ಸಿರಿಗೆರೆ: ಮೇಲ್ಮನೆ ಸದಸ್ಯರಾಗಿ ಆಯ್ಕೆಯಾದ ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು, ಸೋಮವಾರ ಬೆಂಗಳೂರು ಆರ್.ಟಿ. ನಗರದ ತರಳಬಾಳು ಕೇಂದ್ರದಲ್ಲಿ ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ರಾಜ್ಯದ ರೈತರ ಉನ್ನತಿ, ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ, ಕೃಷಿ ಉತ್ಪನ್ನಗಳ ಸಂರಕ್ಷಣೆ, ಅಗತ್ಯವಿದ್ದಾಗ ಮಾರಾಟದ ವ್ಯವಸ್ಥೆ ಕಲ್ಪಿಸಬೇಕು. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಿ.
ಜಾನುವಾರು ಸಂರಕ್ಷಣೆ ಹಾಗೂ ಏತ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಶ್ರೀಗಳು ಸಚಿವರಿಗೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು.