ಕಡೂರು ತಾಲೂಕಿನ ನೀರಾವರಿ ಯೋಜನೆ ಅನುಷ್ಟಾನಕ್ಕೆ ಬದ್ಧ

ಕಡೂರು: ತಾಲೂಕಿನ ಮದಗದ, ಅಯ್ಯನಕೆರೆ ತುಂಬಿಸುವ ಹೆಬ್ಬೆ ನೀರಾವರಿ ಯೋಜನೆಗೆ ಬಜೆಟ್​ನಲ್ಲಿ ರಾಜ್ಯ ಸರ್ಕಾರ 100 ಕೋಟಿ ರೂ. ಮೀಸಲಿಟ್ಟಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಲೋಕೋಪಯೋಗಿ ಮತ್ತು ನೀರಾವರಿ ಸಚಿವ ಎಚ್.ಡಿ.ರೇವಣ್ಣ ಭರವಸೆ ನೀಡಿದರು.

ಪಟ್ಟಣದ ಕೆಎಲ್​ವಿ ವೃತ್ತದಲ್ಲಿ ಹಾಸನ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಚುನಾವಣಾ ಪ್ರಚಾರ ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ಗೋಂದಿ ಅಣೆಕಟ್ಟು ಯೋಜನೆ ನಿರ್ವಣದ ಪ್ರಸ್ತಾವನೆ ಸರ್ಕಾರದ ಮುಂದಿದ್ದು, ಪರಿಶೀಲನೆ ನಡೆಸಿ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಅಮೃತಮಹಲ್ ಕಾವಲು ಪ್ರದೇಶದಲ್ಲಿ ಪಶು ಸಂಗೋಪನಾ ಕಾಲೇಜು ಆರಂಭಿಸಲು ಚಿಂತನೆ ನಡೆಸಲಾಗಿದೆ. ಚುನಾವಣೆ ನಂತರ ಅಧಿಕಾರಿಗಳ ಜತೆ ರ್ಚಚಿಸಿ ಸ್ಥಳ ನಿಗದಿ ಪಡಿಸಲಾಗುವುದು. ಮಾಜಿ ಪ್ರಧಾನಿ ದೇವೇಗೌಡರನ್ನು ಸತತ ಗೆಲ್ಲಿಸಿ ಬೆಂಬಲಿಸಿರುವ ಈ ಕ್ಷೇತ್ರದ ಜನರ ಋಣ ನಮ್ಮ ಕುಟುಂಬದ ಮೇಲಿದೆ. ಕ್ಷೇತ್ರದ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮಾತನಾಡಿ, ಹಾಸನ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕಡೂರು ಕ್ಷೇತ್ರದ ಅನೇಕ ಕಾಂಗ್ರೆಸ್ ಮುಖಂಡರ ಮನೆಗೆ ನಾನು ತೆರಳಿದಾಗ ಅವರ ಹೃದಯರ್ಸ³ ಸ್ವಾಗತ ನವಚೈತನ್ಯ ತಂದಿದೆ. ಇಲ್ಲಿನ ಎರಡೂ ಪಕ್ಷದ ಮುಖಂಡರು ಮೈತ್ರಿಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ಮಾಜಿ ಸಂಸದ ಎಚ್.ಡಿ.ದೇವೇಗೌಡರ ಮಾದರಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಾಗುವುದು. ಕ್ಷೇತ್ರದಲ್ಲಿ ಅರ್ಧಕ್ಕೆ ನಿಂತಿರುವ ನೀರಾವರಿ ಹಾಗೂ ಇತರ ಯೋಜನೆಗಳನ್ನು ಪೂರ್ಣಗೊಳಿಸಲು ಯತ್ನಿಸಲಾಗುವುದು ಎಂದರು.

ಮಾಜಿ ಶಾಸಕ ಕೆ.ಬಿ.ಮಲ್ಲಿಕಾರ್ಜುನ ಮಾತನಾಡಿ, ಹಾಸನ ಲೇಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್​ರೇವಣ್ಣ ಅವರ ಗೆಲುವಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಶ್ರಮಿಸಬೇಕು.

ವಿರೋಧ ಪಕ್ಷದ ಮುಖಂಡರು ಕಾಂಗ್ರೆಸ್,ಜೆಡಿಎಸ್ ಅಪವಿತ್ರ ಮೈತ್ರಿ ಮಾಡಿಕೊಂಡಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ಕೋಮುವಾದಿ ಶಕ್ತಿಗಳನ್ನು ಮಣಿಸಲು ಈ ಮೈತ್ರಿ ಅನಿವಾರ್ಯ. ಕ್ಷೇತ್ರದಲ್ಲಿ ಪ್ರಜ್ವಲ್​ಗೆ ಹೆಚ್ಚಿನ ಮತ ಲಭಿಸುವಂತೆ ಕಾರ್ಯಕರ್ತರು ಶ್ರಮಿಸಬೇಕು ಎಂದರು.

ಮಾಜಿ ಶಾಸಕ ವೈಎಸ್​ವಿ ದತ್ತ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ, ಜಿಪಂ ಮಾಜಿ ಅಧ್ಯಕ್ಷ ಕೆ.ಎಂ.ಕೆಂಪರಾಜು, ಜಿಪಂ ಸದಸ್ಯರಾದ ಲೋಲಾಕ್ಷಿಬಾಯಿ, ಶರತ್​ಕೃಷ್ಣಮೂರ್ತಿ, ತಾಪಂ ಅಧ್ಯಕ್ಷೆ ಭಾರತಿಪ್ರಹ್ಲಾದ್, ಉಪಾಧ್ಯಕ್ಷ ದಾಸಯ್ಯನಗುತ್ತಿ ಚಂದ್ರಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಾಸೂರು ಚಂದ್ರಮೌಳಿ, ಆಸಂದಿ ಕಲ್ಲೇಶ್, ಜೆಡಿಎಸ್ ತಾಲೂಕು ಅಧ್ಯಕ್ಷ ಕೋಡಿಹಳ್ಳಿ ಮಹೇಶ್ವರಪ್ಪ, ಉಪಾಧ್ಯಕ್ಷ ಜಿಗಣೇಹಳ್ಳಿ ನೀಲಕಂಠಪ್ಪ, ನಗರಘಟಕ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಉಪಸ್ಥಿತರಿದ್ದರು.