More

    ಹಿರಿಯೂರಲ್ಲಿ ನೀರಾವರಿ ಇಲಾಖೆಗೆ ರೈತರ ಮುತ್ತಿಗೆ

    ಹಿರಿಯೂರು: ವಿವಿ ಸಾಗರ ಜಲಾಶಯದಿಂದ ವೇದಾವತಿ ನದಿಗೆ ಹೆಚ್ಚುವರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ನೀರಾವರಿ ಹೋರಾಟ ಸಮಿತಿ, ರೈತ ಸಂಘದ ನೇತೃತ್ವದಲ್ಲಿ ನೀರಾವರಿ ಇಲಾಖೆಗೆ ಶನಿವಾರ ಬೀಗ ಜಡಿದು ರೈತರು ಪ್ರತಿಭಟನೆ ನಡೆಸಲಾಯಿತು.

    ತಾಲೂಕಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದ್ದು, ಜನ-ಜಾನುವಾರುಗಳು ಹನಿ ನೀರಿಗಾಗಿ ಪರಿತಪಿಸುವಂತಾಗಿದೆ. ಆದರೆ, ಜಲಾಶಯದಿಂದ ಬೇಕಾಬಿಟ್ಟಿ ನೀರು ಹರಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಚಳ್ಳಕೆರೆ ತಾಲೂಕು ವ್ಯಾಪ್ತಿಯ ವೇದಾವತಿ ನದಿ ಪಾತ್ರದ ಚೆಕ್‌ಡ್ಯಾಂ ಭರ್ತಿಯಾಗಿದ್ದು, ನೀರು ಆಂಧ್ರದತ್ತ ವ್ಯರ್ಥವಾಗಿ ಹರಿಯುತ್ತಿದೆ, ಶಿಡ್ಲಯ್ಯನಕೋಟೆ ಬಳಿ ಗೇಜ್ ಅಳವಡಿಸಿ 0.5 ಟಿಎಂಸಿ ಅಡಿ ನೀರು ಹರಿಸುವಂತೆ ಸರ್ಕಾರದ ಆದೇಶಕ್ಕೂ ಅಧಿಕಾರಿಗಳು ಕಿಮ್ಮತ್ತು ನೀಡುತ್ತಿಲ್ಲ ಎಂದು ದೂರಿದರು.

    ಪಟ್ಟಭದ್ರರ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ಅಧಿಕಾರಿಗಳ ವಿರುದ್ಧ ಸರ್ಕಾರದ ಆದೇಶ ಉಲ್ಲಂಘನೆಯಡಿ ಕ್ರಮ ಕೈಗೊಳ್ಳಬೇಕು. ತಕ್ಷಣ ನೀರು ನಿಲ್ಲಿಸಬೇಕು ಎಂದು ರೈತರು ಒತ್ತಾಯಿಸಿದರು.

    ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಕಸವನಹಳ್ಳಿ ರಮೇಶ್, ರೈತ ಸಂಘದ ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ, ಸಿದ್ದರಾಮಣ್ಣ, ತಿಮ್ಮಾರೆಡ್ಡಿ, ತಿಪ್ಪೇಸ್ವಾಮಿ ಇತರರಿದ್ದರು.

    ಈಗಾಗಲೇ ನೀರಿನ ಹರಿವು ಪ್ರಮಾಣ ಕಡಿಮೆ ಮಾಡಿದ್ದು, ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು, ಸ್ಥಗಿತಗೊಳಿಸಲಾಗುವುದು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts