ಮುಂಬೈ ಇಂಡಿಯನ್ಸ್​ನಿಂದ ರೋಹಿತ್ ಶರ್ಮಾಗೆ ಕೊಕ್​.?; ಎಂಐ ತಂಡಕ್ಕೆ ಸುರೇಶ್ ರೈನಾ ನೀಡಿದ ಸಲಹೆ ಏನು..?​ | IPL

Suresh Raina, Rohit Sharma
Published on

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್​​ನ (IPL) ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ, 2025 ರ ಋತುವಿನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಗಳಿಸಿ ತನ್ನ ಅಭಿಯಾನವನ್ನು ಮುಗಿಸಿತ್ತು. ಟೂರ್ನಿ ಆರಂಭದಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಎಂಐ, ನಂತರ ಎಚ್ಚೆತ್ತುಕೊಂಡು ಪ್ಲೇಆಫ್ ಪ್ರವೇಶಿಸಿತ್ತು.

ನವೆಂಬರ್ 15 ರಂದು ಆಟಗಾರರನ್ನು ಉಳಿಸಿಕೊಳ್ಳಲು ಕೊನೆಯ ದಿನವಾಗಿದ್ದು, 2026 ರ ಐಪಿಎಲ್ ಹರಾಜಿಗೆ ಮುಂಚಿತವಾಗಿ ಎಲ್ಲಾ 10 ಫ್ರಾಂಚೈಸಿಗಳೂ ಉಳಿಸಿಕೊಳ್ಳುವ ಮತ್ತು ಬಿಡುಗಡೆ ಮಾಡುವ ಆಟಗಾರರ ಹೆಸರನ್ನು ಬಹಿರಂಗಪಡಿಸಲಿವೆ. ಹಿರಿಯ ಕ್ರಿಕೆಟಿಗ ರೋಹಿತ್ ಶರ್ಮಾರನ್ನು 2026 ರ ಐಪಿಎಲ್ ಹರಾಜಿಗೆ ಮುಂಚಿತವಾಗಿ ಬಿಡುಗಡೆ ಮಾಡುತ್ತದೆ ಎಂಬ ಊಹಾಪೋಹಗಳು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ಕಳೆದ ಆವೃತ್ತಿಯಲ್ಲಿ ಇಂಪ್ಯಾಕ್ಟ ಪ್ಲೇಯರ್​ ಆಗಿ ಕಣಕ್ಕಿಳಿದಿದ್ದ ರೋಹಿತ್ ಶರ್ಮಾ, 15 ಪಂದ್ಯಗಳಲ್ಲಿ, 150 ಸ್ಟ್ರೈಕ್ ರೇಟ್‌ನೊಂದಿಗೆ, ನಾಲ್ಕು ಅರ್ಧಶತಕಗಳೊಂದಿಗೆ 418 ರನ್ ಗಳಿಸಿದ್ದರು. ಹಿಟ್​ ಮ್ಯಾನ್​ ಕುರಿತಾದ ಚರ್ಚೆಗಳ ನಡುವೆ ಪ್ರತಿಕ್ರಿಯೆ ನೀಡಿರುವ ಮಾಜಿ ಕ್ರಿಕೆಟಿಗ ಸುರೇಶ್ ರೈನಾ, ಮುಂಬೈ ಫ್ರಾಂಚೈಸಿ ರೋಹಿತ್​ರನ್ನು ತಂಡದಲ್ಲಿ ಉಳಿಸಿಕೊಳ್ಳುವುದು ಉತ್ತಮ ಎಂದಿದ್ದಾರೆ. ಈ ಋತುವಿನಲ್ಲಿ ಮುಂಬೈ ಇಂಡಿಯನ್ಸ್ ವ್ಯಾಪಾರ ಚರ್ಚೆಗಳ ಕೇಂದ್ರಬಿಂದುವಾಗಿದೆ ಎನ್ನಲಾಗಿದ್ದು, ಎಂಐ, ಚೆನ್ನೈ ಸೂಪರ್ ಕಿಂಗ್ಸ್ ಜೊತೆ ದೀಪಕ್ ಚಾಹರ್ ಅವರನ್ನು ವಿನಿಮಯ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದ್ದರೂ, ಎರಡೂ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ.

ಮುಂಬೈ ಇಂಡಿಯನ್ಸ್ ತಂಡವು, ಭಾರತದ ಪ್ರಮುಖ ಆಟಗಾರರ ಬದಲಾವಣೆಗೆ ಮನಸ್ಸು ಮಾಡಿಲ್ಲ ಎನ್ನುವುದನ್ನು ವರದಿಯಲ್ಲಿ ಉಲ್ಲೇಖವಾಗಿದ್ದು, ಸ್ಟಾರ್​ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ಬ್ಯಾಟ್ಸ್‌ಮನ್‌ಗಳಾದ ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ಉಳಿಸಿಕೊಳ್ಳುವವರ ಲಿಸ್ಟ್​ನಲ್ಲಿ ಮೊದಲ ಸ್ಥಾನದಲ್ಲಿದ್ದು, 2025 ರ ಐಪಿಎಲ್​ನಲ್ಲಿ ಉತ್ತಮ ಪ್ರದರ್ಶನ ನೀಡಿರುವ ಟ್ರೆಂಟ್ ಬೌಲ್ಟ್ ಮತ್ತು ವಿಲ್ ಜ್ಯಾಕ್ಸ್​​ರನ್ನು ಸಹ ಉಳಿಸಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

ಮುಂಬೈ ಇಂಡಿಯನ್ಸ್ ಉಳಿಸಿಕೊಳ್ಳಬಹುದಾದದ ಆಟಗಾರರ ಪಟ್ಟಿ

ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್ , ತಿಲಕ್ ವರ್ಮಾ, ರೋಹಿತ್ ಶರ್ಮಾ, ಟ್ರೆಂಟ್ ಬೌಲ್ಟ್, ವಿಘ್ನೇಶ್ ಪುತ್ತೂರು, ಕರ್ಣ್ ಶರ್ಮಾ, ಮಿಚೆಲ್ ಸ್ಯಾಂಟ್ನರ್, ಅರ್ಜುನ್ ತೆಂಡೂಲ್ಕರ್, ವಿಲ್ ಜಾಕ್ಸ್, ರಾಬಿನ್ ಮಿಂಜ್​, ನಮನ್​ ಧೀರ್​, ಎಎಮ್​ ಗಜಂಫರ್, ರಿಕಲ್ಟನ್​,​ ಅಶ್ವನಿ ಕುಮಾರ್

ಬಿಡುಗಡೆಯಾಗಬಹುದಾದ ಆಟಗಾರರು

ರೀಸ್ ಟೋಪ್ಲಿ, ಕೃಷ್ಣನ್ ಶ್ರೀಜಿತ್, ಸತ್ಯನಾರಾಯಣ ರಾಜು, ಬೆವನ್ ಜೇಕಬ್ಸ್, ಲಿಜಾದ್ ವಿಲಿಯಮ್ಸ್, ರಾಜ್ ಬಾವಾ (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net