16 C
Bangalore
Saturday, December 7, 2019

ದೆಹಲಿ ಹೈಕೋರ್ಟ್​ ತೀರ್ಪು ಪ್ರಶ್ನಿಸಿ ಚಿದಂಬರಂ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್​

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ನವದೆಹಲಿ: ಐಎನ್​ಎಕ್ಸ್​ ಮೀಡಿಯಾ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡಲು ದೆಹಲಿ ಹೈಕೋರ್ಟ್​ ನಿರಾಕರಿಸಿದ್ದನ್ನು ಪ್ರಶ್ನಿಸಿದ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಸುಪ್ರೀಂ ಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್​ ವಜಾ ಮಾಡಿದೆ.

ಐಎನ್​ಎಕ್ಸ್​ ಮೀಡಿಯಾ ಹಗರಣದಲ್ಲಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ (ಇಡಿ) ಪ್ರತ್ಯೇಕವಾಗಿ ಪ್ರಕರಣ ದಾಖಲಿಸಿವೆ. ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡಲು ದೆಹಲಿ ಹೈಕೋರ್ಟ್​ ನಿರಾಕರಿಸಿತ್ತು. ಹೈಕೋರ್ಟ್​ನ ತೀರ್ಪನ್ನು ಪ್ರಶ್ನಿಸಿ ಚಿದಂಬರಂ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇಂದು ನ್ಯಾಯಮೂರ್ತಿ ಆರ್​. ಭಾನುಮತಿ ಮತ್ತು ನ್ಯಾಯಮೂರ್ತಿ ಎ.ಎಸ್​. ಬೋಪಣ್ಣ ಅವರಿದ್ದ ಪೀಠ ಈ ಅರ್ಜಿಯ ವಿಚಾರಣೆ ನಡೆಸಿತು.

ಚಿದಂಬರಂ ಅವರನ್ನು ಸಿಬಿಐ ಈಗಾಗಲೇ ಬಂಧಿಸಿರುವುದರಿಂದ ಅವರು ಸಲ್ಲಿಸಿರುವ ಅರ್ಜಿ ಅಪ್ರಸ್ತುತವಾಗುತ್ತದೆ. ಹಾಗಾಗಿ ಅದನ್ನು ವಜಾಗೊಳಿಸಲಾಗಿದೆ ಎಂದು ಕೋರ್ಟ್​ ಅಭಿಪ್ರಾಯಪಟ್ಟಿದೆ.
ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣದಲ್ಲಿ ಚಿದಂಬರಂ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಸುಪ್ರೀಂ ಕೋರ್ಟ್​ನಲ್ಲಿ ನಡೆಯುತ್ತಿದೆ. ಮತ್ತೊಂದೆಡೆ ಚಿದಂಬರಂ ಅವರ ಸಿಬಿಐ ಕಸ್ಟಡಿ ಇಂದು ಸಂಜೆ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಇಂದು ಸಿಬಿಐ ನ್ಯಾಯಾಲಯದಲ್ಲಿ ಹಾಜರುಪಡಿಸಿ ಮತ್ತಷ್ಟು ವಿಚಾರಣೆಗೆ ತಮ್ಮ ಕಸ್ಟಡಿಗೆ ಒಪ್ಪಿಸುವಂತೆ ಸಿಬಿಐ ಮನವಿ ಮಾಡುವ ಸಾಧ್ಯತೆ ಇದೆ. (ಏಜೆನ್ಸೀಸ್​)

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...