ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್‌ಗೆ ಕ್ಯಾನ್ಸರ್? ಜಾಮೀನು ವಿಸ್ತರಣೆ ಅರ್ಜಿಯ ಕುರಿತು ಅತಿಶಿ ಹೇಳಿದ್ದೇನು?

2 Min Read
delhi

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಕ್ಯಾನ್ಸರ್‌ ಇದೇಯೇ ಎಂಬ ಅನುಮೂನ ಮೂಡಿದೆ.

ಇದನ್ನೂ ಓದಿ: ಚನ್ನಗಿರಿ ಲಾಕಪ್‌ ಡೆತ್‌ ಪ್ರಕರಣ: ಡಿವೈಎಸ್ಪಿ ಸೇರಿ ಮೂವರು ಪೊಲೀಸ್‌ ಅಧಿಕಾರಿಗಳ ಸಸ್ಪೆಂಡ್

ದೆಹಲಿ ಸಚಿವೆ ಆತಿಶಿ ಅವರು ಅರವಿಂದ್​ ಕೇಜ್ರಿವಾಲ್‌ ಅವರ ಆರೋಗ್ಯದ ಕುರಿತು ನೀಡಿರುವ ಹೊಸ ಮಾಹಿತಿಯು ಇಂಥದ್ದೊಂದು ಪ್ರಶ್ನೆ ಮೂಡುವಂತಾಗಿದೆ. ಹಾಗಾಗಿ, ಜೂನ್‌ 2ರಂದು ದೆಹಲಿ ಮುಖ್ಯಮಂತ್ರಿ ಮತ್ತೆ ಜೈಲಿಗೆ ಹೋಗುವುದಿಲ್ಲ ಎಂದು ಹೇಳಲಾಗುತ್ತಿದೆ.

ಕೇಜ್ರಿವಾಲ್ ಅವರ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಅವರ ಕೇಟೊನ್​ ಪ್ರಯಾಣವು ಹೆಚ್ಚಾಗಿದೆ. ಹಠಾತ್ ತೂಕ ನಷ್ಟವಾಗುವುದು, ಜಾಸ್ತಿಯಾಗುವುದನ್ನು ನೋಡಿದರೆ ಅವರಿಗೆ ಕಿಡ್ನಿ ಸಮಸ್ಯೆ ಅಥವಾ ಕ್ಯಾನ್ಸರ್ ಸೇರಿದಂತೆ ಕೆಲವು ಗಂಭೀರ ಕಾಯಿಲೆ ಇರುವ ಸಾಧ್ಯತೆ ಇದೆ. ಇದರಿಂದ ಅರವಿಂದ್‌ ಕೇಜ್ರಿವಾಲ್‌ ಅವರು ಜೂನ್‌ 2ರಂದು ಜೈಲಿಗೆ ಹೋಗುವ ಬದಲು ಜೂನ್‌ 9ರಂದು ತೆರಳುವ ಕುರಿತು ನ್ಯಾಯಾಲಯಕ್ಕೆ ಮನವಿ ಮಾಡಿದೆ. ಅವರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡುವಂತೆ ಕೋರಲಾಗಿದೆ” ಎಂಬುದಾಗಿ ಆತಿಶಿ ಹೇಳಿದರು.

ಮಧ್ಯಂತರ ಜಾಮೀನು ಪಡೆದಿರುವ ಕೇಜ್ರಿವಾಲ್‌ ಅವರು ಜೂನ್‌ 2ರಂದು ಜೈಲಾಧಿಕಾರಿಗಳಿಗೆ ಶರಣಾಗಬೇಕಿದೆ. ಇದಕ್ಕೂ ಮೊದಲು ಕೂಡ ಕೇಜ್ರಿವಾಲ್‌ ಅವರ ಆರೋಗ್ಯದ ಬಗ್ಗೆ ಆಪ್‌ ನಾಯಕರು ಕಳವಳ ವ್ಯಕ್ತಪಡಿಸಿದ್ದರು.

See also  ಜನರ ಹಿತಕ್ಕೆ ನಮೋ ದಿಟ್ಟ ಹೆಜ್ಜೆ

ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವಾಗ ಕೆಲವು ಷರತ್ತುಗಳನ್ನು ವಿಧಿಸಿದ ಸುಪ್ರೀಂ ಕೋರ್ಟ್, ಅವರು ಯಾವುದೇ ಸಾಕ್ಷಿಗಳೊಂದಿಗೆ ಸಂವಹನ ನಡೆಸುವುದಿಲ್ಲ ಅಥವಾ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಅಧಿಕೃತ ಫೈಲ್‌ಗಳಿಗೆ ಪ್ರವೇಶವನ್ನು ಹೊಂದಿರುವುದಿಲ್ಲ ಎಂದು ಹೇಳಿದರು.

ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಕೆಲವೊಂದು ಷರತ್ತುಗಳನ್ನು ವಿಧಿಸಿ ಮಧ್ಯಂತ ಜಾಮೀನು ನೀಡಿತ್ತು. ಹೌದು. ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಜೂನ್ 1 ರವರೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ ನಂತರ ಅರವಿಂದ್ ಕೇಜ್ರಿವಾಲ್ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದರು.

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ದೆಹಲಿ ಮದ್ಯ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಇಡಿ ಬಂಧಿಸಿತ್ತು. ಕೇಜ್ರಿವಾಲ್ ತಮ್ಮ ಬಂಧನವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಇತ್ತೀಚೆಗೆ ಸುಪ್ರೀಂ ಕೋರ್ಟ್ ಕೇಜ್ರಿವಾಲ್‌ಗೆ ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಮೇ 10 ರಿಂದ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದೆ. ಮೇ 17 ರಂದು, ಜಾರಿ ನಿರ್ದೇಶನಾಲಯ (ಇಡಿ) ಕೇಜ್ರಿವಾಲ್ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು. ಈ ವೇಳೆ ಸಾಮಾನ್ಯ ಜಾಮೀನಿಗಾಗಿ ಕೆಳ ನ್ಯಾಯಾಲಯವನ್ನು ಸಂಪರ್ಕಿಸಲು ನ್ಯಾಯಾಲಯ ಅವರಿಗೆ ಅನುಮತಿ ನೀಡಿತ್ತು.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವಾಘಾ ಗಡಿ ಓಪನ್​: ಪಂಜಾಬ್​ ಮಾಜಿ ಸಿಎಂ!

Share This Article