ಚಂಢೀಗಢ: ಗೆಲುವಿನ ಆರಂಭದ ಬಳಿಕ ಲಯ ತಪ್ಪಿರುವ ಹಾಲಿ ರನ್ನರ್ ಅಪ್ ಗುಜರಾತ್ ಟೈಟಾನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್-17ರಲ್ಲಿ ಭಾನುವಾರದ 2ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು, ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಸ್ಯಾಮ್ ಕರನ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ
ಇದನ್ನೂ ಓದಿ:ನೇಹಾ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಿದ ಜೆ.ಪಿ ನಡ್ಡಾ!
ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದೆ. ಸತತ ಮೂರು ಪಂದ್ಯಗಳನ್ನು ಸೋತಿರುವ ಪಂಜಾಬ್ ಕಿಂಗ್ಸ್ ಜಯದ ಹಾದಿಗೆ ಮರಳುವ ತವಕದಲ್ಲಿದ್ದರೆ ಗುಜರಾತ್ ತಂಡದ ನಾಯಕ ಶುಭಮಾನ್ ಗಿಲ್ ಬಳಗ ಅಸ್ಥಿರ ನಿರ್ವಹಣೆಯಿಂದ ಹೊರಬರಬೇಕಿದೆ.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಹೀನಾಯ ಸೋಲಿನ ಬಳಿಕ ರನ್ ರೇಟ್‌ನಲ್ಲಿ ಕುಸಿತ ಕಂಡಿರುವ ಗುಜರಾತ್ ಟೈಟಾನ್ಸ್ ಆಡಿರುವ 7 ಪಂದ್ಯಗಳಲ್ಲಿ 3 ಗೆಲುವು, 4 ಸೋಲಿನೊಂದಿಗೆ 6 ಅಂಕ ಕಲೆಹಾಕಿದೆ.
ಪಂಜಾಬ್ ಕಿಂಗ್ಸ್ 7 ಪಂದ್ಯಗಲ್ಲಿ 2 ರಲ್ಲಿ ಜಯ 5ರಲ್ಲಿ ಸೋಲು ಕಂಡಿದೆ. ತಂಡದ ನಾಯಕ ಭುಜದ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಶಿಖರ್ ಧವನ್ ಕಣಕ್ಕಿಳಿಯುವುದು ಅನುಮಾನ ಎನಿಸಿದೆ. ಪ್ಲೇಆಫ್ ರೇಸ್‌ನಲ್ಲಿ ಉಳಿಯಲು ಉಭಯ ತಂಡಗಳಿಗೆ ಈ ಪಂದ್ಯ ಮಹತ್ವದ್ದಾಗಿದೆ.
ಇಂಡಿಯಾ ಮೈತ್ರಿ ಒಕ್ಕೂಟದ ಚುನಾವಣಾ ರ‍್ಯಾಲಿ: ರಾಹುಲ್ ಗಾಂಧಿ ಗೈರು? ಕಾರಣ ಹೀಗಿದೆ..!