More

    ಎರಡು ವರ್ಷದಲ್ಲಿ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಸಂಕಲ್ಪ; ಸಚಿವ ರಮೇಶ ಜಾರಕಿಹೊಳಿ

    ಮಸ್ಕಿ: ಮುಂದಿನ ಎರಡು ವರ್ಷದಲ್ಲಿ ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಸಂಕಲ್ಪ ಮಾಡಲಾಗಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

    ಬುದ್ದಿನ್ನಿ (ಟಿ) ಗ್ರಾಮದಲ್ಲಿ ಬುಧವಾರ ನಂದವಾಡಗಿ ಏತ ನೀರಾವರಿ ಯೋಜನೆ ವ್ಯಾಪ್ತಿಯ ಹನಿ ನಿರಾವರಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಹುನುಗುಂದ ತಾಲೂಕಿನ 400 ಹೆಕ್ಟೇರ್, ಲಿಂಗಸುಗೂರು ಮತ್ತು ಮಸ್ಕಿ ತಾಲೂಕಿನ 35,700 ಹೆಕ್ಟೇರ್ ಪ್ರದೇಶದಲ್ಲಿ ಹನಿ ನಿರಾವರಿ ಯೋಜನೆ ಜಾರಿಗೆ ಸರ್ಕಾರ 1,530 ಕೋಟಿ ರೂ. ಮಂಜೂರು ಮಾಡಿದೆ ಎಂದು ತಿಳಿಸಿದರು.

    ಈಗಾಗಲೇ 207 ಕೋಟಿ ರೂ. ವೆಚ್ಚದಲ್ಲ್ಲಿ ತೊಂಡಿಹಾಳ ಹತ್ತಿರ ನಾರಯಣಪುರ ಜಲಾಶಯದ ಹಿನ್ನೀರಿನಿಂದ ನೀರಿನ ವಿತರಣೆ ತೊಟ್ಟಿ ನಿರ್ಮಿಸುವ ಕಾಮಗಾರಿ ಶೇ.80 ಪೂರ್ಣಗೊಂಡಿದೆ. ನಂದವಾಡಗಿ ಏತ ನೀರಾವರಿ ಯೋಜನೆಯಿಂದ ಒಟ್ಟು 36,100 ಹೆಕ್ಟೇರ್ ಪ್ರದೇಶ ನೀರಾವರಿಯಾಗಲಿದೆ ಎಂದರು. ಅನರ್ಹಗೊಂಡ ಶಾಸಕ ಪ್ರತಾಪಗೌಡ ಪಾಟೀಲ್ ಮಾತನಾಡಿದರು.

    ಸಂಸದರಾದ ಕರಡಿ ಸಂಗಣ್ಣ, ರಾಜಾ ಅಮರೇಶ್ವರ ನಾಯಕ, ಶಾಸಕರಾದ ರಾಜುಗೌಡ, ಶಿವರಾಜ ಪಾಟೀಲ, ಮಾಜಿ ಶಾಸಕ ಗಂಗಾಧರ ನಾಯಕ, ಮಾನಪ್ಪ ವಜ್ಜಲ್, ಜಿಪಂ ಸದಸ್ಯೆ ರೇಣುಕಾ ಚಂದ್ರಶೇಖರ, ತಾಪಂ ಸದಸ್ಯ ಮಲ್ಲೇಶಗೌಡ ಮಟ್ಟೂರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts