

ಚೆನ್ನೈ: ಐಪಿಎಲ್ನ ಕ್ವಾಲಿಫೈಯರ್-2 ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ 36 ರನ್ಗಳ ಭರ್ಜರಿ ಗೆಲುವು ದಾಖಲಿಸುವ ಮೂಲಕ ಫೈನಲ್ ಪ್ರವೇಶಿಸಿದೆ.
ಚೆನ್ನೈ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಸನ್ರೈಸರ್ಸ್ ಹೈದರಾಬಾದ್ ನಿಗದಿತ 20 ಓವರ್ಗಳಗಳಲ್ಲಿ 175 ರನ್ ಗಳಿಸಲು ಸಶಕ್ತವಾಯಿತು.
ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ ತಂಡವು 20 ಓವರ್ಗಳಲ್ಲಿ 7 ವಿಕ್ಟ್ ನಷ್ಟಕ್ಕೆ 139 ರನ್ ಗಳಿಸುವ ಮೂಲಕ ಫೈನಲ್ ಪ್ರವೇಶ ಮೂಲಕ ಎರಡನೇ ಟ್ರೋಫಿಕನಸು ಭಗ್ನಗೊಂಡಿತು.
ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ 2008ರಲ್ಲಿ ಚಾಂಪಿಯನ್ ಆಗಿದ್ದ ರಾಜಸ್ಥಾನ್ ರಾಯಲ್ಸ್ ತಂಡವನ್ನು 36 ರನ್ಗಳಿಂದ ಮಣಿಸಿದ ಪ್ಯಾಟ್ ಕಮಿನ್ಸ್ ಪಡೆಯು ಮೂರನೇ ಬಾರಿಗೆ ಪ್ರಶಸ್ತಿ ಸುತ್ತಿಗೆ ದಾಪುಗಾಲಿಟ್ಟಿತು. ಮೇ 26ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ಈ ಪಂದ್ಯ ಕೂಡ ಚಿದಂಬರಂ ಸ್ಟೇಡಿಯಂನಲ್ಲೇ ನಡೆಯಲಿದೆ.