More

  ಐಪಿಎಸ್​-ಐಎಎಸ್ ಸಂಘರ್ಷ: ಜಾಮೀನು ಪಡೆದ ರೂಪಾ ಮೌದ್ಗಿಲ್

  ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಸಮನ್ಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಮಂಗಳವಾರ ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದಾರೆ.

  ಪ್ರಕರಣ ಸಂಬಂಧ ನಗರದ 24ನೇ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ವಿಚಾರಣೆಗೆ ಡಿ.ರೂಪಾ ಹಾಜರಾಗಿದ್ದರು. ಅವರ ಹಾಜರಾತಿಯನ್ನು ದಾಖಲಿಸಿಕೊಂಡ ನ್ಯಾಯಾಲಯ, 25 ಸಾವಿರ ರೂ. ಮೊತ್ತದ ವೈಯಕ್ತಿಕ ಬಾಂಡ್ ಒದಗಿಸುವಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿತು.

  ಇದನ್ನೂ ಓದಿ: ವಿಧಾನಪರಿಷತ್ ಉಪ ಚುನಾವಣೆಗೆ ದಿನಾಂಕ ಘೋಷಣೆ; ಇಲ್ಲಿದೆ ಪೂರ್ತಿ ವಿವರ..

  ಡಿ.ರೂಪಾ ಅವರು 2023ರ ಫೆ.18 ಮತ್ತು 19ರಂದು ಫೇಸ್‌ಬುಕ್ ಖಾತೆಯಲ್ಲಿ ತಮ್ಮ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ವಿದ್ಯುನ್ಮಾನ ಮಾಧ್ಯಮದಲ್ಲೂ ಹೇಳಿಕೆ ನೀಡಿದ್ದಾರೆ. ಆ ಆರೋಪಗಳು ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ. ತಮ್ಮ ತೇಜೋವಧೆ ಮಾಡುವ ದುರುದ್ದೇಶದಿಂದಲೇ ರೂಪಾ ಅವರು ಈ ಕೃತ್ಯ ಎಸಗಿರುವುದರಿಂದ ತಮ್ಮ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿ, ಮಾನಸಿಕ ಯಾತನೆ ಉಂಟು ಮಾಡಿವೆ ಎಂದು ಆರೋಪಿಸಿ ರೋಹಿಣಿ ಸಿಂಧೂರಿ ಮಾ3ರಂದು ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಖಾಸಗಿ ದೂರು ದಾಖಲಿಸಿದ್ದರು.

  ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಯ ಪಾರ್ಕ್​ಗಳ ಸಮಯದಲ್ಲಿ ಬದಲಾವಣೆ; ಇಲ್ಲಿದೆ ಪಾಲಿಕೆಯ ಹೊಸ ಆದೇಶ

  ಅಲ್ಲದೆ, ಮಾನಹಾನಿ ಮಾಡಿ ಮಾನಸಿಕ ಯಾತನೆ ಉಂಟು ಮಾಡಿರುವುದಕ್ಕಾಗಿ ಡಿ. ರೂಪಾ ಅವರಿಂದ ಒಂದು ಕೋಟಿ ರೂಪಾಯಿ ಪರಿಹಾರವಾಗಿ ಕೊಡಿಸಿಕೊಡಬೇಕು. ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದರು. ಇದನ್ನು ಪರಿಗಣಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ರೂಪಾ ಅವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಲು ಆದೇಶಿಸಿತ್ತು. ಅಲ್ಲದೆ, 2023ರ ಮಾ.24ರಂದು ರೂಪಾ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಇದರಿಂದಾಗಿ ಮಂಗಳವಾರ ರೂಪಾ ಅವರು ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಹಾಜರಾಗಿದ್ದರು.

  ನಾಚಿಕೆ-ಅವಮಾನ ಸಹಿಸಿಕೊಂಡು ಬಯಲಲ್ಲೇ ದೇಹದ ಒತ್ತಡ ನಿವಾರಿಸಿಕೊಂಡೆ: ಟಾಯ್ಲೆಟ್ ಇರದೆ ಪಟ್ಟ ಕಷ್ಟದ ಬಗ್ಗೆ ರಾಷ್ಟ್ರಪತಿಗೇ ಪತ್ರ ಬರೆದ ಮಹಿಳೆ

  ವಿಂಗ್ ಹೆಸರಲ್ಲಿ ಅಮಾಯಕ ಹಿಂದು ಹುಡುಗರನ್ನು ತಡೆದರೆ ಪರಿಣಾಮ ನೆಟ್ಟಗಿರಲ್ಲ: ವಜ್ರದೇಹಿ ಸ್ವಾಮೀಜಿ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts