More

    MI vs DC: ಮುಂಬೈ ತಂಡಕ್ಕೆ ಮೊದಲ ಗೆಲುವು! ಡೆಲ್ಲಿಗೆ ಮತ್ತೆ ಮುಖಭಂಗ

    ಮುಂಬೈ: ಐಪಿಎಲ್‌ 2024ರ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್‌ ತಂಡ ಕೊನೆಗೂ ಗೆಲುವಿನ ನಗೆ ಬೀರಿದೆ. ಹ್ಯಾಟ್ರಿಕ್‌ ಸೋಲಿನಿಂದ ಕಂಗೆಟ್ಟಿದ್ದ ಪಾಂಡ್ಯ ಬಳಗ, ತವರು ಮೈದಾನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.

    ಇದನ್ನೂ ಓದಿ: ಕಾಂಗ್ರೆಸ್​ಗೆ ನಿರೀಕ್ಷಿತ ಫಲಿತಾಂಶ ಬರದಿದ್ದರೆ….! ರಾಹುಲ್​ ಗಾಂಧಿಗೆ ಪ್ರಶಾಂತ್ ಕಿಶೋರ್ ಹೀಗೆ ಹೇಳಿದ್ದೇಕೆ?

    ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2024 ರ 20 ನೇ ಪಂದ್ಯದಲ್ಲಿ ಮುಂಬೈ 29 ರನ್‌ಗಳಿಂದ ಡೆಲ್ಲಿ ತಂಡವನ್ನು ಸೋಲಿಸಿ ಲೀಗ್​ನಲ್ಲಿ ಮೊದಲ ಜಯ ದಾಖಲಿಸಿದೆ. ಇದರೊಂದಿಗೆ ಟೂರ್ನಿಯ ಅಂಕಪಟ್ಟಿಯಲ್ಲಿ ಪಾಯಿಂಟ್‌ ಖಾತೆ ತೆರೆದಿದೆ. ಡೆಲ್ಲಿ ತಂಡದ ಪೃಥ್ವಿ ಶಾ ಹಾಗೂ ಟ್ರಿಸ್ಟಾನ್‌ ಸ್ಟಬ್ಸ್‌ ಆಕರ್ಷಕ ಅರ್ಧಶತಕದ ಹೊರತಾಗಿಯೂ ಡೆಲ್ಲಿ ಸೋಲು ಅನುಭವಿಸಿದೆ.

    ಮುಂಬೈ ಇನ್ನಿಂಗ್ಸ್​ನ ಕೊನೆಯ ಓವರ್​ನಲ್ಲಿ ಅಬ್ಬರಿಸಿದ ಮುಂಬೈನ ರೊಮಾರಿಯೊ ಶೆಫರ್ಡ್ ಒಂದೇ ಓವರ್​ನಲ್ಲಿ 32 ರನ್ ಕಲೆಹಾಕಿ ತಂಡದ ಗೆಲುವಿನ ರೂವಾರಿ ಎನಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ 234 ರನ್ ಗಳಿಸಿತ್ತು. ತಂಡದ ಪರ ನಾಯಕ ರೋಹಿತ್ ಶರ್ಮಾ ಗರಿಷ್ಠ 49 ರನ್ ಗಳಿಸಿದರು. ದೊಡ್ಡ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೇವಲ 205 ರನ್ ಗಳಿಸಲಷ್ಟೇ ಶಕ್ತವಾಯಿತು.

    ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಮುಂಬೈ ಸ್ಫೋಟಕ ಆರಂಭ ಪಡೆಯಿತು. ಆರಂಭಿಕರಾದ ರೋಹಿತ್‌, ಇಶಾನ್ ಕಿಶನ್ ಭರ್ಜರಿ 80 ರನ್‌ಗಳ ಜೊತೆಯಾಟವಾಡಿದರು. ಕೇವಲ 27 ಎಸೆತಗಳಲ್ಲಿ 6 ಬೌಂಡರಿ ಹಾಗೂ 3 ಸಿಕ್ಸರ್‌ ಸಹಿತ 49 ರನ್‌ ಗಳಿಸಿದ್ದ ಹಿಟ್‌ಮ್ಯಾನ್‌, ಅರ್ಧಶತಕದ ಹೊಸ್ತಿಲಲ್ಲಿ ಔಟಾದರು. ಅಕ್ಷರ್‌‌ ಪಟೇಲ್‌ ಎಸೆತದಲ್ಲಿ ರೋಹಿತ್‌ ಕ್ಲೀನ್‌ ಬೋಲ್ಡ್‌ ಆದರು. ಈ ವೇಳೆ ಮೈದಾನಕ್ಕಿಳಿದ ವಿಶ್ವದ ನಂಬರ್ ವನ್ ಟಿ20 ಬ್ಯಾಟರ್‌ ಸೂರ್ಯಕುಮಾರ್‌ ಯಾದವ್‌, ಎರಡು ಎಸೆತಗಳನ್ನು ಎದುರಿಸಿ ಡಕೌಟ್‌ ಆದರು.

    ಏತನ್ಮಧ್ಯೆ, ರಿಷಬ್ ಪಂತ್ ನೇತೃತ್ವದ ಡೆಲ್ಲಿ ತಂಡವು ಬೃಹತ್ ಗುರಿಯನ್ನು ಬೆನ್ನಟ್ಟಲು ಬಿರುಸಿನ ಬ್ಯಾಟಿಂಗ್ ಆರಂಭಿಸಿತು. ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಬೇಗನೆ ಔಟಾದರು ಆದರೆ ಪೃಥ್ವಿ ಶಾ ದೊಡ್ಡ ಹೊಡೆತಗಳನ್ನು ಆಡಿದರು. ಪೊರೆಲ್ (41) ಕೂಡ ಸ್ಥಿರ ಬ್ಯಾಟಿಂಗ್ ನಡೆಸಿದರು. ಆದರೆ ಭಾರೀ ನಿರೀಕ್ಷೆಯಲ್ಲಿದ್ದ ನಾಯಕ ರಿಷಬ್ ಪಂತ್ ಕೇವಲ ಒಂದು ರನ್ ಗಳಿಸಿ ಔಟಾದರು. ಸ್ಟಬ್‌ಗಳು ಬೃಹತ್ ಸಿಕ್ಸರ್‌ಗಳೊಂದಿಗೆ ಸಿಡಿದರೂ ಪ್ರಯೋಜನವಾಗಲಿಲ್ಲ.

    ಗಜಪಡೆಯ ಕೀಳು ಮಟ್ಟದ ಪೋಸ್ಟ್‌ ವಿಚಾರಕ್ಕೆ ಸ್ಟ್ರಾಂಗ್ ಕೌಂಟರ್ ಕೊಟ್ಟ ಆ್ಯಂಕರ್ ಅನುಶ್ರೀ! ಏನಿದೆ ಪೋಸ್ಟ್​ನಲ್ಲಿ ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts