More

  ಪ್ರಕಾಶ್​ ರಾಜ್​ ಬಿಜೆಪಿ ಸೇರ್ಪಡೆ; ಬಹುಭಾಷಾ ನಟ ಹೇಳಿದ್ದಿಷ್ಟು

  ಬೆಂಗಳೂರು: ಬಹುಭಾಷಾ ನಟ ಪ್ರಕಾಶ್​ ರಾಜ್​ ಸಿನಿಮಾ ಮಾತ್ರವಲ್ಲದೇ ರಾಜಕೀಯದಲ್ಲೂ ಸಕ್ರಿಯರಾಗಿದ್ದು, ಅನೇಕ ಸಂದರ್ಭಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವನ್ನು ತಮ್ಮದೇ ಶೈಲಿಯಲ್ಲಿ ಟೀಕಿಸಿದ್ದಾರೆ. ಕೇಂದ್ರ ಸರ್ಕಾರದ ಕಾಯ್ದೆ ಹಾಗೂ ನಿಲುವುಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವ ನಟ ಪ್ರಕಾಶ್​ ರಾಜ್​ ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ವದಂತಿ ರಾಜಕೀಯ ಹಾಗೂ ಸಿನಿಮಾ ವಲಯದಲ್ಲಿ ವ್ಯಾಪಕವಾಗಿ ಹರಿದಾಡಿದೆ.

  ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ ಈ ಸುದ್ದಿ ನಟ ಪ್ರಕಾಶ್​ ರಾಜ್​ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಪೋಸ್ಟ್​ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್​ ಆಗುತ್ತಿದೆ.

  ಇದನ್ನೂ ಓದಿ: ನೋಡ ನೋಡುತ್ತಿದ್ದಂತೆ ಮಾವುತನನ್ನು ತುಳಿದು ಸಾಯಿಸಿದ ಹೆಣ್ಣಾನೆ

  ಖ್ಯಾತ ನಟ ಪ್ರಕಾಶ್​ ರಾಜ್​ ಅವರು ಇಂದು ಮಧ್ಯಾಹ್ನ 3 ಗಂಟೆಗೆ ಭಾರತೀಯ ಜನತಾ ಪಕ್ಷಕ್ಕೆ ಸೇರುತ್ತಾರೆ’ ಎಂದು ವ್ಯಕ್ತಿಯೊಬ್ಬರು ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ನಟ ಪ್ರಕಾಶ್​ ರಾಜ್​ ಅವರು ಪ್ರಯತ್ನಿಸಿದ್ದಾರೆ ಅಂತ ನಾನು ಭಾವಿಸಿದ್ದೇನೆ. ನನ್ನನ್ನು ಕೊಂಡುಕೊಳ್ಳುವಷ್ಟು ಅವರು ಸೈದ್ಧಾಂತಿಕವಾಗಿ ಶ್ರೀಮಂತವಾಗಿಲ್ಲ ಎಂಬುದು ಅವರಿಗೆ ಅರ್ಥ ಆಗಿರಬೇಕು. ನಿಮಗೆ ಏನು ಅನಿಸುತ್ತೆ ಸ್ನೇಹಿತರೇ. ಜಸ್ಟ್​ ಆಸ್ಕಿಂಗ್​ ಎಂದು ಪ್ರತಿಕ್ರಿಯಿಸಿದ್ದಾರೆ.

  ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ನಿರಂತರವಾಗಿ ಟೀಕಿಸಿರುವ ನಟ ಪ್ರಕಾಶ್​ ರಾಜ್​ ಹಲವು ಸಂದರ್ಭದಲ್ಲಿ ಟ್ವೀಟ್​ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಆಗುತ್ತಿರುವ ಈ ಸಂದರ್ಭದಲ್ಲೂ ಕೂಡ ಅವರು ಸರಣಿ ಪೋಸ್ಟ್​ ಮೂಲಕ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ. ಕೇಂದ್ರದಿಂದ ಕರ್ನಾಟಕಕ್ಕೆ ಸೂಕ್ತ ಅನುದಾನ ಸಿಕ್ಕಿಲ್ಲ ಎಂದು ಕಿಡಿಕಾರಿದ್ದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ನಟ ಪ್ರಕಾಶ್​ ರಾಕ್​ ಬೆಂಗಳೂರು ಕೇಂದ್ರದಿಂದ ಸ್ಪರ್ಧಿಸಿ ಸೋಲುಂಡಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts