20.4 C
Bengaluru
Sunday, January 19, 2020

ಈಸ್ ಆಫ್ ಡೂಯಿಂಗ್ ಬಿಸಿನೆಸ್ ವರ್ಲ್ಡ್‌ ರ‍್ಯಾಂಕಿಂಗ್​ಗೆ ಬೆಂಗಳೂರು ಆಯ್ಕೆ; ನ್ಯೂಜಿಲ್ಯಾಂಡ್ ತಂಡದಿಂದ ಐದು ದಿನದ ಕಾರ್ಯಾಗಾರ

Latest News

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಆಯುಷ್ಮಾನ್ ಭಾರತಕ್ಕೆ ಅನಾರೋಗ್ಯ

ಶಂಕರ ಶರ್ಮಾ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಸೇವಾ ಕೇಂದ್ರವು ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿದ್ದು,...

ಬೆಂಗಳೂರು: ಭಾರತದ ಈಸ್ ಆಫ್ ಡೂಯಿಂಗ್ ವರ್ಲ್ಡ್‌ ರ‍್ಯಾಂಕಿಂಗ್​ ಹೆಚ್ಚಿಸಿಕೊಳ್ಳುವ ಕುರಿತು ನ್ಯೂಜಿಲ್ಯಾಂಡ್ ದೇಶದ ಹೈ ಕಮಿಷನ್ ತಂಡ ಬೆಂಗಳೂರಿನ ಖನಿಜ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ಐದು ದಿನದ ಕಾರ್ಯಾಗಾರ ಶುಕ್ರವಾರ ಮುಕ್ತಾಯಗೊಂಡಿತು.

ಈಸ್ ಆಫ್ ಡೂಯಿಂಗ್ ಬಿಸಿನೆಸ್ ವರ್ಲ್ಡ್‌ ರ‍್ಯಾಂಕಿಂಗ್​ಗೆ ಈ ಬಾರಿ ಬೆಂಗಳೂರು ಆಯ್ಕೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಈಸ್ ಆಫ್ ಡೂಯಿಂಗ್ ಬಿಸಿನೆಸ್‍ನನ್ನು ಸುಲಲಿತಗೊಳಿಸುವ ಉದ್ದೇಶದಿಂದ ಈಸ್ ಆಪ್ ಡೂಯಿಂಗ್ ವರ್ಲ್ಡ್‌ ರ‍್ಯಾಂಕಿಂಗ್​ನಲ್ಲಿ ಮೊದಲ ಸ್ಥಾನದಲ್ಲಿರುವ ನ್ಯೂಜಿಲ್ಯಾಂಡ್ ದೇಶದ ಹೈಕಮಿಷನ್ ತಂಡವನ್ನು ರಾಜ್ಯಕ್ಕೆ ಆಹ್ವಾನಿಸಲಾಗಿತ್ತು.

ನ್ಯೂಜಿಲ್ಯಾಂಡ್ ದೇಶದ ತಂಡದ ಪ್ರತಿನಿಧಿಗಳು ಐದು ದಿನಗಳ ಕಾಲ ಕಂದಾಯ, ಬಿಬಿಎಂಪಿ, ಬಿಡಿಎ, ಕೈಗಾರಿಕೆ ಸೇರಿ ಇತರೆ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡು ಹೊಸ ಉದ್ಯಮ ತೆರೆಯಲು ಪ್ರಸ್ತುತ ಇರುವ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು. ಜತೆಗೆ, ಈ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವ ಮಾರ್ಗದ ಬಗ್ಗೆಯೂ ಚರ್ಚೆ ನಡೆಯಿತು.

ಯಾವುದೇ ನೂತನ ಉದ್ಯಮ ಪ್ರಾರಂಭದ ಸಂದರ್ಭದಲ್ಲಿ ಸಿಂಗಲ್ ವಿಂಡೋ ವ್ಯವಸ್ಥೆ ಇರದ ಕಾರಣ ಏನೆಲ್ಲ ಸಮಸ್ಯೆ ಎದುರಿಸಲಾಗುತ್ತಿದೆ ಹಾಗೂ ಶೀಘ್ರ ಸಿಂಗಲ್ ವಿಂಡೋ ವ್ಯವಸ್ಥೆ ಜಾರಿಯ ಬಗ್ಗೆಯೂ ಕಾರ್ಯಾಗಾರದಲ್ಲಿ ಚರ್ಚಿಸಲಾಯಿತು.

ಕಾರ್ಯಾಗಾರದ ಕೊನೆಯ ದಿನವಾದ ಶುಕ್ರವಾರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ ನ್ಯೂಜಿಲ್ಯಾಂಡ್ ಹೈಕಮಿಷನ್ ತಂಡವನ್ನು ಅಭಿನಂದಿಸಿ, ಹೊಸ ಉದ್ಯಮಕ್ಕೆ ಬೇಕಾಗುವ ಎಲ್ಲ ವ್ಯವಸ್ಥೆಯನ್ನು ಆನ್‍ಲೈನ್ ವ್ಯಾಪ್ತಿಗೆ ತರಲಾಗುವುದು. ಇದರಿಂದ ಶೀಘ್ರವಾಗಿ ಉದ್ಯಮ ತೆರೆಯುವ ಜತೆಗೆ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಯೂ ಹೆಚ್ಚಾಗಲಿದೆ ಎಂದು ಅಭಿಪ್ರಾಯ ಪಟ್ಟರು.

ಐದು ದಿನದ ಕಾರ್ಯಾಗಾರದಲ್ಲಿ ಕಲಿತ ಅಷ್ಟು ವಿಚಾರಗಳನ್ನು ಆಡಳಿತದಲ್ಲಿ ಅಳವಡಿಸಿಕೊಂಡು ಪಾರದರ್ಶಕ ಸೇವೆ ನೀಡುವಂತೆ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು. ಈಸ್ ಆಫ್ ಡೂಯಿಂಗ್ ಬಿಸಿನೆಸ್‍ನಲ್ಲಿ ಕರ್ನಾಟಕ ಮೊದಲ ಸ್ಥಾನಕ್ಕೆ ತೆಗೆದುಕೊಂಡು ಹೋಗುವುದೇ ಈ ಕಾರ್ಯಾಗಾರದ ಮೂಲ ಉದ್ದೇಶ ಎಂದು ಹೇಳಿದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...