ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ಬೌಲರ್‌ಗಳ ಮಾರಕ ದಾಳಿ ಎದುರು ಸಂಪೂರ್ಣ ನೆಲಕಚ್ಚಿದ ಪಂಜಾಬ್ ಕಿಂಗ್ಸ್ ತಂಡ ಐಪಿಎಲ್-15ರ ನಿರ್ಣಾಯಕ ಪಂದ್ಯದಲ್ಲಿ 17 ರನ್‌ಗಳಿಂದ ಸೋಲನುಭವಿಸಿತು. ಇದರಿಂದ ಕನ್ನಡಿಗ ಮಯಾಂಕ್ ಅಗರ್ವಾಲ್ ನೇತೃತ್ವದ ಪಂಜಾಬ್ ತಂಡ ಪ್ಲೇಆಫ್ ರೇಸ್‌ನಿಂದ ಬಹುತೇಕ ಹೊರಬಿದ್ದರೆ, ಆರ್‌ಸಿಬಿ ತಂಡವನ್ನು ಹಿಂದಿಕ್ಕಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಡೆಲ್ಲಿ ತಂಡ ಅಂತಿಮ ನಾಲ್ಕರ ಘಟ್ಟದ ಹೋರಾಟವನ್ನು ಜೀವಂತವಾಗಿರಿಸಿಕೊಂಡಿತು.
ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಆಲ್ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ (27ಕ್ಕೆ 3) ಹಾಗೂ ವೇಗಿ ಅರ್ಷದೀಪ್ ಸಿಂಗ್ (37ಕ್ಕೆ 3) ಮಾರಕ ದಾಳಿ ನಡುವೆಯೂ ಮಿಚೆಲ್ ಮಾರ್ಷ್ (63 ರನ್, 48 ಎಸೆತ, 4 ಬೌಂಡರಿ, 3 ಸಿಕ್ಸರ್) ಏಕಾಂಗಿ ನಿರ್ವಹಣೆ ನೆರವಿನಿಂದ 7 ವಿಕೆಟ್‌ಗೆ 159 ರನ್ ಕಲೆಹಾಕಿತು. ಪ್ರತಿಯಾಗಿ ಜಿತೀಶ್ ಶರ್ಮ (44ರನ್, 34 ಎಸೆತ, 3 ಬೌಂಡರಿ, 2 ಸಿಕ್ಸರ್) ಕೆಲಕಾಲ ಅಬ್ಬರಿಸಿದರೂ, ಶಾರ್ದೂಲ್ ಠಾಕೂರ್ (36ಕ್ಕೆ 4) ದಾಳಿಗೆ ಕುಸಿದ ಪಂಜಾಬ್ 9 ವಿಕೆಟ್‌ಗೆ 142 ರನ್ ಗಳಿಸಲಷ್ಟೇ ಶಕ್ತವಾಯಿತು.
Match 64. Delhi Capitals Won by 17 Run(s) https://t.co/jcOuGj7cSr #PBKSvDC #TATAIPL #IPL2022
— IndianPremierLeague (@IPL) May 16, 2022