ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಯ 38ನೇ ಪಂದ್ಯವು ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಅಂಕಪಟ್ಟಿಯ ಅಗ್ರಸ್ಥಾನಿ ರಾಜಸ್ಥಾನ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ.
ಇದನ್ನೂ ಓದಿ: ಅತ್ಯಾಚಾರಕ್ಕೊಳಗಾದ 14 ವರ್ಷದ ಅಪ್ರಾಪ್ತೆಯ ಗರ್ಭಪಾತಕ್ಕೆ ಸುಪ್ರೀಂಕೋರ್ಟ್ ಅನುಮತಿ!
🚨 Toss Update 🚨
Mumbai Indians elect to bat against Rajasthan Royals.
Follow the Match ▶️ https://t.co/Mb1gd0UfgA#TATAIPL | #RRvMI pic.twitter.com/WdVoFnAvuh
— IndianPremierLeague (@IPL) April 22, 2024
ಸಂಜು ಸ್ಯಾಮ್ಸನ್ ಪಡೆ ತವರಿನ ಸವಾಯಿ ಮಾನಸಿಂಗ್ ಕ್ರೀಡಾಂಗಣದಲ್ಲಿ ಜಯದ ಓಟ ಕಾಯ್ದುಕೊಳ್ಳುವ ಹಂಬಲದಲ್ಲಿದೆ. ಈಗಾಗಲೇ ಟಾಸ್ ಆಗಿದ್ದು, ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ಹಾರ್ದಿಕ್ ಪಾಂಡ್ಯ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ತಂಡ ಮೊದಲ ಮುಖಾಮುಖಿಯ ಸೋಲಿಗೆ ಸೇಡು ತೀರಿಸುವ ತವಕದಲ್ಲಿದೆ. ಇದಕ್ಕೂ ಮುನ್ನ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 6 ವಿಕೆಟ್‌ಗಳಿಂದ ಜಯ ಸಾಧಿಸಿತ್ತು.
That's ONE tough choice!
Who would you pick in your fantasy team 🤔
Head to https://t.co/C4oa4xTCN1 & make your team now!#TATAIPL | #RRvMI pic.twitter.com/UlkVtotLsd
— IndianPremierLeague (@IPL) April 22, 2024
ರಾಜಸ್ಥಾನ್ ರಾಯಲ್ಸ್ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದರೆ, ಮುಂಬೈ ಇಂಡಿಯನ್ಸ್ ತಂಡ 7ನೇ ಸ್ಥಾನದಲ್ಲಿದೆ. ರಾಜಸ್ಥಾನ ತಂಡ ಆಡಿರುವ 7 ಪಂದ್ಯಗಳಲ್ಲಿ 6 ಗೆಲುವು 1 ಸೋಲಿನೊಂದಿಗೆ 12 ಅಂಕ ಕಲೆಹಾಕಿದೆ. ಇನ್ನೂ ಮುಂಬೈ ಇಂಡಿಯನ್ಸ್ ಆಡಿರುವ 7 ಪಂದ್ಯಗಳಲ್ಲಿ 3 ಗೆಲುವು, 4 ಸೋಲಿನೊಂದಿಗೆ 6 ಅಂಕ ಸಂಪಾದಿಸಿದೆ.
ಲೋಕಸಮರ: ಚುನಾವಣೆಗೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಮುಕೇಶ್ ದಲಾಲ್!