ಪೂಜೆ

UDP-22-9-HosthiluPooja

ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಆಷಾಢ ಶುದ್ಧ ಹುಣ್ಣಿಮೆಯ ಪ್ರಯುಕ್ತ ಪರ್ಯಾಯ ಪುತ್ತಿಗೆ ಸುಗುಣೆಂದ್ರ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಸುಮಂಗಲೆಯರು ಸಾಂಪ್ರದಾಯಿಕವಾಗಿ ಹೊಸ್ತಿಲು ಪೂಜೆ ನೆರವೇರಿಸಿದರು. ಕಿರಿಯ ಶ್ರೀ ಸುಶ್ರೀಂದ್ರ ಸ್ವಾಮೀಜಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net