More

  VIDEO| ಐಫೋನ್​ 15 ಡೆಲಿವರಿ ತಡ ಮಾಡಿದ್ದಕ್ಕೆ ಹಲ್ಲೆ

  ನವದೆಹಲಿ: ಆ್ಯಪಲ್​ ಐಫೋನ್​ ಸರಣಿಯ ಫೋನ್​ಗಳ ಮಾರಾಟ ಭಾರತದಲ್ಲಿ ಶುಕ್ರವಾರ ಆರಂಭವಾಗಿದ್ದು, ಇದನ್ನು ಪಡೆಯಲು ಜನರು ಹಲವು ಘಂಟೆಗಳ ಕಾಲ ಸರತಿ ಸಾಲಿನಲ್ಲಿ ನಿಂತು ಖರೀದಿಸಿದ್ದಾರೆ. ಆದರೆ, ಘಟನೆಯೊಂದರಲ್ಲಿ ಫೋನ್​ ನೀಡಲು ತಡ ಮಾಡಿದ್ದರೆಂಬ ಕಾರಣಕ್ಕೆ ಹಲ್ಲೆ ನಡೆದಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

  ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ. ಹಲ್ಲೆ ನಡೆಸಿರುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದದು ನೆಟ್ಟಿಗರು ಆಗ್ರಹಿಸಿದ್ದಾರೆ. ಘಟನೆಯು ಉತ್ತರ ದೆಹಲಿಯ ಕಮಲಾನಗರ ಮಾರುಕಟ್ಟೆ ಪ್ರದೇಶದಲ್ಲಿ ನಡೆದಿದೆ.

  ಇದನ್ನೂ ಓದಿ: ಈ ಆರು ಬದಲಾವಣೆಗಳು ಅಕ್ಟೋಬರ್​ 1ರಿಂದ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತವೆ

  ವೈರಲ್​ ಆಗಿರುವ ವಿಡಿಯೋದಲ್ಲಿ ವ್ಯಕ್ತಿಗಳಿಬ್ಬರು ಸ್ಟೋರ್​ನ ಸಿಬ್ಬಂದಿ ಮೇಲೆ ಹಲ್ಲೆ ನಡೆಸುತ್ತಿರುವುದು ಕಂಡು ಬರುತ್ತದೆ. ಸಿಬ್ಬಂದಿ ತಪ್ಪಿಸಿಕೊಳ್ಳಲು ಯತ್ನಿಸಿದ್ದರು ಬಿಡದ ಆರೋಪಿಗಳು ಅಮಾನುಷವಾಗಿ ಥಳಿಸುತ್ತಿರುವುದು ಕಂಡು ಬರುತ್ತದೆ. ಹಲ್ಲೆ ಸಂಬಂಧ ಪೊಲೀಸರು FIR ದಾಖಲಾಸಿದ್ದಾರೆ.

  ಘಟನೆ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು ಮೊಬೈಲ್​ ಅಂಗಡಿ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಹಲ್ಲೆ ನಡೆಸಿದ ಇಬ್ಬರು ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳಿಬ್ಬರು ತಲೆಮಾರಿಸಿಕೊಂಡಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  ರಾಜ್ಯೋತ್ಸವ ರಸಪ್ರಶ್ನೆ - 22

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts