

ಇದನ್ನೂ ಓದಿ: ಪಾಕಿಸ್ತಾನದಿಂದ ಸೈಬರ್ ದಾಳಿ; 2-3 ದಿನಗಳವರೆಗೆ ಎಟಿಎಂ ಸೇವೆ ಇರಲ್ಲ; ವಾಟ್ಸಾಪ್ ಸಂದೇಶ ವೈರಲ್ | Viral news
ನಿನ್ನೆ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ 10 ಓವರ್ಗೆ ಸ್ಥಗಿತಗೊಂಡಿತು. ಇದಕ್ಕೆ ಕಾರಣ ಪಾಕಿಸ್ತಾನ ನಡೆಸಿದ ದಾಳಿ. ಭದ್ರತಾ ಕಾರಣಗಳಿಂದ ನಡೆಯುತ್ತಿದ್ದ ಪಂದ್ಯವನ್ನು ಕೂಡಲೇ ಲೈಟ್ ಆಫ್ ಮಾಡುವ ಮೂಲಕ ರದ್ದುಗೊಳಿಸಲಾಯಿತು. ಕೆಲವು ಸಮಯ ಸ್ಟೇಡಿಯಂನಲ್ಲಿಯೇ ಕಾದ ಕ್ರಿಕೆಟ್ ಪ್ರಿಯರು, ಪಂದ್ಯ ಮತ್ತೆ ಶುರುವಾಗಬಹುದು ಎಂದು ನಿರೀಕ್ಷಿಸಿದರು. ಆದ್ರೆ, ಪಂದ್ಯ ಇಲ್ಲಿಗೆ ರದ್ದಾಗಲಿದ್ದು, ಮುಂದುವರಿಯುವುದಿಲ್ಲ ಎಂದು ಸ್ಪಷ್ಟನೆ ನೀಡಲಾಯಿತು.
ಎರಡು ದೇಶಗಳ ನಡುವಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಮುಂಬರುವ ಐಪಿಎಲ್ ಪಂದ್ಯಗಳನ್ನು ನಡೆಸುವುದೋ ಅಥವಾ ಬೇಡವೋ ಎಂಬ ನಿರ್ಧಾರ ಕುರಿತಂತೆ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮಾತನಾಡಿದ್ದಾರೆ. “ಈಗಿನ ಪರಿಸ್ಥಿತಿಯನ್ನು ಬಿಸಿಸಿಐ ಸೂಕ್ಷ್ಮವಾಗಿ ಗಮನಿಸುತ್ತಿದೆ. ಈ ವಿಷಯದಲ್ಲಿ ಏನು ನಿರ್ಧಾರ ಕೈಗೊಳ್ಳಬೇಕು ಎಂಬುದರ ಕುರಿತು ಸರ್ಕಾರದ ಸಲಹೆಗಾಗಿ ಕಾಯುತ್ತಿದ್ದೇವೆ. ದಿನದಿಂದ ದಿನಕ್ಕೆ ಪರಿಸ್ಥಿತಿ ಬದಲಾಗುತ್ತಿರುವ ಹಿನ್ನೆಲೆ ಬಿಸಿಸಿಐ ಅಂತಿಮ ನಿರ್ಧಾರ ಕೈಗೊಳ್ಳಲಿದೆ” ಎಂದು ತಿಳಿಸಿದ್ದರು.
ಇದನ್ನೂ ಓದಿ: ಆಪರೇಷನ್ ಸಿಂಧೂರ ನಂತರ ಪಾಕಿಸ್ತಾನಕ್ಕೆ ‘ಪ್ರತಿಕಾರ ತೀರಿಸಬೇಡಿ’ ಎಂದು ಅಮೆರಿಕ ಕಾಂಗ್ರೆಸ್ ಸದಸ್ಯ ರೋ ಖನ್ನಾ ಎಚ್ಚರಿಕೆ | Ro Khannaಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ರದ್ದಾದ ಬೆನ್ನಲ್ಲೇ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಂಡ ಬಿಸಿಸಿಐ, ಇದೀಗ ಉಳಿದ 16 ಐಪಿಎಲ್ ಪಂದ್ಯಗಳನ್ನು ರದ್ದುಗೊಳಿಸಿದೆ. ಮೇ.25ರವರೆಗೆ ನಡೆಯಬೇಕಿದ್ದ ಐಪಿಎಲ್ ಟೂರ್ನಿಯನ್ನು ಆಟಗಾರರ ಸುರಕ್ಷತೆಯ ಮೇರೆಗೆ ರದ್ದು ಮಾಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ,(ಏಜೆನ್ಸೀಸ್).
https://www.vijayavani.net/gold-rates-decreased-today-09th-may-25