More

    IPL 2024: ಗುಜರಾತ್​ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ!

    ಅಹ್ಮದಾಬಾದ್‌: ವಿಶ್ವದ ಅತಿ ದೊಡ್ಡ ಕ್ರಿಕೆಟ್‌ ಸ್ಟೇಡಿಯಂ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಏಪ್ರಿಲ್ 17ರ ಬುಧವಾರ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಆತಿಥೇಯ ಗುಜರಾತ್ ಟೈಟಾನ್ಸ್ ತಂಡ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಖಾಮುಖಿಯಾಗಲಿವೆ.

    ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ನಕ್ಸಲೀಯರ ಎನ್‌ಕೌಂಟರ್​: ಅನುಮಾನ ವ್ಯಕ್ತಪಡಿಸಿದ ಕಾಂಗ್ರೆಸ್‌ ನಾಯಕ!

    ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯ ಯುವ ನಾಯಕರ ಪೈಪೋಟಿಗೆ ಸಾಕ್ಷಿಯಾಗಲಿದೆ. ಉಭಯ ತಂಡಗಳು ಸತತ 2 ಸೋಲಿನ ಬಳಿಕ ಹಿಂದಿನ ಪಂದ್ಯದಲ್ಲಿ ಗೆಲುವಿನ ಹಳಿಗೆ ಮರಳಿದ್ದು, ಲಯ ಕಾಯ್ದುಕೊಳ್ಳುವ ವಿಶ್ವಾಸದಲ್ಲಿವೆ.

    ಟೂರ್ನಿಯಲ್ಲಿ ಆವರೆಗೆ ಆಡಿರುವ ಆರು ಪಂದ್ಯಗಳಲ್ಲಿ ಶುಭ್ಮನ್‌ ಗಿಲ್‌ ನಾಯಕತ್ವದ ಟೈಟಾನ್ಸ್​ ಮೂರರಲ್ಲಿ ಗೆಲುವು ಸಾಧಿಸಿದೆ. ಇದರೊಂದಿಗೆ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ರಿಷಬ್ ಪಂತ್‌ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಆಡಿರುವ 6 ಪಂದ್ಯಗಳಲ್ಲಿ 2ರಲ್ಲಿ ಗೆದ್ದು 9ನೇ ಸ್ಥಾನದಲ್ಲಿದೆ.
    ಉಭಯ ತಂಡಗಳು ಕೂಡಾ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿ ಲಯಕ್ಕೆ ಮರಳಲು ಎದುರು ನೋಡುತ್ತಿವೆ.

    ಅನುಭವಿ ವೇಗಿ ಮೊಹಮದ್ ಶಮಿ ಬೌಲಿಂಗ್ ಅನುಪಸ್ಥಿತಿ ಗುಜರಾತ್‌ಗೆ ದೊಡ್ಡ ಹಿನ್ನಡೆ ಸಮಸ್ಯೆ ತಂದಿದೆ. ಲಭ್ಯವಿರುವ ಬೌಲರ್‌ಗಳ ಅನುಭವ ಬಳಸಿಕೊಂಡು ಯಶಸ್ಸು ಪಡೆಯುವ ಸವಾಲು ಗಿಲ್ ಮುಂದಿದೆ. ಹೊಸ ಜೆಂಡಿನಲ್ಲಿ ವೇಗಿ ಉಮೇಶ್ ಯಾದವ್ ಏಳು ವಿಕೆಟ್ ಪಡೆದಿದ್ದಾರೆ. ಆದರೆ ಪ್ರತಿ ಓವರ್‌ಗೆ 10ಕ್ಕಿಂತ ಹೆಚ್ಚು ರನ್ ಬಿಟ್ಟುಕೊಟ್ಟಿದ್ದಾರೆ. ಬ್ಯಾಟಿಂಗ್‌ ನಲ್ಲಿ ಗಿಲ್, ಸುದರ್ಶನ್ ಬಳಿಕ ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ನೆರವು ಒದಗಿಸಬಲ್ಲ ಬ್ಯಾಟರ್‌ಗಳ ಕೊರತೆ ಇದೆ.

    ಎಕ್ಸ್​​​ನಿಂದ ರಾಷ್ಟ್ರೀಯ ಭದ್ರತೆಗೆ ತೊಂದರೆ!: ಪಾಕಿಸ್ತಾನದಲ್ಲಿ ಟ್ಟಿಟರ್ ಖಾತೆಗೆ ನಿರ್ಬಂಧ​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts