18.5 C
Bangalore
Monday, December 16, 2019

ಎಕ್ಸ್​ಪ್ರೆಸ್​​ ರೈಲುಗಳ ಆಹಾರ ವೆಚ್ಚದಲ್ಲಿ ಏರಿಕೆ: 1 ಕಪ್​ ಚಹಾ ಬೆಲೆಯೇ 35 ರೂ. ಇನ್ನಿತರ ಬೆಲೆ ಹೀಗಿದೆ…

Latest News

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಕಾಲೇಜ್ ಆವರಣದಲ್ಲಿ ಮದ್ಯದ ಸದ್ದು

ಮೊಳಕಾಲ್ಮೂರು: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜಿನ ಆವರಣ ಭದ್ರತೆ ಕೊರತೆಯ ಕಾರಣಕ್ಕೆ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ. ಈಚೆಗೆ ಕೆಲ ಕಿಡಿಗೇಡಿಗಳು ಕಾಲೇಜಿನ ಆವರಣದಲ್ಲಿರುವ...

ಶತಮಾನ ಶಾಲೆಗಿಲ್ಲ ಸೌಲಭ್ಯಗಳ ಭಾಗ್ಯ

ಕೆ.ಕೆಂಚಪ್ಪ ಮೊಳಕಾಲ್ಮೂರು: ಶತಮಾನ ಪೂರೈಸಿದ ಪಟ್ಟಣದ ಬಾಲಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಲ ಸೌಲಭ್ಯಗಳ ಕೊರತೆಯಿಂದ ನಲುಗುತ್ತಿದೆ. ಒಂದು ತಲೆಮಾರಿಗೆ ಅಕ್ಷರ ದಾಸೋಹ...

ನವದೆಹಲಿ: ಕೇಂದ್ರ ಸರ್ಕಾರದ ಆದೇಶದಂತೆ ಭಾರತೀಯ ರೈಲ್ವೆ ಕ್ಯಾಟರಿಂಗ್​ ಮತ್ತು ಟೂರಿಸಂ ಕಾರ್ಪೋರೇಷನ್​(ಐಆರ್​​ಸಿಟಿಸಿ) ಶತಾಬ್ದಿ, ರಾಜಧಾನಿ ಮತ್ತು ಡುರೊಂಟೊ ಎಕ್ಸ್​ಪ್ರೆಸ್​​ ರೈಲುಗಳ ಆಹಾರದ ವೆಚ್ಚದಲ್ಲಿ ಏರಿಕೆ ಮಾಡಿರುವುದರಿಂದ ಟೆಕೆಟ್​ ದರವು ಸಣ್ಣ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಇದರಿಂದ ಪ್ರಯಾಣಿಕರಿಗೆ ಮತ್ತಷ್ಟು ಹೊರೆಯಾಗಲಿದೆ.

ರೈಲ್ವೆ ನಿರ್ದೇಶಕ ಮಂಡಳಿ ಹೊರಡಿಸಿರುವ ಸುತ್ತೋಲೆಯ ಪ್ರಕಾರ ಈ ಮೇಲಿನ ಎಕ್ಸ್​ಪ್ರೆಸ್​ ರೈಲುಗಳ ಪ್ರೀಪೇಯ್ಡ್​​ ಆಹಾರಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದ್ದು, ಅದರ ಪಟ್ಟಿ ಈ ಕೆಳಕಂಡಂತಿದೆ.

ಶತಾಬ್ದಿ, ರಾಜಧಾನಿ ಮತ್ತು ಡುರೊಂಟೊ ಎಕ್ಸ್​ಪ್ರೆಸ್​ನ ಫಸ್ಟ್​ ಕ್ಲಾಸ್​ ಎಸಿ/ಇಸಿ ಸೀಟ್​ ಪರಿಷ್ಕೃತ ದರ ಹೀಗಿದೆ…
ಬೆಳಗಿನ ಟೀ: 15 ರೂ. ರಿಂದ 35ಕ್ಕೆ ಏರಿಕೆ.
ಉಪಹಾರ: 90 ರಿಂದ 140 ರೂ.
ಮಧ್ಯಾಹ್ನ ಹಾಗೂ ರಾತ್ರಿ ಊಟ: 145 ರಿಂದ 245 ರೂ.
ಸಂಜೆ ಟೀ: 75 ರಿಂದ 140 ರೂ.

ಶತಾಬ್ದಿ, ರಾಜಧಾನಿ ಮತ್ತು ಡುರೊಂಟೊ ಎಕ್ಸ್​ಪ್ರೆಸ್​ನ 2ಎಸಿ/3ಎಸಿ/ಸಿಸಿ ಸೀಟ್​ಗಳ ಪರಿಷ್ಕೃತ ದರ ಹೀಗಿದೆ…
ಬೆಳಗಿನ ಟೀ: 10 ರೂ. ರಿಂದ 20ಕ್ಕೆ ಏರಿಕೆ
ಉಪಹಾರ: 75 ರಿಂದ 105 ರೂ.
ಮಧ್ಯಾಹ್ನ ಹಾಗೂ ರಾತ್ರಿ ಊಟ: 125 ರಿಂದ 185 ರೂ.
ಸಂಜೆ ಟೀ: 45 ರಿಂದ 90 ರೂ.

ಬೆಲೆ ಹೆಚ್ಚಳ ಮಾಡುವಂತೆ ಭಾರತೀಯ ರೈಲ್ವೆ ಕ್ಯಾಟರಿಂಗ್​ ಮತ್ತು ಟೂರಿಸಂ ಕಾರ್ಪೋರೇಷನ್​ ನೀಡಿದ ಮನವಿಯನ್ನು ಸ್ವೀಕರಿಸಿ, ರೈಲ್ವೆ ಮಂಡಳಿಯಿಂದ ಸ್ಥಾಪಿತವಾದ ಮೆನು ಅಂಡ್​ ಟಾರಿಫ್​ ಸಮಿತಿಯ ಶಿಫಾರಸಿನ ಮೇಲೆ ಬೆಲೆ ಹೆಚ್ಚಳ ಮಾಡಿರುವುದಾಗಿ ರೈಲ್ವೆ ಸಚಿವಾಲಯ ಸುತ್ತೊಲೆಯಲ್ಲಿ ಸಮರ್ಥಿಸಿಕೊಂಡಿದೆ.

ಈ ನೂತನ ಪರಿಷ್ಕೃತ ದರವನ್ನು 15 ದಿನದೊಳಗೆ ಟಿಕೆಟ್​ ವ್ಯವಸ್ಥೆಯಲ್ಲಿ ಅಳವಡಿಸಬೇಕೆಂದು ರೈಲ್ವೆ ಸಚಿವಾಲಯ ತಿಳಿಸಿದೆ. ಆದರೆ 120 ದಿನಗಳ ಬಳಿಕ ನೂತನ ಪರಿಷ್ಕೃತ ದರ ಪ್ರಯಾಣಿಕರಿಗೆ ಅನ್ವಯವಾಗಲಿದೆ. ಇದರೊಂದಿಗೆ 80, 90 ಹಾಗೂ 110 ರೂ ದರದಲ್ಲಿ ತರಕಾರಿ, ಮೊಟ್ಟೆ​ ಮತ್ತು ಚಿಕನ್​ ಬಿರಿಯಾನಿ ಊಟವನ್ನು ನೀಡಲು ರೈಲ್ವೆ ಸಚಿವಾಲಯ ನಿರ್ಧರಿಸಿದೆ. (ಏಜೆನ್ಸೀಸ್​)

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...