More

    ಐಪಿಎಲ್ ಕ್ರಿಕೆಟ್ ಪಂದ್ಯಾವಳಿ;ಸಂಚಾರ ಮಾರ್ಗಮಾರ್ಪಾಡು

    ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಟಾ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಶನಿವಾರ ನಡೆಯಲಿದ್ದು, ಮೈದಾನದ ಸುತ್ತಮುತ್ತಲ ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆ ಮಾರ್ಪಾಡು ಮಾಡಲಾಗಿದೆ. ಮಧ್ಯಾಹ್ನ 3 ರಿಂದ ರಾತ್ರಿ 11 ಗಂಟೆ ವರೆಗೂ ಮೈದಾನದ ಸುತ್ತಲ ರಸ್ತೆಗಳಲ್ಲಿ ಕೆಲ ಸಂಚಾರ ಮಾರ್ಪಾಡು ಮಾಡಿ ಟ್ರಾಫಿಕ್ ಪೊಲೀಸರು ಆದೇಶಿಸಿದ್ದಾರೆ.

    ಕ್ವೀನ್ಸ್ ರಸ್ತೆ, ಎಂ.ಜಿ. ರಸ್ತೆಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ ಮತ್ತು ನೃಪತುಂಗ ರಸ್ತೆಯಲ್ಲಿ ವಾಹನಗಳ ಪಾರ್ಕಿಂಗ್‌ನ್ನು ನಿಷೇಧಿಸಲಾಗಿದೆ.

    ಇದರ ಬದಲು ಸಾರ್ವಜನಿಕರು ಸೆಂಟ್ ಜೋಸ್ೆ ಇಂಡಿಯನ್ ಸ್ಕೂಲ್ ಮೈದಾನ, ಯು.ಬಿ. ಸಿಟಿ ಪಾರ್ಕಿಂಗ್, ಬಿಎಂಟಿಸಿ ಬಸ್ ನಿಲ್ದಾಣದ 1ನೇ ಮಹಡಿ ಮತ್ತು ಓಲ್ಡ್ ಕೆಜಿಐಡಿ ಬಿಲ್ಡಿಂಗ್ ಮತ್ತು ಕಿಂಗ್ಸ್ ರಸ್ತೆಯಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಲು ಅವಕಾಶ ಕಲ್ಪಸಲಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts