More

    ಮುಂಬೈ ಇಂಡಿಯನ್ಸ್​ ನಾಯಕತ್ವ ಮತ್ತೆ ರೋಹಿತ್​ಗೆ! ದಿನಾಂಕವನ್ನೂ ತಿಳಿಸಿದ ಮಾಜಿ ಕ್ರಿಕೆಟಿಗ

    ಮುಂಬೈ: ಪ್ರಸಕ್ತ ಐಪಿಎಲ್ ಸೀಸನ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರಿಸ್ಥಿತಿ ಹೇಳತೀರದ್ದಾಗಿದೆ. ತಂಡದಲ್ಲಿ ಸ್ಟಾರ್ ಆಟಗಾರರ ಕೊರತೆ ಏನು ಇಲ್ಲ. ಆದರೆ ಯಶಸ್ಸಿಗಾಗಿ ಸಾವಿರ ಕಣ್ಣುಗಳಿಂದ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂಬೈ ಇಂಡಿಯನ್ಸ್​ ಈ ಋತುವಿನ ಮೊದಲ ಗೆಲುವಿಗಾಗಿ ಎದುರು ನೋಡುತ್ತಿದೆ. ಆಡಿದ ಮೂರು ಪಂದ್ಯಗಳಲ್ಲಿ ಮೂರರಲ್ಲಿ ಸೋತು ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಮೊನ್ನೆ ನಡೆದ ಪಂದ್ಯದಲ್ಲಿ 6 ವಿಕೆಟ್ ಗಳಿಂದ ಸೋತು ತೀವ್ರ ಒತ್ತಡ ಎದುರಿಸುತ್ತಿದೆ.

    ಸತತ ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಫ್ರಾಂಚೈಸಿ, ಹಾರ್ದಿಕ್ ಪಾಂಡ್ಯ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ರೋಹಿತ್ ಶರ್ಮಾ ಅವರಿಗೆ ಮತ್ತೊಮ್ಮೆ ನಾಯಕತ್ವ ವಹಿಸಲು ಮುಂದಾಗಿದೆ ಎಂದು ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ದಿನಾಂಕ ಸಹಿತ ತಿಳಿಸಿದ್ದಾರೆ.

    ನಾಯಕತ್ವದ ಸಾರಥ್ಯ ವಹಿಸಿರುವ ಹಾರ್ದಿಕ್ ಪಾಂಡ್ಯ ಆರಂಭದಿಂದಲೂ ಸಂಕಷ್ಟ ಎದುರಿಸುತ್ತಿದ್ದಾರೆ. ಒಂದೆಡೆ ರೋಹಿತ್ ಅವರನ್ನು ವಂಚಿಸಿ ನಾಯಕತ್ವ ಪಡೆದ ಆರೋಪ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರಣಿ ಸೋಲು ಅವರನ್ನು ತೀವ್ರ ಒತ್ತಡಕ್ಕೆ ಸಿಲುಕಿಸುತ್ತಿದೆ. ಅನೇಕ ಮಾಜಿ ಕ್ರಿಕೆಟಿಗರು, ಕ್ರೀಡಾ ಪಂಡಿತರು ಮತ್ತು ಕ್ರಿಕೆಟ್ ಅಭಿಮಾನಿಗಳು ಕೂಡ ಪಾಂಡ್ಯ ಅವರನ್ನು ಮುಂಬೈ ತಂಡದ ನಾಯಕತ್ವದಿಂದ ತೆಗೆದುಹಾಕಬೇಕು ಎಂದು ಸಲಹೆ ನೀಡುತ್ತಿದ್ದಾರೆ. ಇತ್ತೀಚೆಗಷ್ಟೇ ರಾಜಸ್ಥಾನ ವಿರುದ್ಧದ ಸೋಲಿನೊಂದಿಗೆ ಈ ವಿಷಯ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಮನೋಜ್ ತಿವಾರಿ ಅವರು ಈ ಕುರಿತು ಕ್ರಿಕ್‌ಬಜ್ ಜೊತೆ ಮಾತನಾಡಿದ್ದಾರೆ.

    ಹಾರ್ದಿಕ್ ಪಾಂಡ್ಯ ಸಾಕಷ್ಟು ಒತ್ತಡದಲ್ಲಿದ್ದಾರೆ. ಅದು ರಾಜಸ್ಥಾನದ ಪಂದ್ಯದಲ್ಲಿ ಸ್ಪಷ್ಟವಾಗಿ ಗೋಚರವಾಗುತ್ತಿತ್ತು. ಹಿಂದಿನ ಪಂದ್ಯಗಳಲ್ಲಿ ಮೊದಲು ಬೌಲಿಂಗ್ ಮಾಡಿದ್ದ ಪಾಂಡ್ಯ ಈ ಪಂದ್ಯದಲ್ಲಿ ಬೌಲಿಂಗ್ ಮಾಡಿರಲಿಲ್ಲ. ಇದೇ ಸಂದರ್ಭದಲ್ಲಿ ಮುಂದಿನ ಭಾನುವಾರದವರೆಗೆ (ಏಪ್ರಿಲ್ 7) ಮುಂಬೈ ಇಂಡಿಯನ್ಸ್‌ಗೆ ಯಾವುದೇ ಪಂದ್ಯವಿಲ್ಲ. ಈ ಅಂತರದಲ್ಲಿ ಮುಂಬೈ ಫ್ರಾಂಚೈಸಿ ಪ್ರಮುಖ ನಿರ್ಧಾರ ತೆಗೆದುಕೊಂಡು ರೋಹಿತ್ ಅವರನ್ನು ಮತ್ತೆ ನಾಯಕನನ್ನಾಗಿ ಮಾಡಬಹುದು ಎಂದು ನಾನು ಭಾವಿಸುತ್ತೇನೆ. ಫ್ರಾಂಚೈಸಿ ಮಾಲೀಕರು ಕ್ರಿಕೆಟ್ ಅನ್ನು ಅರ್ಥಮಾಡಿಕೊಳ್ಳುವವರೆಗೆ, ಅವರು ಈ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಟೀಂ ಇಂಡಿಯಾದ ಕ್ರಿಕೆಟಿಗ ಮನೋಜ್ ತಿವಾರಿ ಹೇಳಿದ್ದಾರೆ. (ಏಜೆನ್ಸೀಸ್​)

    ಮೂರೇ ವರ್ಷದಲ್ಲಿ 15 ಸರ್ಕಾರಿ ಕೆಲ್ಸ ಆದ್ರೆ ಯಾವುದನ್ನು ಆಯ್ಕೆ ಮಾಡಿಕೊಳ್ಳದ ಯುವಕ! ಕಾರಣ ಹೀಗಿದೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts