More

    ಗುಜರಾತ್​ ವಿರುದ್ಧ ಸೋಲಿನ ಬೆನ್ನಲ್ಲೇ ರಾಜಸ್ಥಾನಕ್ಕೆ ಶಾಕ್​; ನಾಯಕನಿಗೆ ಬಿತ್ತು ಭಾರೀ ದಂಡ

    ಜೈಪುರ: ಇಲ್ಲಿನ ಸವಾಯಿ ಮಾನ್​ಸಿಂಗ್​ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್​ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್​ ವಿರುದ್ಧ ಶುಭಮನ್​ ಗಿಲ್​ ಪಡೆ 03 ವಿಕೆಟ್​ಗಳ ಜಯ ಸಾಧಿಸಿದೆ. ಇತ್ತ ಲೀಗ್​ನಲ್ಲಿ ಅಜೇಯರಾಗಿ ಉಳಿದಿದ್ದ ರಾಜಸ್ಥಾನ ರಾಯಲ್ಸ್ ತಂಡವು ಮೊದಲ ಸೋಲನ್ನು ಎದುರಿಸಿದ ಬೆನ್ನಲ್ಲೇ ಶಾಕ್ ಒಂದು ಎದುರಾಗಿದ್ದು, 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

    ಗುಜರಾತ್​ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್​ ಕಾಯ್ದುಕೊಂಡಿದ್ದಕ್ಕಾಗಿ ರಾಜಸ್ಥಾನ ರಾಯಲ್ಸ್​ ತಂಡದ ನಾಯಕ ಸಂಜು ಸ್ಯಾಮ್ಸನ್​ಗೆ 12 ಲಕ್ಷ ರೂಪಾಯಿ ದಂಡವನ್ನು ವಿಧಿಸಲಾಗಿದೆ. ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಸ್ಯಾಮ್ಸನ್​​​ ಈ ಶಿಕ್ಷೆಗೆ ಗುರಿಯಾಗಿದ್ದಾರೆ.

    ಇದನ್ನೂ ಓದಿ: ಮುಂಬರುವ ಟಿ-20 ವಿಶ್ವಕಪ್​ನಿಂದ ವಿರಾಟ್​ ಕೊಹ್ಲಿಗೆ ಕೊಕ್​?; ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್​ ಹೇಳಿದ್ದಿಷ್ಟು

    ಅದರಂತೆ ಸಂಜು ಸ್ಯಾಮ್ಸನ್​ 12 ಲಕ್ಷ ರೂ. ದಂಡದ ಮೊತ್ತ ಪಾವತಿಸಬೇಕಿದೆ. ಐಪಿಎಲ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ. ಇನ್ನು ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ.

    ಇನ್ನು ಈ ತಪ್ಪನ್ನು ಮೂರನೇ ಬಾರಿ ಪುನರಾವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಅಲ್ಲದೇ ನಾಯಕ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 12 ಲಕ್ಷ ಅಥವಾ ಅವರ ಪಂದ್ಯದ ಶುಲ್ಕದ 50% ದಂಡವನ್ನು ವಿಧಿಸಲಾಗುತ್ತದೆ. ಇದೀಗ ನಾಯಕನಾಗಿ ತಮ್ಮ 5ನೇ ಪಂದ್ಯದಲ್ಲೇ ಸಂಜು ಸ್ಯಾಮ್ಸನ್​​ ಸ್ಲೋ ಓವರ್​ ರೇಟ್​ ಶಿಕ್ಷೆಗೆ ಗುರಿಯಾಗಿದ್ದು, ಹೀಗಾಗಿ ಮುಂದಿನ ಪಂದ್ಯದಲ್ಲಿ ಎಚ್ಚರಿಕೆ ವಹಿಸುವ ಸಾಧ್ಯತೆಯಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts