ಎರಡನೇ ಮದುವೆಯಾಗಲಿದ್ದಾರಾ ನಾಗ ಚೈತನ್ಯ..?. ಇವರೇ ವಧು!

nagachaitanya
Published on

ಆಂಧ್ರಪ್ರದೇಶ: ಟಾಲಿವುಡ್ ತಾರೆಯರಾದ ನಾಗ ಚೈತನ್ಯ ಮತ್ತು ಸಮಂತಾ ಪ್ರೀತಿಸಿ, ಹಿರಿಯರ ಸಮ್ಮುಖದಲ್ಲಿ ಮದುವೆಯಾದರು. ‘ಏ ಮಾಯ ಚೇಸಾವೆ’ ಸಿನಿಮಾ ಸೆಟ್‌ನಲ್ಲಿ ಇವರಿಬ್ಬರ ನಡುವೆ ಪ್ರೀತಿ ಮೂಡಿತ್ತು. ಬಹಳ ದಿನಗಳವರೆಗೆ ಪ್ರೀತಿಸುತ್ತಿದ್ದ ಇವರಿಬ್ಬರು 2017ರಲ್ಲಿ ಮದುವೆಯಾಗಿದ್ದರು. ಸುಗಮವಾಗಿ ಜೀವನ ನಡೆಸುತ್ತಿದ್ದ ಇಬ್ಬರ ನಡುವೆ ಭಿನ್ನಾಭಿಪ್ರಾಯ ಹುಟ್ಟಿಕೊಂಡಿತು. ಕೊನೆಗೆ ಸುಮಾರು ನಾಲ್ಕು ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದರು. ಎಲ್ಲರಿಗೂ ಗೊತ್ತಿರುವ ಹಾಗೆ 2021 ರಲ್ಲಿ ವಿಚ್ಛೇದನ ಪಡೆದ ಮೇಲೆ ಇಬ್ಬರೂ ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ.

ನಾಗ ಚೈತನ್ಯ ಎರಡನೇ ಮದುವೆ?

ಇದೀಗ ನಾಗ ಚೈತನ್ಯ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ವರದಿಗಳ ಪ್ರಕಾರ, ನಾಗಾ ಚೈತನ್ಯ ಅವರ ತಂದೆ ನಾಗಾರ್ಜುನ ಅವರು ಮಗನ ಎರಡನೇ ಮದುವೆಗೆ ಸದ್ದಿಲ್ಲದೆ ಕೆಲಸ ಮಾಡುತ್ತಿದ್ದಾರಂತೆ. ವಿವರಗಳು ಕಡಿಮೆಯಿದ್ದರೂ, ನಾಗಾರ್ಜುನ ಈಗಾಗಲೇ ಹುಡುಗಿಯನ್ನು ನೋಡಿದ್ದು, ಉದ್ಯಮಿಯೊಬ್ಬರು ಮಗಳನ್ನು ಮದುವೆಯಾಗಲಿದ್ದಾರಂತೆ. ಹಾಗೆ ನೋಡಿದರೆ ಹುಡುಗಿಯ ಕುಟುಂಬಕ್ಕೂ ಚಿತ್ರರಂಗಕ್ಕೂ ಯಾವುದೇ ಸಂಬಂಧವಿಲ್ಲ. ಈಗಾಗಲೇ ಮದುವೆಯ ಮಾತು ಮುಗಿದಿದೆ ಎಂಬುದು ಸುದ್ದಿಯ ಸಾರಾಂಶ. ಆದರೆ, ಈ ಬಗ್ಗೆ ಅಕ್ಕಿನೇನಿ ಅವರ ಕುಟುಂಬದವರು ಯಾರೂ ಪ್ರತಿಕ್ರಿಯೆ ನೀಡಿಲ್ಲ. ಇದರಲ್ಲಿ ಸತ್ಯಾಂಶ ಏನು ಎಂಬುದು ತಿಳಿಯಬೇಕಿದೆ.

ಸಮಂತಾ ವಿಚ್ಛೇದನದ ನಂತರ ನಾಗ ಚೈತನ್ಯ ನಟಿ ಶೋಭಿತಾ ಧೂಳಿಪಾಲ ಅವರನ್ನು ಪ್ರೀತಿಸುತ್ತಿದ್ದರು ಎಂಬ ಊಹಾಪೋಹಗಳು ಹಬ್ಬಿದ್ದವು. ಸಾಮಾಜಿಕ ಜಾಲತಾಣಗಳ ಜೊತೆಗೆ ಮಾಧ್ಯಮಗಳಲ್ಲಿ ಇವರ ಬಗ್ಗೆ ನಾನಾ ರೀತಿಯ ಸುದ್ದಿಗಳು ಕೇಳಿ ಬರುತ್ತಿವೆ. ಈ ಡೇಟಿಂಗ್ ಸುದ್ದಿಯನ್ನು ಶೋಭಿತಾ ನಿರಾಕರಿಸಿದ್ದಾರೆ. ‘ಸದ್ಯ ನನಗೆ ಒಳ್ಳೆಯ ಸಿನಿಮಾ ಅವಕಾಶಗಳು ಬರುತ್ತಿವೆ. ಜೀವನದಲ್ಲಿ ಎಷ್ಟೋ ಒಳ್ಳೆಯ ಅನುಭವಗಳನ್ನು ಬಿಟ್ಟು ಯಾರೋ ಹೇಳಿದರೆಂದು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಅವರ ಬಗ್ಗೆ ಚಿಂತಿಸಲು ನನಗೆ ಸಮಯವಿಲ್ಲ. ನನ್ನ ಬಗೆಗಿನ ವದಂತಿಗಳಿಗೂ ನನಗೂ ಯಾವುದೇ ಸಂಬಂಧವಿಲ್ಲ. ನಾನೇನೂ ತಪ್ಪು ಮಾಡಿಲ್ಲ. ತಪ್ಪಾಗದಿದ್ದಾಗ ಸ್ಪಷ್ಟತೆ ನೀಡುವ ಅಗತ್ಯವಿಲ್ಲ. ನನ್ನ ಕೆಲಸವನ್ನು ನಾನು ಶ್ರದ್ಧೆಯಿಂದ ಮಾಡುತ್ತೇನೆ' ಎಂದು ತಿಳಿಸಿದರು.

ಮೊನ್ನೆಯಷ್ಟೇ ಲಂಡನ್‌ನಲ್ಲಿರುವ ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಅವರ ಫೋಟೋ ನೆಟ್‌ನಲ್ಲಿ ವೈರಲ್ ಆಗಿತ್ತು. ಈ ಫೋಟೋ ಬೆಳಕಿಗೆ ಬಂದ ನಂತರ ಅವರ ಸಂಬಂಧದ ಬಗ್ಗೆ ಸಾಕಷ್ಟು ಪ್ರಚಾರವಾಗಿತ್ತು. ಈ ಹಿಂದೆ ಎರಡ್ಮೂರು ಬಾರಿ ಇಬ್ಬರೂ ಒಟ್ಟಿಗೆ ಇರುವ ಫೋಟೋಗಳು ನೆಟ್‌ನಲ್ಲಿ ವೈರಲ್ ಆಗಿದ್ದವು.

ನಾಗ ಚೈತನ್ಯ ಕೊನೆಯದಾಗಿ ‘ಕಸ್ಟಡಿ’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ತಯಾರಾದ ಈ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಯಶಸ್ವಿಯಾಗಲಿಲ್ಲ. ಸದ್ಯ ಚಂದು ಮೊಂಡೇಟಿ ನಿರ್ದೇಶನದಲ್ಲಿ ಸಿನಿಮಾ ಮಾಡಲಿದ್ದಾರೆ. ಮೀನುಗಾರರ ಕಥಾವಸ್ತುವನ್ನು ಇಟ್ಟುಕೊಂಡು ಈ ಚಿತ್ರ ತಯಾರಾಗುತ್ತಿದೆ. ಜಿಎ2 ಪಿಕ್ಚರ್ಸ್ ಸಂಸ್ಥೆ ಈ ಚಿತ್ರವನ್ನು ನಿರ್ಮಿಸಲಿದೆ. ಅದ್ಧೂರಿ ಬಜೆಟ್‌ನಲ್ಲಿ ಮಹತ್ವಾಕಾಂಕ್ಷೆಯ ಈ ಸಿನಿಮಾವನ್ನು ಬನ್ನಿ ವಾಸು ನಿರ್ಮಿಸಲಿದ್ದಾರೆ. ಸದ್ಯ ಈ ಸಿನಿಮಾದ ಪ್ರಿ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net